ಶುಕ್ರವಾರ, ಡಿಸೆಂಬರ್ 15, 2023
ಪೆÇೀಷಕರು ಮಕ್ಕಳನ್ನು ದುಡಿಮೆಗೆ ಕಳುಹಿಸುವುದು ಕಾನೂನು ಅಪರಾಧ: ನ್ಯಾ.ರಾಜೇಶ್ ಎನ್.ಹೊಸಮನಿ
ಬಳ್ಳಾರಿ, ಡಿ.15(ಕರ್ನಾಟಕ ವಾರ್ತೆ):
ರಾಜ್ಯದಲ್ಲಿ ಬಾಲಕಾರ್ಮಿಕ ಪದ್ದತಿ ಇವತ್ತಿಗೂ ಅನುಷ್ಠಾನದಲ್ಲಿರುವುದು ತುಂಬಾ ದುಃಖದ ಸಂಗತಿ, ಸರ್ಕಾರ ಸಾಕಷ್ಟು ಮಕ್ಕಳಿಗೆ ಸೌಲಭ್ಯಗಳನ್ನು ನೀಡಿದರೂ, ಪೆÇೀಷಕರು ಮಕ್ಕಳನ್ನು ದುಡಿಮೆಗೆ ಕಳುಹಿಸುತ್ತಿರುವುದು ಕಾನೂನು ಪ್ರಕಾರ ಅಪರಾಧ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರ ಸಂಯುಕ್ತಾಶ್ರಯದಲ್ಲಿ ಪಾನ್ ಇಂಡಿಯಾ ಬಾಲಕಾರ್ಮಿಕ ರಕ್ಷಣೆ ಹಾಗೂ ಪುನರ್ವಸತಿ ಆಂದೋಲನ ಹಾಗೂ ವಿಶ್ವ ಮಾನವ ಹಕ್ಕುಗಳ ದಿನ ಅಂಗವಾಗಿ ಮಹಮ್ಮದೀಯ ಕಾಲೇಜಿನ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಕಾನೂನು ಅರಿವು ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮಕ್ಕಳನ್ನು ದುಡಿಸಿಕೊಳ್ಳುತ್ತಿರುವ ಮಾಲೀಕರಿಗೆ ಕಾನೂನು ಕಠಿಣ ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ಸಂವಿಧಾನದಲ್ಲಿ ಹಕ್ಕುಗಳು ನೀಡಿರುವುದರಿಂದ ಆ ಹಕ್ಕುಗಳನ್ನು ಅನುಭವಿಸಲು ಪೆÇೀಷಕರು ಮತ್ತು ಮಾಲೀಕರು ಸಹಕರಿಸಬೇಕು ಎಂದು ತಿಳಿಸಿದರು.
ಶಾಲಾಶಿಕ್ಷಣ ಇಲಾಖೆಯ ಉಪನಿರ್ದೇಶಕಿ ಬಿ.ಉಮಾದೇವಿ ಅವರು ಮಾತನಾಡಿ, ಸರ್ವರಿಗೂ ಶಿಕ್ಷಣ ನೀಡುವುದು ನಮ್ಮ ಇಲಾಖೆಯ ಜವಬ್ದಾರಿ ಹಾಗೂ ಶಿಕ್ಷಣದಿಂದ ವಂಚಿತರಾಗುವ ಮಕ್ಕಳಿಗೊಸ್ಕರನೇ ಇಲಾಖೆಯಲ್ಲಿ ವಸತಿ ಶಾಲೆಗಳನ್ನು ನಡೆಸಲಾಗುತ್ತಿದೆ. ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು. ಮುಖ್ಯವಾಗಿ ಹೆಣ್ಣು ಮಕ್ಕಳು ಶಿಕ್ಷಣದಿಂದ ವಂಚಿತರಾಗದೇ ಶಿಕ್ಷಣವನ್ನು ಪಡೆದುಕೊಂಡು ತಮ್ಮ ಜೀವನವನ್ನು ಉತ್ತಮ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಕಾರ್ಮಿಕ ಅಧಿಕಾರಿ ಕಮಲ್ ಅಲ್ತಾಫ್ ಅಹಮದ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಮಕ್ಕಳನ್ನು ದುಡಿಸಿಕೊಳ್ಳುತ್ತಿರುವ ಉದ್ದಿಮೆಗಳ ಮೇಲೆ ಜಿಲ್ಲಾ ಹಾಗೂ ತಾಲೂಕು ಟಾಸ್ಲ್ ಪೆÇೀರ್ಸ್ ಸಮಿತಿಗಳ ಮುಖಾಂತರ ನಿರಂತರವಾಗಿ ಕಾರ್ಯಚರಣೆ ನಡೆಸಿ, ಸುಮಾರು ಬಾಲಕಾರ್ಮಿಕ ಮಕ್ಕಳನ್ನು ರಕ್ಷಿಸಿ ಪುನರ್ವಸತಿಗೊಳಿಸಲಾಗಿದೆ ಹಾಗೂ ಮಾಲೀಕರ ವಿರುದ್ದ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಕಿವಿ ಮಾತು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ ತ್ರಿವೇಣಿ ಪತ್ತಾರ್ ಅವರು ಮಾತನಾಡಿ, ಮಕ್ಕಳಿಗೆ ಇರುವ ಕಾನೂನುಗಳಾದ ಬಾಲಕಾರ್ಮಿಕ ನಿಷೇಧ ಹಾಗೂ ನಿಯಂತ್ರಣ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ, ಪೆÇೀಕ್ಸೋ ಕಾಯ್ದೆ ಮತ್ತು ಬಾಲನ್ಯಾಯ ಕಾಯ್ದೆ ಕುರಿತು ವಿವರವಾಗಿ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗ ಮೂರ್ತಿ, ಕಾರ್ಮಿಕ ನಿರೀಕ್ಷಕ ರವಿದಾಸ್, ಕಾಲೇಜಿನ ವ್ಯವಸ್ಥಾಪಕ ನಿರ್ದೇಶಕ ಮೊಹಮ್ಮದ್ ಮುಜಮ್ಮೀಲ್, ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್, ಮಕ್ಕಳ ರಕ್ಷಣಾ ಘಟಕ ಸಿಬ್ಬಂದಿ ನಿಲೋಫಿಯಾ, ಶಾಲಾ ಉಪನ್ಯಾಸಕರಾದ ನುಜಹತ್ ಫಾತಿಮಾ ಸೇರಿದಂತೆ ಮತ್ತಿತರು ಉಪಸ್ಥಿತರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ