ಮಂಗಳವಾರ, ಡಿಸೆಂಬರ್ 12, 2023
ಜನನ-ಮರಣ ನೋಂದಣಿ ಪ್ರಗತಿ ಸಾಧಿಸಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ
ಬಳ್ಳಾರಿ,ಡಿ.12(ಕರ್ನಾಟಕ ವಾರ್ತೆ):
ಗ್ರಾಮ ಪಂಚಾಯತ್ ಮಟ್ಟದಲ್ಲಿ ಆಗುವ ಜನನ-ಮರಣ ಅಂಕಿ-ಅಂಶಗಳನ್ನು ಶೇ.100ರಷ್ಟು ನೋಂದಣಿ ಮಾಡುವುದರ ಮೂಲಕ ಪ್ರಗತಿ ಸಾಧಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಜನನ-ಮರಣ ನೋಂದಣಿ ಕುರಿತು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಮಂಗಳವಾರ ಹಮ್ಮಿಕೊಂಡಿದ್ದ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳನ್ನು ಜನನ-ಮರಣ ನೋಂದಣಿಯ ಉಪ ನೋಂದಣಾಧಿಕಾರಿಗಳನ್ನಾಗಿ ನೇಮಿಸಿರುವುದರಿಂದ ಇ-ಜನ್ಮ ತಂತ್ರಾಂಶದ ಮೂಲಕ ಸಾರ್ವಜನಿಕರಿಗೆ ಜನನ ಹಾಗೂ ಮರಣ ಪ್ರಮಾಣ ಪತ್ರ ನಿಗಧಿತ ಕಾಲಾವಧಿಯಲ್ಲಿ ಪೂರೈಸಲು ಕ್ರಮ ವಹಿಸಬೇಕು ಹಾಗೂ ಜನನ-ಮರಣ ನೋಂದಣಿ ಕಾಯ್ದೆಯ ಅನುಸಾರವಾಗಿಯೇ ಕಾರ್ಯ ನಿರ್ವಹಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ವಾಗೀಶ್ ಶಿವಾಚಾರ್ಯ ಎಸ್.ಎಮ್ ಅವರು ಮಾತನಾಡಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ಹೆಚ್ಚುವರಿಯಾಗಿ ಈ ಜವಾಬ್ದಾರಿಯನ್ನು ವಹಿಸಿದ್ದು, ಅವರು ಭಾರವೆಂದು ಭಾವಿಸದೇ ನಿಯಮಾನುಸಾರ ಗ್ರಾಮೀಣ ಭಾಗದಲ್ಲಿ ಘಟಿಸುವ ಜನನ-ಮರಣ ಘಟನೆಗಳನ್ನು ನಿಗಧಿತ ಕಾಲಾವಧಿಯೊಳಗೆ ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿ ಮಾಡುವ ಮೂಲಕ ಶೇ.100ರಷ್ಟು ಪ್ರಗತಿ ಸಾಧಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ರಾಕೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಜನನ-ಮರಣ ಘಟನೆಗಳನ್ನು ಇ-ಜನ್ಮ ತಂತ್ರಾಂಶದಲ್ಲಿ ನೋಂದಣಿ ಮಾಡುವ ಕುರಿತು ಕೂಲಂಕುಶವಾಗಿ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಿಗೆ ತಾಂತ್ರಿಕ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.
------------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)





ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ