ಸೋಮವಾರ, ಡಿಸೆಂಬರ್ 4, 2023

ತಾಯಿ, ಮಗ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಡಿ.04(ಕರ್ನಾಟಕ ವಾರ್ತೆ): ಸಿರುಗುಪ್ಪ ಪಟ್ಟಣದ ಆದೋನಿ ರಸ್ತೆಯ ರಾಜೇಶ್ವರಿ ಲೇಔಟ್ ನಿವಾಸಿ ಇಂದ್ರಜಾ ಎನ್ನುವ 32 ವರ್ಷದ ತಾಯಿ ಹಾಗೂ ಹರ್ಷವರ್ಧನ ಎನ್ನುವ 11 ವರ್ಷದ ಬಾಲಕ ಸೇರಿ ಇಬ್ಬರೂ ನ.29ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೆÇಲೀಸ್ ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಕಾಣೆಯಾದ ತಾಯಿ ಇಂದ್ರಜಾ ಚಹರೆ ಗುರುತು: ಎತ್ತರ 5.3 ಅಡಿ, ದಪ್ಪನೆಯ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ನೀಲಿ ಬಣ್ಣದ ಸೀರೆ, ನೀಲಿ ಬಣ್ಣದ ಕುಪ್ಪನ ಧರಿಸಿರುತ್ತಾಳೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾಳೆ. ಮಗ ಹರ್ಷವರ್ಧನ ಮಗ ಚಹರೆ ಗುರುತು: ಎತ್ತರ 3 ಅಡಿ, ದಪ್ಪನೆಯ ಮೈಕಟ್ಟು, ಗೋಧಿ ಮೈಬಣ್ಣ, ದುಂಡು ಮುಖ ಹೊಂದಿದ್ದು, ನಸಿ ಕಲರ್ ಟೀ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಕನ್ನಡ, ತೆಲುಗು ಭಾಷೆ ಮಾತನಾಡುತ್ತಾನೆ. ಮೇಲ್ಕಂಡ ಚಹರೆಯುಳ್ಳ ತಾಯಿ ಮತ್ತು ಮಗನ ಬಗ್ಗೆ ಮಾಹಿತಿ ದೊರೆತಲ್ಲಿ ಸಿರುಗುಪ್ಪ ಪೆÇಲೀಸ್ ಠಾಣೆಯ ಪಿ.ಎಸ್.ಐ ದೂ.08396-220333, ಸಿರುಗುಪ್ಪ ವೃತ್ತ ಸಿ.ಪಿ.ಐ ದೂ.08396-220003, ಸಿರುಗುಪ್ಪ ಉಪವಿಭಾಗ ಡಿ.ಎಸ್.ಪಿ ದೂ.08392-276000 ಹಾಗೂ ಬಳ್ಳಾರಿ ಎಸ್.ಪಿ ದೂ.08932-258400, ಬಳ್ಳಾರಿ ಕಂಟ್ರೋಲ್ ರೂಂ.08392-258100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ