ಸೋಮವಾರ, ಡಿಸೆಂಬರ್ 4, 2023

*ಅಪರಿಚಿತ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗಾಗಿ ಮನವಿ*

ಬಳ್ಳಾರಿ,ಡಿ.04(ಕರ್ನಾಟಕ ವಾರ್ತೆ): ಬಳ್ಳಾರಿ ರೈಲ್ವೇ ನಿಲ್ದಾಣದ ಜನರಲ್ ರಿಸರ್‍ವೇಶನ್ ಟಿಕೇಟ್ ಕೌಂಟರ್ ಮುಂಭಾಗದಲ್ಲಿ ಸುಮಾರು 40 ರಿಂದ 45 ವರ್ಷದ ಅಪರಿಚಿತ ವ್ಯಕ್ತಿಯು ಡಿ.01ರಂದು ಮೃತಪಟ್ಟಿದ್ದು, ವಾರಸುದಾರರು ಪತ್ತೆಯಾಗಿರುವುದಿಲ್ಲ. ಚಹರೆ ಗುರುತು: ಎತ್ತರ ಸುಮಾರು 5.6 ಅಡಿ, ಸಾಧಾರಣ ಮೈಕಟ್ಟು, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲುಮುಖ, ಸಣ್ಣ ಕಿವಿಗಳು, ಉದ್ದನೆಯ ಮೂಗು, ತಲೆಯಲ್ಲಿ ಸುಮಾರು 1 ರಿಂದ 2 ಇಂಚು ಉದ್ದದ ಬಿಳಿ ಮಿಶ್ರಿತ ಕಪ್ಪು ಕೂದಲು, ಬಿಳಿ ಮಿಶ್ರಿತ ಗಡ್ಡ ಮತ್ತು ಮೀಸೆ ಬಿಟ್ಟಿರುತ್ತಾನೆ. ಮೃತನ ಮೈ ಮೇಲಿನ ಬಟ್ಟೆಗಳು: ಕರಿ ನೀಲಿ ಬಣ್ಣದ ಚೆಕ್ಸ್ ಅಂಗಿ, ಬೂದು ಬಣ್ಣದ ಗೆರೆಗಳುಳ್ಳ ಪ್ಯಾಂಟ್ ಧರಿಸಿರುತ್ತಾನೆ. ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ರೈಲ್ವೇ ಪೆÇಲೀಸ್ ಠಾಣೆಯ ಪೆÇಲೀಸ್ ಉಪನಿರೀಕ್ಷಕರ ಮೊ.9480802131, ರಾಯಚೂರು ರೈಲ್ವೇ ಪೆÇಲೀಸ್ ಠಾಣೆಯ ಪೆÇಲೀಸ್ ವೃತ್ತ ನಿರೀಕ್ಷಕರ ಮೊ.9480800471 ಗೆ ಸಂಪರ್ಕಿಸಬಹುದು ಎಂದು ಬಳ್ಳಾರಿ ರೈಲ್ವೇ ಪೆÇಲೀಸ್ ಠಾಣೆಯ ಉಪನಿರೀಕ್ಷಕರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ