ಮಂಗಳವಾರ, ಡಿಸೆಂಬರ್ 31, 2024
ಬಳ್ಳಾರಿ: ಜಿಲ್ಲಾ ಆರೋಗ್ಯ ಸಂಘ ಸಭೆಯಲ್ಲಿ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ ಸೂಚನೆ | ರಾಷ್ಟಿçÃಯ ಗುಣಮಟ್ಟ ಭರವಸೆ ಮಾನದಂಡಗಳ ಅಡಿ ಆರೋಗ್ಯ ಕೇಂದ್ರಗಳ ಪ್ರಮಾಣೀಕರಣ ಕಡ್ಡಾಯ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
ಜಿಲ್ಲೆಯ ಎಲ್ಲ ಆರೋಗ್ಯ ಕೇಂದ್ರಗಳನ್ನು ರಾಷ್ಟಿçÃಯ ಗುಣಮಟ್ಟ ಭರವಸೆ ಮಾನದಂಡಗಳ ಅಡಿ ಪ್ರಮಾಣೀಕರಣಕ್ಕೆ ಕಡ್ಡಾಯವಾಗಿ ಒಳಪಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರು ಅವರು ವೈದ್ಯಾಧಿಕಾರಿಗಳಿಗೆ ಸೂಚಿಸಿದರು.
ನಗರದ ಜಿಲ್ಲಾ ಪಂಚಾಯತ್‌ನ ವಿಡಿಯೋ ಸಂವಾದ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಿದ್ದ ಜಿಲ್ಲಾ ಆರೋಗ್ಯ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಸರ್ಕಾರದ ಮಟ್ಟದಲ್ಲಿ ಸಮುದಾಯಕ್ಕೆ ನೀಡುವ ಆರೋಗ್ಯ ಸೇವೆಗಳು ಗುಣಮಟ್ಟವಾಗಿರಲು ಎಲ್ಲ ಹಂತದಲ್ಲಿ ಪ್ರಮಾಣೀಕರಿಸಬೇಕು ಎಂದು ಅವರು ಹೇಳಿದರು.
ಜಿಲ್ಲೆಯ ಆಯುಷ್ಮಾನ ಆರೋಗ್ಯ ಮಂದಿರಗಳು (ಉಪಕೇಂದ್ರಗಳು), ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಸಮುದಾಯ ಆರೋಗ್ಯ ಕೇಂದ್ರಗಳು, ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳನ್ನು ವೈದ್ಯಾಧಿಕಾರಿಗಳು ತಮ್ಮ ಮುಂದಾಳತ್ವದಲ್ಲಿ ರಾಷ್ಟಿçÃಯ ಗುಣಮಟ್ಟ ಭರವಸೆ ಮಾನದಂಡಗಳ ಅಡಿಯಲ್ಲಿ ಪ್ರಮಾಣೀಕರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಂಡು ಸಾರ್ವಜನಿಕ ಆಸ್ಪತ್ರೆಗಳ ವಿಶ್ವಾಸಾರ್ಹತೆಯನ್ನು ಹೆಚ್ಚಿಸುವ ಮಹತ್ವ ಪೂರ್ಣ ಕಾರ್ಯ ಕೈಗೊಳ್ಳಬೇಕು ಎಂದರು.
ಜಿಲ್ಲೆಯ ಸಂಡೂರು, ಕಂಪ್ಲಿ, ಸಿರುಗುಪ್ಪ, ಬಳ್ಳಾರಿ ಮತ್ತು ಕುರುಗೋಡು ತಾಲ್ಲೂಕು ಒಳಗೊಂಡAತೆ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ಮೂಲಭೂತ ಸೌಕರ್ಯ, ಔಷಧಿಗಳ ಲಭ್ಯತೆ, ದಾಖಲಾತಿ ನಿರ್ವಹಣೆ, ವೈದ್ಯಕೀಯ ತ್ಯಾಜ್ಯ ವಿಲೇವಾರಿ, ತಾಯಿ ಮಗುವಿನ ಆರೈಕೆ, ಕುಟುಂಬ ಕಲ್ಯಾಣ ಸೇವೆಗಳು, ಸಾಂಕ್ರಾಮಿಕ ಅಸಾಂಕ್ರಾಮಿಕ ರೋಗಗಳ ನಿರ್ವಹಣೆ, ಪ್ರಯೋಗಾಲಯ ಸೇವೆಗಳು ಸೇರಿದಂತೆ ಮಾನದಂಡಗಳ ಅನುಗುಣವಾಗಿ ಸಮರೋಪಾದಿಯಲ್ಲಿ ಕ್ರಮವಹಿಸುವ ಮೂಲಕ ಮುಂಚೂಣಿ ಜಿಲ್ಲೆಯಾಗಿ ಮಾಡಲು ನಿಗಾವಹಿಸಬೇಕು ಎಂದು ತಿಳಿಸಿದರು.
*ಕುಷ್ಟರೋಗ:*
ಜಿಲ್ಲೆಯಲ್ಲಿ ಕುಷ್ಟರೋಗ ಪ್ರಕರಣಗಳ ನಿರ್ಮೂಲನೆಗಾಗಿ ಸಂಡೂರು ತಾಲ್ಲೂಕಿನ ಚೋರನೂರು ಮತ್ತು ಬಂಡ್ರಿ ವ್ಯಾಪ್ತಿಯಲ್ಲಿ ಹಾಗೂ ಪ್ರಕರಣಗಳು ಕಂಡು ಬಂದ ಗ್ರಾಮಗಳಲ್ಲಿ ಹೆಚ್ಚಿನ ಜಾಗೃತಿಯನ್ನು ಮನೆ ಭೇಟಿಯ ಮೂಲಕ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರ ಜೊತೆಗೆ ಪ್ರಕರಣಗಳನ್ನು ಶೂನ್ಯಕ್ಕೆ ತರಲು ಶ್ರಮಿಸುವಂತೆ ಸೂಚಿಸಿದರು.
*ಸಿಮಂತ ಕಾರ್ಯಕ್ರಮ ಹಮ್ಮಿಕೊಳ್ಳಿ:*
ಗ್ರಾಮೀಣ ಪ್ರದೇಶದಲ್ಲಿ ತಾಯಂದಿರ ಆರೈಕೆ ಕುರಿತು ಕುಟುಂಬದ ಸದಸ್ಯರಿಗೆ ಅದರಲ್ಲೂ ಚೊಚ್ಚಲು ಗರ್ಭಿಣಿ ಮತ್ತು ರಕ್ತದೊತ್ತಡ, ಮೊದಲ ಹೆರಿಗೆ ಸಿಜೇರಿಯನ್, ರಕ್ತಹೀನತೆ, ಬಹುದಿನಗಳ ನಂತರ ಗರ್ಭಿಣಿಯಾಗಿರುವುದು ಮುಂತಾದವುಗಳ ಸನ್ನಿವೇಶದಲ್ಲಿ ಕುಟುಂಬ ಸದಸ್ಯರು ವಹಿಸಬೇಕಾದ ಕಾಳಜಿ ಹಾಗೂ ತಪಾಸಣೆಗಳು, ಟಿಡಿ ಚುಚ್ಚುಮದ್ದು, ಕಬ್ಬಿಣಾಂಶ ಮಾತ್ರೆಗಳ ಸೇವನೆ, ಹೆರಿಗೆ ನಂತರ ಮಕ್ಕಳಿಗೆ ನೀಡುವ 12 ಮಾರಕ ರೋಗಗಳ ಲಸಿಕೆ ಕುರಿತು ಗ್ರಾಮ ಮಟ್ಟದಲ್ಲಿ ಸಿಮಂತ ಕಾರ್ಯಕ್ರಮ ಏರ್ಪಡಿಸಿ ಜಾಗೃತಿ ನೀಡಲು ಕ್ರಿಯಾಯೋಜನೆ ರೂಪಿಸಬೇಕು. ನಿರಂತರ ನಿಗಾವಣೆಗಾಗಿ ಸಾಮಾಜಿಕ ಜಾಲತಾಣದಲ್ಲಿ ಆಪ್ ಆಧಾರಿತ ಸೇವೆ ಸಿದ್ದಪಡಿಸಿಕೊಳ್ಳಲು ಸೂಚಿಸಿದರು.
*ಕ್ಷಯರೋಗ ಪತ್ತೆ ಮತ್ತು ಚಿಕಿತ್ಸೆ; 100 ದಿನಗಳ ಅಭಿಯಾನ:*
ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಎರಡು ವಾರಕ್ಕಿಂತ ಹೆಚ್ಚು ದಿನಗಳ ಕೆಮ್ಮು ಇರುವ ಹಾಗೂ ಕ್ಷಯರೋಗದ ಇತರೆ ಲಕ್ಷಣಗಳ ಕುರಿತು ಮಾಹಿತಿ ನೀಡಿ ಹ್ಯಾಂಡ್‌ಹೊಲ್ಡ್ ಎಕ್ಸ್-ರೇ ಯಂತ್ರವನ್ನು ಸದುಪಯೋಗ ಪಡೆದು ಲಭ್ಯವಿರುವ ರೆಡಿಯೋಲಾಜಿಸ್ಟ್ ಮೂಲಕ ಎಕ್ಸ್-ರೆ ಪರಿಶೀಲಿಸಿ ಚಿಕಿತ್ಸೆ ನೀಡಬೇಕು. ಪ್ರತಿ ತಾಲ್ಲೂಕಿಗೆ ಒಂದರAತೆ ಹ್ಯಾಂಡ್‌ಹೊಲ್ಡ್ ಎಕ್ಸ್-ರೇ ಯಂತ್ರವನ್ನು ಸಜ್ಜುಗೊಳಿಸಲು ಅಗತ್ಯ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.
*ಗೃಹ ಆರೋಗ್ಯ:*
ಮಹಿಳೆಯರು ಸೇರಿದಂತೆ 30 ವರ್ಷ ಮೇಲ್ಪಟ್ಟ ಎಲ್ಲ ಸಾರ್ವಜನಿಕರು ರಕ್ತದೊತ್ತಡ ಪರೀಕ್ಷೆಯನ್ನು ಕೈಗೊಳ್ಳುವ ಮೂಲಕ ಮನೆ ಮಟ್ಟದಲ್ಲಿಯೇ ಔಷಧಿ ವಿತರಿಸುವ ಸರಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮವಾದ ಗೃಹ ಆರೋಗ್ಯ ಯೋಜನೆಯನ್ನು ಯಶಸ್ವಿಗೊಳಿಸಲು ತಿಳಿಸಿದರು.
ಜಿಲ್ಲೆಯಲ್ಲಿ ಈಗಾಗಲೇ ಗುರ್ತಿಸಲ್ಪಟ್ಟ ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ 14 ದಿನಗಳ ಕಾಲ ತರಬೇತಿ ಪಡೆದ ಸಿಬ್ಬಂದಿಯವರಿAದ ಕಂಪ್ಲಿ ಮತ್ತು ಸಿರುಗುಪ್ಪ ತಾಲ್ಲೂಕುಗಳ ಪೌಷ್ಟಿಕ ಪುನಶ್ಚೇತನ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ತಯಾರಿಕೆ ಕುರಿತು ಮಾಹಿತಿ ನೀಡಿ ಕೇಂದ್ರಗಳನ್ನು ಬಲಪಡಿಸಿ ಹೆಚ್ಚು ಹೆಚ್ಚು ಮಕ್ಕಳನ್ನು ದಾಖಲಿಸಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಡೆಂಗ್ಯು ನಿಯಂತ್ರಣಕ್ಕಾಗಿ ತಂಡಗಳನ್ನು ರಚಿಸಿ ಲಾರ್ವಾ ಸಮೀಕ್ಷೆ ನಿರಂತರವಾಗಿ ಕೈಗೊಳ್ಳಲು, ಕುಟುಂಬ ಕಲ್ಯಾಣ ತಾತ್ಕಾಲಿಕ ವಿಧಾನಗಳಾದ ನೋ-ಸ್ಕಾಲ್‌ಪೆಲ್ ವ್ಯಾಸೆಕ್ಟುಮಿ ವಿಧಾನವನ್ನು ಹೆಚ್ಚು ಜನಪ್ರಿಯಗೊಳಿಸಲು ಮತ್ತು ಅಂಗನವಾಡಿ ಕೇಂದ್ರಗಳಲ್ಲಿ ಪರೀಕ್ಷೆಗೆ ಒಳಪಟ್ಟ ಮಕ್ಕಳನ್ನು ಚಿಕಿತ್ಸೆ ಅಗತ್ಯವಿದ್ದಲ್ಲಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿರುವ ಡಿಇಐಸಿ ಕೇಂದ್ರಕ್ಕೆ ಕಳುಹಿಸಿ ಶಸ್ತçಚಿಕಿತ್ಸೆ ಹಾಗೂ ಅಗತ್ಯ ಸೌಲಭ್ಯಗಳನ್ನು ಒದಗಿಸಲು, ಶಾಲಾ ಮಕ್ಕಳ ಆರೋಗ್ಯ ಜಾಗೃತಿಯ ಆರೋಗ್ಯ ಸಿಂಚನದಡಿ ನಿರಂತರ ಜಾಗೃತಿ ನೀಡಲು, ಅಂಗಾAಗ ದಾನದಡಿ ಜಾಗೃತಿ ನೀಡಿ ನೋಂದಣಿ ಹೆಚ್ಚಿಸಲು, ಮಾನಸಿಕ ರೋಗಗಳ ಜಾಗೃತಿಗಾಗಿ 14416 ಉಚಿತ ಸಹಾಯವಾಣಿ ಸಂಖ್ಯೆ ಕುರಿತಾಗಿ ಸುಧೀರ್ಘ ಚರ್ಚೆ ನಡೆಸಿ ನಿರ್ದೇಶನ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ರೋಗವಾಹಕ ಆಶ್ರೀತ ನಿಯಂತ್ರಣ ಅಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವಿರೇಂದ್ರ ಕುಮಾರ್, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಬಾಯಿ ಆರೋಗ್ಯ ದಂತ ಕಾರ್ಯಕ್ರಮದ ಡಾ.ವಿಶಾಲಾಕ್ಷಿ, ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಡಾ.ಬಸವರಾಜ್ ದಮ್ಮೂರು, ಡಾ.ಭರತ್, ಡಾ.ಮಂಜುನಾಥ ಜವಳಿ, ಡಾ.ಅರುಣ ಕುಮಾರ್, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಡಾ.ಸುರೇಶ, ಡಿಎನ್‌ಒ ಗಿರೀಶ್, ಡಿಪಿಎಮ್ ವೆಂಕೋಬ ನಾಯ್ಕ, ಮನೋಹರ, ಬಸವರಾಜ್ ಸೇರಿದಂತೆ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ಇತರೆ ಇಲಾಖೆ ಸಿಬ್ಬಂದಿ ಹಾಜರಿದ್ದರು.
----------
ಜ.03 ರಂದು ವಿವಿಧ ಮಹನೀಯರ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
ಜಿಲ್ಲಾ ಕೇಂದ್ರದಲ್ಲಿ ಜ.14 ರಂದು ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, ಜ.19 ರಂದು ಮಹಾಯೋಗಿ ವೇಮನ ಜಯಂತಿ ಮತ್ತು ಜ.21 ರಂದು ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಸಂಬAಧ ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಜ.03 ರಂದು ನೂತನ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ಏರ್ಪಡಿಸಲಾಗಿದೆ.
ಅಂದು ಸಂಜೆ 04 ಗಂಟೆಗೆ ಶ್ರೀ ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, 04.30 ಗಂಟೆಗೆ ಮಹಾಯೋಗಿ ವೇಮನ ಜಯಂತಿ ಮತ್ತು 05 ಗಂಟೆಗೆ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತು ಪೂರ್ವಭಾವಿ ಸಭೆ ನಡೆಯಲಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಮಾಜದ ಮುಖಂಡರು ಹಾಗೂ ವಿವಿಧ ಸಂಘ-ಸAಸ್ಥೆಗಳ ಪದಾಧಿಕಾರಿಗಳು ಹಾಜರಾಗುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ತಿಳಿಸಿದ್ದಾರೆ.
---------
ಜ.02 ರಂದು ಕುರುಗೋಡು ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
ಕುರುಗೋಡು ಜೆಸ್ಕಾಂ ವ್ಯಾಪ್ತಿಯ ಬಾದನಹಟ್ಟಿ ಶಾಲೆಯ ಮೇಲೆ ಹಾದು ಹೋಗುವ ಅಪಾಯಕಾರಿ 110ಕೆವಿ ವಿದ್ಯುತ್ ಮಾರ್ಗ ಸ್ಥಳಾಂತರಿಸುವ ಕಾಮಗಾರಿ ತುರ್ತಾಗಿ ಕೈಗೊಳ್ಳುತ್ತಿರುವುದರಿಂದ 110/33/11 ಕೆವಿ ಕುರುಗೊಡು ಉಪ-ಕೇಂದ್ರದಿAದÀ ವಿದ್ಯುತ್ ಸರಬರಾಜು ಆಗುವ ವಿವಿಧ 11ಕೆ.ವಿ ಮಾರ್ಗಗಳಲ್ಲಿ ಜ.02 ರಂದು ಬೆಳಿಗ್ಗೆ 07 ಗಂಟೆಯಿAದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:*
ಎಫ್-1 ಕುರುಗೋಡು ಅರ್ಬನ್ ಮಾರ್ಗದ ಉಜ್ಜಲ್‌ಪೇಟೆ, ನೀಲಮ್ಮನ ಮಠ, ಸುಣ್ಣದ ಬಟ್ಟಿ, ಇಂದಿರಾನಗರ, ಬಳ್ಳಾರಿ ರಸ್ತೆ, ಸೂರ್ಯ ನಾರಾಯಣ ರೆಡ್ಡಿ ಕಾಲೋನಿ, ಬಾದನಹಟ್ಟಿ ರಸ್ತೆ, ಹರಿಕೃಪಾ ಕಾಲೋನಿ, ಸದಾಶಿವ ನಗರ, ಗೌಡರ ಓಣಿ. ಎಫ್-2 ಗೆಣಿಕೆಹಾಳ್ ಐಪಿ ಫೀಡರ್ ಮಾರ್ಗದ ಹೊಸ ಗೆಣಿಕೆಹಾಳ್, ಹಳೇ ಗೆಣಿಕೆಹಾಳ್, ಬಸವಪುರ, ಅನ್ನಪೂರ್ಣೇಶ್ವರಿ ಕ್ಯಾಂಪ್, ವದ್ದಟ್ಟಿ ಕ್ರಾಸ್ ಗ್ರಾಮಗಳು.
ಎಫ್-3 ಕಲ್ಲುಕಂಬ ಐಪಿ ಫೀಡರ್ ಮಾರ್ಗದ ಯಲ್ಲಾಪುರ ಕ್ರಾಸ್, ಮಾರುತಿ ಕ್ಯಾಂಪ್, ಶ್ರೀನಿವಾಸ ಕ್ಯಾಂಪ್, ಲಕ್ಷಿö್ಮÃಪುರ, ಕಲ್ಲುಕಂಭ, ಕೆರೆಕೆರೆ, ಮುಷ್ಟಗಟ್ಟ ಗ್ರಾಮಗಳು. ಎಫ್-4 ಹೆಚ್.ವೀರಾಪುರ ಎನ್.ಜೆ.ವೈ ಮಾರ್ಗದ ಹೆಚ್.ವೀರಾಪುರ, ಸೋಮಲಾಪುರ ಕ್ರಾಸ್, ಮಾರುತಿ ಕ್ಯಾಂಪ್, ಹೊಸ ಯಲ್ಲಾಪುರ, ಹಳೇ ಯಲ್ಲಾಪುರ, ಶ್ರೀನಿವಾಸ್ ಕ್ಯಾಂಪ್, ಲಕ್ಷಿö್ಮÃಪುರ, ಕಲ್ಲುಕಂಬ, ಚಿಟಿಗಿನಹಾಳ್, ಅರ್ಜುನ್ ಕ್ಯಾಂಪ್, ಮಠದ ಕ್ಯಾಂಪ್, ಕೆರೆಕೆರೆ ಗ್ರಾಮಗಳು.
ಎಫ್-5 ಸಿಂಧಿಗೇರಿ ಕೃಷಿ ಮಾರ್ಗದ ಬೈಲೂರು, ಮಲ್ಲೇಶ್ವರ ಕ್ಯಾಂಪ್, ಗೋಪಾಲಪುರ ಕ್ಯಾಂಪ್, ಗೂಳೆಪ್ಪ ಮಠ. ಎಫ್-6 ಪಟ್ಟಣ ಸೆರಗು ಐಪಿ ಫೀಡರ್ ಮಾರ್ಗದ ಮಾರುತಿ ಕ್ಯಾಂಪ್, ಕುರುಗೋಡು, ಯಲ್ಲಾಪುರ ಕ್ರಾಸ್, ಪಟ್ಟಣ ಸೆರಗು, ಗುತ್ತಿಗನೂರು, ರ‍್ವಾಯಿ. ಎಫ್-7 ಬಾದನಹಟ್ಟಿ ಕೃಷಿ ಮಾರ್ಗದ ಬಾದನಹಟ್ಟಿ, ವದ್ದಟ್ಟಿ, ರ‍್ರಂಗಳಿ, ಸಿಂಧಿಗೇರಿ, ರ‍್ರಿಂಗಳಿ, ಮಾರುತಿ ಕ್ಯಾಂಪ್, ಗಂಗಾಭವಾನಿ ಕ್ಯಾಂಪ್, ಸಪ್ತಗಿರಿ ಕ್ಯಾಂಪ್.
ಎಫ್-8 ಎಲ್.ಐ.ಎಸ್ ಎನ್.ಜೆ.ವೈ ಮಾರ್ಗದ ಹೊಸ ಗೆಣಿಕೆಹಾಳ್, ಹಳೇ ಗೆಣಿಕೆಹಾಳ್, ಕ್ಯಾದಿಗೆಹಾಳ್, ಬಸವಪುರ, ಕ್ಯಾದಿಗೆ ಹಾಳ್ ಕ್ರಾಸ್, ಗುಳೆಪ್ಪ ಮಠ. ಎಫ್-9 ಬಾದನಹಟ್ಟಿ ಎನ್.ಜೆ.ವೈ ಮಾರ್ಗದ ಬಾದನಹಟ್ಟಿ, ವದ್ದಟ್ಟಿ ಕ್ರಾಸ್, ಗಂಗಾಭವಾನಿ ಕ್ಯಾಂಪ್, ಸಪ್ತಗಿರಿ ಕ್ಯಾಂಪ್, ರ‍್ರಂಗಳಿ, ಕೃಷ್ಣನಗರ ಕ್ಯಾಂಪ್, ರಾಮಬಾಬು ಕ್ಯಾಂಪ್, ಅನ್ನಪೂರ್ಣೇಶ್ವರಿ ಕ್ಯಾಂಪ್, ರ‍್ರಿಂಗಳಿ, ಮಾರುತಿ ಕ್ಯಾಂಪ್.
ಎಫ್-11 ಚಿಟಿಗಿನಹಾಳ್ ಕೃಷಿ ಮಾರ್ಗದ ಕುರುಗೋಡು, ಶ್ರೀನಿವಾಸ ಕ್ಯಾಂಪ್, ಕಲ್ಲುಕಂಭ, ಕೆರಿಕೆರೆ, ಸೋಮಲಾಪುರ, ಲಕ್ಷಿö್ಮÃಪುರ, ಚಿಟಿಗಿನಹಾಳ್ ಗ್ರಾಮ. ಎಫ್-12 ಮುಷ್ಟಗಟ್ಟ ಕೃಷಿ ಮಾರ್ಗದ ಮುಷ್ಟಗಟ್ಟ, ಕೆರಿಕೆರೆ ಗ್ರಾಮ. ಎಫ್-13 ಕ್ಯಾದಿಗೆಹಾಳ್ ಕೃಷಿ ಮಾರ್ಗದ ಕ್ಯಾದಿಗೆಹಾಳ್, ಗೆಣಿಕೆಹಾಳ್ ಗ್ರಾಮ. ಎಫ್-14 ಗೆಣಿಕೆಹಾಳ್ ಕೃಷಿ ಮಾರ್ಗದ ಗೆಣಿಕಹಾಳ್, ಕುರುಗೋಡು, ವದ್ದಟ್ಟಿ ಕ್ರಾಸ್ ಮತ್ತು ಎಫ್-15 ಸೋಲಾರ್ ಫೀಡರ್ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಕುರುಗೋಡು ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ರಾಜೇಂದ್ರ ಪ್ರಸಾದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
2024 ರ ಲೋಕಸಭಾ ಚುನಾವಣೆಯ ಕುರಿತು ವಿಶ್ವದ ಅತಿದೊಡ್ಡ ಚುನಾವಣೆಯ ಕುರಿತು ಭಾರತ ಚುನಾವಣಾ ಆಯೋಗದಿಂದ ದತ್ತಾಂಶ ಪ್ರಕಟಣೆ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
2024 ರ ಲೋಕಸಭಾ ಚುನಾವಣೆ ಮತ್ತು ಜೊತೆಯಲ್ಲಿ ನಡೆದ 4 ರಾಜ್ಯಗಳ ವಿಧಾನಸಭಾ ಚುನಾವಣೆಗಳ ಸಂಕ್ಷಿಪ್ತ ಡೇಟಾವನ್ನು ಆಯೋಗ ಬಿಡುಗಡೆ ಮಾಡಿದೆ. ಜೊತೆಗೆ ವಿಶ್ವದಾದ್ಯಂತ ಶಿಕ್ಷಣ ತಜ್ಞರು, ಸಂಶೋಧಕರು, ಚುನಾವಣಾ ವೀಕ್ಷಕರು ಸೇರಿದಂತೆ ಮತದಾರರಿಗೆ ಇದು ಅನುಕೂಲವಾಗಬಲ್ಲದು ಎಂದು ಆಯೋಗ ತಿಳಿಸಿದೆ.
ಭಾರತದ ಚುನಾವಣಾ ಆಯೋಗವು 2024 ರ ಲೋಕಸಭಾ ಚುನಾವಣೆಗೆ ಸಂಬAಧಿಸಿದAತೆ 42 ಅಂಕಿಅAಶಗಳ ವರದಿಗಳು ಮತ್ತು ಆಂಧ್ರಪ್ರದೇಶ, ಅರುಣಾಚಲ ಪ್ರದೇಶ, ಒಡಿಶಾ ಮತ್ತು ಸಿಕ್ಕಿಂ ನಾಲ್ಕು ರಾಜ್ಯಗಳಲ್ಲಿ ಏಕಕಾಲದಲ್ಲಿ ನಡೆದ ವಿಧಾನಸಭಾ ಚುನಾವಣೆಗಳಿಗೆ 14 ಅಂಕಿಅAಶಗಳ ವರದಿಗಳ ಸಮಗ್ರ ದತ್ತಾಂಶಗಳನ್ನು ಬಿಡುಗಡೆ ಮಾಡಿದೆ.
ಆಯೋಗದ ಈ ಸ್ವಯಂ ಪ್ರೇರಿತ ಕಾರ್ಯವು ಭಾರತದ ಚುನಾವಣಾ ವ್ಯವಸ್ಥೆಯ ಆಧಾರವಾಗಿರುವ ಸಾರ್ವಜನಿಕ ನಂಬಿಕೆಯನ್ನು ಹೆಚ್ಚಿಸುವ ಉದ್ದೇಶವನ್ನು ಹೊಂದಿರುತ್ತದೆ. ವ್ಯಾಪಕವಾದ ಸವಿವರವಾದ ದತ್ತಾಂಶ ಬಿಡುಗಡೆಯು, ಶೈಕ್ಷಣಿಕ, ಸಂಶೋಧನೆ ಮತ್ತು ಸಾರ್ವಜನಿಕರು ಸೇರಿದಂತೆ ಎಲ್ಲಾ ಪಾಲುದಾರರಿಗೆ ಚುನಾವಣೆಗೆ ಸಂಬAಧಿಸಿದ ದತ್ತಾಂಶದ ಪ್ರತಿ ವಿವರಗಳನ್ನು ಬಹಿರಂಗಪಡಿಸುವಿಕೆಯ ಮೂಲಕ ಹೆಚ್ಚಿನ ಪಾರದರ್ಶಕತೆ ಕಾಪಾಡಿಕೊಳ್ಳುವುದು ಆಯೋಗದ ನೀತಿಯ ಮುಂದುವರಿಕೆಯಾಗಿದೆ.
ಈ ದತ್ತಾಂಶ ವಿವರಗಳು ವಿವಿಧ ರೀತಿಯ ಮಾಹಿತಿಗಳನ್ನು ಒಳಗೊಂಡಿವೆ, ಉದಾಹರಣೆಗೆ ಲೋಕಸಭಾ ಕ್ಷೇತ್ರ/ವಿಧಾನಸಭಾ ಕ್ಷೇತ್ರ/ರಾಜ್ಯವಾರು ಮತದಾರರ ವಿವರಗಳು, ಮತದಾನ ಕೇಂದ್ರಗಳ ಸಂಖ್ಯೆ, ರಾಜ್ಯ/ಲೋಕಸಭಾ ಕ್ಷೇತ್ರವಾರು ಮತದಾರರ ಮತದಾನ, ಪಕ್ಷವಾರು ಮತ ಹಂಚಿಕೆ, ಲಿಂಗ ಆಧಾರಿತ ಮತದಾನದ ನಡವಳಿಕೆ, ರಾಜ್ಯವಾರು ಮಹಿಳಾ ಮತದಾರರ ಭಾಗವಹಿಸುವಿಕೆ, ಪ್ರಾದೇಶಿಕ ವ್ಯತ್ಯಾಸಗಳು, ಕ್ಷೇತ್ರವಾರು ದತ್ತಾಂಶ ಸಾರಾಂಶ ವರದಿ, ರಾಷ್ಟಿçÃಯ/ರಾಜ್ಯ ಪಕ್ಷಗಳು/ಆರ್ಯುಪಿಪಿಗಳ ಕಾರ್ಯಕ್ಷಮತೆ, ವಿಜೇತ ಅಭ್ಯರ್ಥಿಗಳ ವಿಶ್ಲೇಷಣೆ, ಕ್ಷೇತ್ರವಾರು ಸೇರಿದಂತೆ ವಿವರವಾದ ಫಲಿತಾಂಶಗಳು ಮತ್ತು ಇನ್ನೂ ಅನೇಕ ಆಳವಾದ ಒಳನೋಟಗಳು ಮತ್ತು ವಿಶ್ಲೇಷಣೆಗಳನ್ನು ನಡೆಸಲು ಸಿದ್ಧಪಡಿಸಲಾದ ಈ ದತ್ತಾಂಶವನ್ನು ಸಂಶೋಧಕರು, ನೀತಿ ನಿರೂಪಕರು ಮತ್ತು ಪತ್ರಕರ್ತರು ಈಗ ಬಳಸಿಕೊಳ್ಳಬಹುದಾಗಿದೆ.
2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆ ದತ್ತಾಂಶಗಳ ಸವಿವರವಾದ ವರದಿ ಮತ್ತು ಅಂಕಿ-ಅAಶಗಳನ್ನು ಭಾರತ ಚುನಾವಣಾ ಆಯೋಗದ https://www.eci.gov.in/statistical-reports ಲಿಂಕ್ ಮೂಲಕ ಪಡೆದುಕೊಳ್ಳಬಹುದಾಗಿದೆ.
ಹಿಂದಿನ ಚುನಾವಣೆಗಳಿಗೆ ಸಂಬAಧಿಸಿದAತೆ ಇದೇ ರೀತಿಯ ವಿವರವಾದ ದತ್ತಾಂಶಗಳು ಈಗಾಗಲೇ ಆಯೋಗದ ವೆಬ್‌ಸೈಟ್ ನಲ್ಲಿ ಲಭ್ಯವಿರುವುದರಿಂದ, ಈ ವರದಿಗಳು ಚುನಾವಣಾ ಮತ್ತು ರಾಜಕೀಯ ಕುರಿತು ದೀರ್ಘಾವಧಿಯ ದೃಷ್ಟಿಕೋನ ಮತ್ತು ಬದಲಾವಣೆಗಳನ್ನು ಹಾಗೂ ವಿಶ್ಲೇಷಣೆಗೆ ಸಹಕಾರಿಯಾಗುತ್ತದೆ.
ಲೋಕಸಭಾ ಸಾರ್ವತ್ರಿಕ ಚುನಾವಣೆ 2024 ಕ್ಕೆ ಸಂಬAಧಿಸಿದ 42 ವರದಿಗಳ ಕೆಲವು ಮುಖ್ಯ ಅಂಶಗಳನ್ನು ವರದಿಯಲ್ಲಿ ಗಮನಿಸಬಹುದಾಗಿದೆ.
*ಮತದಾರರ ವಿವರ:*
ಲೋಕಸಭೆ ಚುನಾವಣೆ 2019 ರಲ್ಲಿ 91,19,50,734 ಕ್ಕೆ ಹೋಲಿಸಿದರೆ 2024 ರಲ್ಲಿ 97,97,51,847 ನೋಂದಾಯಿತ ಮತದಾರರಿದ್ದಾರೆ. 2019 ಕ್ಕಿಂತ 2024 ರಲ್ಲಿ ಒಟ್ಟು ಮತದಾರರಲ್ಲಿ ಶೇ.7.43 ಹೆಚ್ಚಳವಾಗಿದೆ. 2024 ರಲ್ಲಿ 64.64 ಕೋಟಿ ಮತಗಳು ಚಲಾವಣೆಯಾಗಿವೆ, 2019 ರಲ್ಲಿ 61.4 ಕೋಟಿ ಮತಗಳು ಚಲಾವಣೆಯಾಗಿದ್ದವು. ಇವಿಎಂ ಮತ್ತು ಅಂಚೆ ಮತಗಳು ಸೇರಿ 64,64,20,869 ಚಲಾವಣೆಯಾಗಿದ್ದವು. ಇದರಲ್ಲಿ 64,21,39,275 ಇವಿಎಂ ಮತಗಳು, 32,93,61,948 ಪುರುಷರು, 31,27,64,269 ಮಹಿಳೆಯರು, 13,058 ತೃತೀಯ ಲಿಂಗತ್ವ ಮತದಾರರ ಮತಗಳು ಚಲಾವಣೆಗೊಂಡಿದ್ದವು. ಹಾಗೂ 42,81,594 ಅಂಚೆ ಮತಪತ್ರಗಳು ಚಲಾವಣೆಯಾಗಿದ್ದವು.
ಅತಿ ಹೆಚ್ಚು ಮತದಾನ ಮಾಡಿರುವ ಲೋಕಸಭಾ ಕ್ಷೇತ್ರವು ಧುಬ್ರಿ (ಅಸ್ಸಾಂ) ಶೇ.92.3 ಮತ್ತು ಅತಿ ಕಡಿಮೆ ಮತದಾನ ಮಾಡಿರುವ ಲೋಕಸಭಾ ಕ್ಷೇತ್ರವು ಶ್ರೀನಗರ (ಜಮ್ಮು ಮತ್ತು ಕಾಶ್ಮೀರ) ಶೇ.38.7 ಆಗಿತ್ತು, 2019 ರಲ್ಲಿ ಕೇವಲ ಶೇ.14.4 ರಷ್ಟಾಗಿತ್ತು.
ದೇಶದಲ್ಲಿ ಶೇ.50 ಕ್ಕಿಂತ ಕಡಿಮೆ ಮತದಾನ ಮಾಡಿರುವ ಲೋಕಸಭಾ ಕ್ಷೇತ್ರ ಸಂಖ್ಯೆ 11. 2024 ರಲ್ಲಿ ನೋಟಾಗೆ 63,71,839 (ಶೇ.0.99) ಮತಗಳು ಬಿದ್ದಿದ್ದು, 2019 ರಲ್ಲಿ ಇದು ಶೇ.1.06 ರಷ್ಟಿತ್ತು. ಲಿಂಗಪರಿವರ್ತಿತ ಮತದಾರರು (ತೃತೀಯ ಲಿಂಗಿಗಳು) ಶೇ.27.09 ರಷ್ಟು ಮತದಾನ ಮಾಡಿದ್ದಾರೆ.
*ಮತದಾನ ಕೇಂದ್ರಗಳು:*
2019 ರಲ್ಲಿ 10,37,848 ಕ್ಕೆ ಹೋಲಿಸಿದರೆ 2024 ರಲ್ಲಿ 10,52,664 ಮತಗಟ್ಟೆಗಳು ಸ್ಥಾಪಿಸಲಾಗಿತ್ತು. 40 ಮತಗಟ್ಟೆಗಳಲ್ಲಿ ಮಾತ್ರ ಮರು ಮತದಾನ ಮಾಡಲಾಗಿದೆ. 2019 ರಲ್ಲಿ 540 ಕ್ಕೆ ಹೋಲಿಸಿದರೆ ಮರು ಮತದಾನವಾದ ಒಟ್ಟು ಮತಗಟ್ಟೆಗಳು ಕೇವಲ ಶೇ.0.0038. ಒಂದು ಮತಗಟ್ಟೆಗೆ ಮತದಾರರ ಸರಾಸರಿ ಸಂಖ್ಯೆ 931 ಇರುತ್ತದೆ.
ಅತಿ ಹೆಚ್ಚು ಮತಗಟ್ಟೆ ಹೊಂದಿರುವ ರಾಜ್ಯ ಉತ್ತರ ಪ್ರದೇಶ (1,62,069) ಆಗಿದೆ. ಕಡಿಮೆ ಸಂಖ್ಯೆಯ ಮತಗಟ್ಟೆ ಹೊಂದಿರುವ ರಾಜ್ಯ ಲಕ್ಷದ್ವೀಪ (55 ಮತಗಟ್ಟೆ) ಆಗಿದೆ. 1000 ಗಿಂತ ಕಡಿಮೆ ಮತಗಟ್ಟೆ ಇರುವ ಸಂಸದೀಯ ಕ್ಷೇತ್ರಗಳ ಸಂಖ್ಯೆ 11. 3000 ಗಿಂತ ಹೆಚ್ಚಿನ ಮತಗಟ್ಟೆ ಇರುವ ಸಂಸದೀಯ ಕ್ಷೇತ್ರಗಳ ಸಂಖ್ಯೆ 3. 2019 ಕ್ಕೆ ಹೋಲಿಸಿದರೆ 2024 ರಲ್ಲಿ ಅತಿ ಹೆಚ್ಚು ಹೊಸ ಮತದಾನ ಕೇಂದ್ರಗಳನ್ನು ಹೊಂದಿರುವ ರಾಜ್ಯ ಬಿಹಾರ (4739 ಮತಗಟ್ಟೆಗಳು) ಆಗಿದೆ, ನಂತರ ಪಶ್ಚಿಮ ಬಂಗಾಳ (1731 ಮತಗಟ್ಟೆಗಳು).
*ನಾಮನಿರ್ದೇಶನಗಳು:*
2019 ರಲ್ಲಿ ಸಲ್ಲಿಕೆಯಾಗಿದ್ದ 11,692 ನಾಮಪತ್ರಗಳಿಗೆ ಹೋಲಿಸಿದರೆ 2024 ರಲ್ಲಿ 12,459 ನಾಮಪತ್ರಗಳು ಸಲ್ಲಿಕೆಯಾಗಿವೆ. ದೇಶದಲ್ಲಿಯೇ ಅತಿ ಹೆಚ್ಚು ನಾಮಪತ್ರಗಳನ್ನು ತೆಲಂಗಾಣ ಜಿಲ್ಲೆಯ ಮಲ್ಕಾಜ್‌ಗಿರಿ ಲೋಕಸಭಾ ಮತಕ್ಷೇತ್ರದಲ್ಲಿ 114 ನಾಮಪತ್ರಗಳು ಸ್ವೀಕೃತವಾಗಿದ್ದರೆ, ಆಸ್ಸಾಂ ರಾಜ್ಯದ ದಿಬ್ರುಗಡ್ ಲೋಕಸಭಾ ಕ್ಷೇತ್ರದಲ್ಲಿ 3 ನಾಮಪತ್ರಗಳು ಸಲ್ಲಿಕೆಯಾಗಿವೆ.
2024 ರ ಚುನಾವಣೆಗಳಲ್ಲಿ 8,360 ನಾಮಪತ್ರಗಳನ್ನು ತಿರಸ್ಕರಿಸಿದ ನಂತರ ಮತ್ತು ದೇಶಾದ್ಯಂತ ಸಲ್ಲಿಸಿದ ಒಟ್ಟು 12,459 ನಾಮಪತ್ರಗಳಿಂದ ಹಿಂತೆಗೆದುಕೊAಡ ನಂತರ ಸ್ಪರ್ಧಿಸುವ ಅಂತಿಮ ಅಭ್ಯರ್ಥಿಗಳಾಗಿ ಅರ್ಹತೆ ಪಡೆದರು. 2019ರ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳ ಸಂಖ್ಯೆ 8054.
*ಮಹಿಳಾ ಶಕ್ತಿ:*
ನೋಂದಾಯಿತ ಮತದಾರರು: 2024 ರ ಒಟ್ಟು ಮತದಾರರು 97,97,51,847 ರಲ್ಲಿ 47,63,11,240 ಮಹಿಳಾ ಮತದಾರರಿದ್ದರು. 2019 ರಲ್ಲಿ ಶೇ.48.09 ಒಟ್ಟು ಮಹಿಳಾ ಮತದಾರರು 43,85,37,911 ಗೆ ಹೋಲಿಸಿದರೆ 2024 ರಲ್ಲಿ ಶೇ.48.62 ಮಹಿಳಾ ಮತದಾರರು ಇದ್ದಾರೆ. 2024 ರಲ್ಲಿ ಅತಿ ಹೆಚ್ಚು ಮಹಿಳಾ ಮತದಾರರ ಪಾಲನ್ನು ಹೊಂದಿರುವ ರಾಜ್ಯ ಪುದುಚೇರಿ (ಶೇ.53.03 ರಷ್ಟು), ನಂತರ ಕೇರಳ (ಶೇ.51.56).
2024 ರಲ್ಲಿ, ಪ್ರತಿ 1000 ಪುರುಷ ಮತದಾರರಿಗೆ ಮಹಿಳಾ ಮತದಾರರ ಸಂಖ್ಯೆ ಹೊಸ ಗರಿಷ್ಠ ಅಂದರೆ 946. 2019 ರಲ್ಲಿ ಪ್ರತಿ ಸಾವಿರ ಪುರುಷರಿಗೆ 926 ಮಹಿಳಾ ಮತದಾರರಿದ್ದರು.
*ಮತದಾನ:*
ಶೇ.65.55 ಪುರುಷ ಮತದಾರರಿಗೆ ಹೋಲಿಸಿದರೆ ಶೇ.65.78 ಮಹಿಳಾ ಮತದಾರರು 2024 ರಲ್ಲಿ (ಸೂರತ್ ಹೊರತುಪಡಿಸಿ) ಮತ ಚಲಾಯಿಸಿದ್ದಾರೆ. 2019 ರಂತೆಯೇ 2024 ರಲ್ಲಿ ಮಹಿಳೆಯರ ಸಂಖ್ಯೆಯು ಪುರುಷರಿಗಿಂತ ಹೆಚ್ಚಾಗಿದೆ; ಸಾರ್ವತ್ರಿಕ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ಇದು ಎರಡನೇ ಬಾರಿ.
ಮಹಿಳಾ ಮತದಾರರಲ್ಲಿ ಅತಿ ಹೆಚ್ಚು ವಿಟಿಆರ್ ಹೊಂದಿರುವ ಸಂಸದೀಯ ಕ್ಷೇತ್ರ ಶೇ.92.17, ಮಹಿಳಾ ಮತದಾನದೊಂದಿಗೆ ಧುಬ್ರಿ (ಅಸ್ಸಾಂ), ಶೇ.87.57 ರೊಂದಿಗೆ ತಮ್ಲುಕ್ (ಪಶ್ಚಿಮ ಬಂಗಾಳ) ನಂತರದ ಸ್ಥಾನದಲ್ಲಿದೆ.
*ಮಹಿಳಾ ಅಭ್ಯರ್ಥಿಗಳು:*
2019 ರಲ್ಲಿ 726 ಮಹಿಳಾ ಸ್ಪರ್ಧಿ ಅಭ್ಯರ್ಥಿಗಳಿಗೆ ಹೋಲಿಸಿದರೆ, 2024 ರಲ್ಲಿ ಮಹಿಳಾ ಸ್ಪರ್ಧಿ ಅಭ್ಯರ್ಥಿಗಳ ಸಂಖ್ಯೆ 800 ಆಗಿತ್ತು. ಅತಿ ಹೆಚ್ಚು ಮಹಿಳಾ ಅಭ್ಯರ್ಥಿಗಳನ್ನು ಹೊಂದಿರುವ ರಾಜ್ಯ: ಮಹಾರಾಷ್ಟç [111] ನಂತರ ಉತ್ತರ ಪ್ರದೇಶ [80] ಮತ್ತು ತಮಿಳುನಾಡು[77]. ಎಲ್ಲಾ ಒಟ್ಟು 543 ಲೋಕಸಭಾ ಕ್ಷೇತ್ರಗಳಿಗೆ ಹೋಲಿಸಿದಲ್ಲಿ 152 ಲೋಕಸಭಾ ಕ್ಷೇತ್ರಗಳಲ್ಲಿ ಯಾವುದೇ ಮಹಿಳಾ ಅಭ್ಯರ್ಥಿಗಳು ಸ್ಪರ್ಧಿಸಿರುವುದಿಲ್ಲ.
*ಎಲ್ಲರನ್ನೂ ಒಳಗೊಳ್ಳುವ ಚುನಾವಣೆಗಳು:*
2019 ರಲ್ಲಿ 39,075 ಕ್ಕೆ ಹೋಲಿಸಿದರೆ 2024 ರಲ್ಲಿ 48,272 ತೃತೀಯ ಲಿಂಗ ಮತದಾರರನ್ನು ನೋಂದಾಯಿಸಲಾಗಿದೆ. ಐದು ವರ್ಷಗಳ ಅವಧಿಯಲ್ಲಿ ಶೇ.23.5 ರಷ್ಟು ಹೆಚ್ಚಳವಾಗಿದೆ. ಅತಿ ಹೆಚ್ಚು ನೋಂದಾಯಿತ ತೃತೀಯ ಲಿಂಗ ಮತದಾರರನ್ನು ಹೊಂದಿರುವ ರಾಜ್ಯ ತಮಿಳುನಾಡು (8,467). 2019 ರಲ್ಲಿ 61,67,482 ಗೆ ಹೋಲಿಸಿದರೆ 2024 ರಲ್ಲಿ 90,28,696 ನೋಂದಾಯಿತ ದಿವ್ಯಾಂಗ ಮತದಾರರಿದ್ದಾರೆ.
2019 ರಲ್ಲಿ ಶೇ.14.64 ಕ್ಕೆ ಹೋಲಿಸಿದರೆ 2024 ರ ಲೋಕಸಭಾ ಚುನಾವಣೆಯಲ್ಲಿ ಶೇ.27.09 ತೃತೀಯ ಲಿಂಗ ಮತದಾರರು ಮತ ಚಲಾಯಿಸಿದ್ದಾರೆ-ಬಹುತೇಕ ದ್ವಿಗುಣವಾಗಿದೆ.
2019 ರಲ್ಲಿ 99,844 ನೋಂದಾಯಿತ ಸಾಗರೋತ್ತರ ಮತದಾರರಿಗೆ ಹೋಲಿಸಿದರೆ 2024 ರಲ್ಲಿ 1,19,374 ನೋಂದಾಯಿತ ಸಾಗರೋತ್ತರ ಮತದಾರರು [ಪುರುಷ: 1,06,411; ಮಹಿಳೆ: 12,950; ಮೂರನೇ ಲಿಂಗ: 13].
*ಫಲಿತಾಂಶಗಳು:*
2024 ರ ಸಾರ್ವತ್ರಿಕ ಲೋಕಸಭಾ ಚುನಾವಣೆಯಲ್ಲಿ ದೇಶದಲ್ಲಿ ಒಟ್ಟು 6 ರಾಷ್ಟಿçÃಯ ಪಕ್ಷಗಳು ಭಾಗವಹಿಸಿದ್ದವು. ಈ 6 ಪಕ್ಷಗಳ ಒಟ್ಟು ಮತ ಹಂಚಿಕೆಯು ಒಟ್ಟು ಮಾನ್ಯ ಮತಗಳ ಶೇ.63.35 ಆಗಿತ್ತು. 2019 ರಲ್ಲಿ 6923 ಅಭ್ಯರ್ಥಿಗಳಿಗೆ ಹೋಲಿಸಿದರೆ 2024 ರ ಚುನಾವಣೆಯಲ್ಲಿ 7190 ಅಭ್ಯರ್ಥಿಗಳು ಠೇವಣಿಗಳನ್ನು ಕಳೆದುಕೊಂಡಿದ್ದರು. ಒಂದು ಲೋಕಸಭಾ ಕ್ಷೇತ್ರ -ಸೂರತ್ (ಗುಜರಾತ್) ಅವಿರೋಧವಾಗಿತ್ತು.
ಒಟ್ಟು 3921 ಸ್ವತಂತ್ರ ಅಭ್ಯರ್ಥಿಗಳು ಸ್ಪರ್ಧಿಸಿದ್ದು, 7 ಮಂದಿ ಮಾತ್ರ ಆಯ್ಕೆಯಾಗಿದ್ದಾರೆ. ಅದರಲ್ಲಿ 3905 ಸ್ವತಂತ್ರ ಅಭ್ಯರ್ಥಿಗಳು ಠೇವಣಿ ಕಳೆದುಕೊಂಡಿದ್ದಾರೆ. ಸ್ವತಂತ್ರ ಅಭ್ಯರ್ಥಿಗಳು ಪಡೆದ ಮತ ಹಂಚಿಕೆ ಒಟ್ಟು ಮಾನ್ಯ ಮತಗಳಲ್ಲಿ ಶೇ.2.79 ಆಗಿತ್ತು. 279 ಸ್ವತಂತ್ರ ಮಹಿಳಾ ಅಭ್ಯರ್ಥಿಗಳಿದ್ದರು.
ಪ್ರತಿ ದತ್ತಾಂಶಗಳ ಸವಿವರವಾದ ವರದಿ ಮತ್ತು ಅಂಕಿ-ಅAಶಗಳನ್ನು ಭಾರತ ಚುನಾವಣಾ ಆಯೋಗದ ಲಿಂಕ್ https://www.eci.gov.in/statistical-reports ನಲ್ಲಿ ಪಡೆದುಕೊಳ್ಳಬಹುದು ಎಂದು ಭಾರತ ಚುನಾವಣಾ ಆಯೋಗ ಪ್ರಕಟಣೆಯಲ್ಲಿ ತಿಳಿಸಿದೆ.
-------------
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ: ಗುತ್ತಿಗೆ ಆಧಾರದಡಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಾನೂನು ನೆರವು ಅಭಿರಕ್ಷಕರ ಕಚೇರಿಯಲ್ಲಿ ವಿವಿಧ ತಾತ್ಕಾಲಿಕ ಹುದ್ದೆಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗಾಗಿ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಮುಖ್ಯ ಕಾನೂನು ನೆರವು ಅಭಿರಕ್ಷಕರ ಹುದ್ದೆ 01, ಉಪ ಕಾನೂನು ನೆರವು ಅಭಿರಕ್ಷಕರ ಹುದ್ದೆ 01 ಮತ್ತು ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆ 01 ಇವುಗಳಿಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲಾಗುವುದು.
ಮಾಹೆಯಾನ ಮುಖ್ಯ ಕಾನೂನು ನೆರವು ಅಭಿರಕ್ಷಕರ ಮಾಸಿಕ ವೇತನ ರೂ.70,000, ಉಪ ಕಾನೂನು ನೆರವು ಅಭಿರಕ್ಷಕರ ಮಾಸಿಕ ವೇತನ ರೂ.45,000 ಮತ್ತು ಸಹಾಯಕ ಕಾನೂನು ನೆರವು ಅಭಿರಕ್ಷಕರ ವೇತನ ರೂ.30,000 ಸಂಚಿತ ಸಂಭಾವನೆ ನೀಡಲಾಗುವುದು.
*ವಿದ್ಯಾರ್ಹತೆ:*
*ಮುಖ್ಯ ಕಾನೂನು ನೆರವು ಅಭಿರಕ್ಷಕರ ಹುದ್ದೆ:*
ಕನಿಷ್ಠ 10 ವರ್ಷಗಳ ಕಾಲ ಕ್ರಿಮಿನಲ್ ಕಾನೂನಿನಲ್ಲಿ ಅಭ್ಯಾಸ ಮಾಡಿರಬೇಕು. ಅತ್ಯುತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ ಹೊಂದಿರಬೇಕು. ಕ್ರಿಮಿನಲ್ ಕಾನೂನಿನ ಅತ್ಯುತ್ತಮ ತಿಳುವಳಿಕೆ, ರಕ್ಷಣಾ ಸಲಹೆಗಾರರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆ, ಸೆಷನ್ಸ್ ನ್ಯಾಯಾಲಯಗಳಲ್ಲಿ ಕನಿಷ್ಠ 30 ಕ್ರಿಮಿನಲ್ ವಿಚಾರಣೆಗಳನ್ನು ನಿರ್ವಹಿಸಿರಬೇಕು. 30 ಕ್ರಿಮಿನಲ್ ಪ್ರಕರಣಗಳ ನಿರ್ವಹಣೆಯ ಮೇಲಿನ ಷರತ್ತುಗಳನ್ನು ಸೂಕ್ತ ಸಂದರ್ಭಗಳಲ್ಲಿ ಸಡಿಲಿಸಬಹುದು. ಕಂಪ್ಯೂಟರ್ ವ್ಯವಸ್ಥೆಯ ಜ್ಞಾನ ಆದ್ಯತೆ, ಕಚೇರಿಯನ್ನು ನಿರ್ವಹಿಸುವ ಸಾಮರ್ಥ್ಯದೊಂದಿಗೆ ತಂಡವನ್ನು ಮುನ್ನಡೆಸಲು ಗುಣಮಟ್ಟ ಕೌಶಲ್ಯ ಹೊಂದಿರಬೇಕು.
*ಉಪ ಕಾನೂನು ನೆರವು ಅಭಿರಕ್ಷಕರ ಹುದ್ದೆ:*
ಕನಿಷ್ಠ 7 ವರ್ಷಗಳ ಕಾಲ ಕ್ರಿಮಿನಲ್ ಕಾನೂನಿನಲ್ಲಿ ಅಭ್ಯಾಸ ಮಾಡಿರಬೇಕು. ಕ್ರಿಮಿನಲ್ ಕಾನೂನಿನ ಅತ್ಯುತ್ತಮ ತಿಳುವಳಿಕೆ, ಅತ್ಯುತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ, ಕಾನೂನು ಸಂಶೋಧನೆಯಲ್ಲಿ ಕೌಶಲ್ಯ, ರಕ್ಷಣಾ ಸಲಹೆಗಾರರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆ, ಇತರರೊಂದಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ ಹೊಂದಿರಬೇಕು. ಸೆಷನ್ಸ್ ನ್ಯಾಯಾಲಯಗಳಲ್ಲಿ ಕನಿಷ್ಠ 20 ಕ್ರಿಮಿನಲ್ ವಿಚಾರಣೆಗಳನ್ನು ನಿರ್ವಹಿಸಿರಬೇಕು, ಗೌರವಾನ್ವಿತ ಕಾರ್ಯನಿರ್ವಾಹಕ ಅಧ್ಯಕ್ಷರು, ಎಸ್‌ಎಲ್‌ಎಸ್‌ಎ, ಅಸಾಧಾರಣ ಸಂದರ್ಭಗಳಲ್ಲಿ ಸಡಿಲಗೊಳಿಸಬಹುದು. ಕೆಲಸದಲ್ಲಿ ಪ್ರಾವೀಣ್ಯತೆಯೊಂದಿಗೆ ಐಟಿ ಜ್ಞಾನ ಹೊಂದಿರಬೇಕು.
*ಸಹಾಯಕ ಕಾನೂನು ನೆರವು ಅಭಿರಕ್ಷಕರ ಹುದ್ದೆ:*
ಕ್ರಿಮಿನಲ್ ಕಾನೂನಿನಲ್ಲಿ 3 ವರ್ಷಗಳವರೆಗೆ ಅಭ್ಯಾಸ ಮಾಡಿರಬೇಕು. ಉತ್ತಮ ಮೌಖಿಕ ಮತ್ತು ಲಿಖಿತ ಸಂವಹನ ಕೌಶಲ್ಯ, ರಕ್ಷಣಾ ಸಲಹೆಗಾರರ ನೈತಿಕ ಕರ್ತವ್ಯಗಳ ಸಂಪೂರ್ಣ ತಿಳುವಳಿಕೆ, ಇತರರೊಂದಿಗೆ ಪರಿಣಾಮಕಾರಿಯಾಗಿ ಕೆಲಸ ಮಾಡುವ ಸಾಮರ್ಥ್ಯ. ಅತ್ಯುತ್ತಮ ಬರವಣಿಗೆ ಮತ್ತು ಸಂಶೋಧನಾ ಕೌಶಲ್ಯ, ಕೆಲಸದಲ್ಲಿ ಹೆಚ್ಚಿನ ಪ್ರಾವೀಣ್ಯತೆಯೊಂದಿಗೆ ಐಟಿ ಜ್ಞಾನ ಹೊಂದಿರಬೇಕು.
ನೇಮಕಾತಿಗಳು ತಾತ್ಕಾಲಿಕವಾಗಿದ್ದು, ಪ್ರಾಧಿಕಾರವು ನೇಮಕಾತಿಯನ್ನು ಯಾವುದೇ ನೋಟೀಸನ್ನು ನೀಡದೆ ರದ್ದುಗೊಳಿಸುವ ಅಧಿಕಾರ ಹೊಂದಿರುತ್ತದೆ.
ಅಭ್ಯರ್ಥಿಗಳು ಅರ್ಜಿ ನಮೂನೆ ಪಡೆದು ಭರ್ತಿ ಮಾಡಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಬಳ್ಳಾರಿ ಕಚೇರಿಗೆ ಅರ್ಜಿ ಸಲ್ಲಿಸಬೇಕು ಹಾಗೂ ಇತ್ತೀಚಿನ 3 ಪಾಸ್ ಪೋಟೋ ಲಗತ್ತಿಸಬೇಕು.
ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನವಾಗಿದೆ.
ಹೆಚ್ಚಿನ ಮಾಹಿತಿಗಾಗಿ ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಸಂಕೀರ್ಣದ ಮೂರನೇ ಮಹಡಿಯ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಕಚೇರಿಗೆ ಸಂಪರ್ಕಿಸಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರೂ ಆದ ಕೆ.ಜಿ.ಶಾಂತಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ವಿಕಲಚೇತನರ ರಿಯಾಯಿತಿ ಬಸ್ ಪಾಸ್‌ಗಳ ನವೀಕರಣ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
2025ನೇ ಸಾಲಿಗಾಗಿ ಜ.01 ರಿಂದ ಡಿ.31 ರವರೆಗೆ ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಗಳನ್ನು ಮಾನ್ಯತೆ ಇರುವಂತೆ ಫಲಾನುಭವಿಗಳು ನವೀಕರಣ ಮಾಡಿಕೊಳ್ಳಬೇಕು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‌ಬಾನ್ ಅವರು ತಿಳಿಸಿದ್ದಾರೆ.
ವಿಕಲಚೇತನರ ರಿಯಾಯಿತಿ ಬಸ್ ಪಾಸ್ ಗಳನ್ನು ನವೀಕರಣ ಮಾಡಿಕೊಳ್ಳಲು ಸಾಕಷ್ಟು ಕಾಲಮಿತಿ ನೀಡುವ ಉದ್ದೇಶದಿಂದ 2024 ನೇ ಸಾಲಿನಲ್ಲಿ ವಿತರಿಸಲಾಗಿರುವ ಅಂದರೆ 2024ರ ಡಿ.31ರ ವರೆಗೆ ಮಾನ್ಯತೆ ಇರುವ ವಿಕಲಚೇತನರ ಪಾಸ್ ಗಳನ್ನು ನವೀಕರಿಸದೇ 2025ರ ಫೆ.28ರ ವರೆಗೆ ಮಾನ್ಯತೆ ನೀಡಲಾಗಿದ್ದು, ಆ ದಿನಾಂಕದವರೆಗೆ ವಿಕಲಚೇತನರು ಸಂಸ್ಥೆಯ ವಾಹನಗಳಲ್ಲಿ ಪ್ರಯಾಣಿಸಲು ಅವಕಾಶ ನೀಡಲಾಗಿದೆ.
2024ನೇ ಸಾಲಿನಲ್ಲಿ ವಿತರಣೆ ಮಾಡಿದ ವಿಕಲಚೇತನರ ರಿಯಾಯಿತಿ ದರದ ಬಸ್ ಪಾಸ್ ಗಳನ್ನು 06 ಜನವರಿ 2025 ರಿಂದ 28 ಫೆಬ್ರವರಿ 2025 ರ ಒಳಗೆ ಎಲ್ಲಾ ಸೂಕ್ತ ದಾಖಲಾತಿಗಳೊಂದಿಗೆ ಸೇವಾಸಿಂಧು ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, ಪಾಸ್ ಶುಲ್ಕ ರೂ.660 ಗಳನ್ನು ಪಾವತಿಸಿ, ಬಳ್ಳಾರಿ ಕೇಂದ್ರೀಯ ಬಸ್ ನಿಲ್ದಾಣ ಹಾಗೂ ಸಿರುಗುಪ್ಪ, ಕುರುಗೋಡು, ಸಂಡೂರು ಘಟಕಗಳಲ್ಲಿ ವಿಕಲಚೇತನ ಫಲಾನುಭವಿಗಳು ನವೀಕರಣ ಮಾಡಿಸಿಕೊಳ್ಳಬಹುದಾಗಿದೆ.
ಫೆ.28 ರ ನಂತರ ಬರುವ ಬಸ್ ಪಾಸ್‌ಗಳನ್ನು ನವೀಕರಿಸಲಾಗುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಬಳ್ಳಾರಿ: ವಿಜಯನಗರ ಶ್ರೀಕೃಷ್ಣದೇವರಾಯ ವಿವಿಯ ಲೋಕೆಶ್ ರಾಠೊಡ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ಗೆ ಆಯ್ಕೆ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
ಒಡಿಸ್ಸಾದ ಕಳಿಂಗ ವಿಶ್ವವಿದ್ಯಾಲಯ ಭುವನೇಶ್ವರದಲ್ಲಿ ನಡೆಡ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷ ಮತ್ತು ಮಹಿಳೆಯರ ಅಥ್ಲೆಟಿಕ್ ಪಂದ್ಯಾವಳಿಯಲ್ಲಿ ಬಳ್ಳಾರಿಯ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಲೋಕೆಶ್ ರಾಠೊಡ (ಜಿ.ಬಿ.ಆರ್ ಕಾಲೇಜ್, ಹೂವಿನಹಡಗಲಿ) ಡೆಕ್ಯಾಥ್ಲಾನ್ ನಲ್ಲಿ 6258 ಅಂಕಗಳನ್ನು ಪಡೆಯುವುದರ ಮೂಲಕ ಅಖಿಲಭಾರತ ಅಂತರ ವಿಶ್ವವಿದ್ಯಾಲಯ ಕ್ರೀಡಾಕೂಟದಲ್ಲಿ 6 ನೇ ಸ್ಥಾನ ಹೊಂದಿ ಖೇಲೊ ಇಂಡಿಯಾ ಯುನಿವರ್ಸಿಟಿ ಗೇಮ್ಸ್ 2025 ಗೆ ಅರ್ಹತೆ ಪಡೆದಿದ್ದಾನೆ.
ಇದು ಅಥ್ಲೆಟಿಕ್ಸ್ನಲ್ಲಿ ಬಳ್ಳಾರಿ ವಿವಿಯ ಶ್ರೇಷ್ಠ ಸಾಧನೆಯಾಗಿದೆ. ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು(ಆಡಳಿತ), ಕುಲಸಚಿವರು (ಮೌಲ್ಯಮಾಪನ), ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಅಥ್ಲೆಟಿಕ್ಸ್ ತಂಡದ ವ್ಯವಸ್ಥಾಪಕರು ಮತ್ತು ತರಬೇತುದಾರರಾದ ಡಾ.ಶಶಿಧರ ಕೆಲ್ಲೂರ ಮತ್ತು ಬಡೇಸಾಬ ಹಾಗೂ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
---------
ಮಹಿಳೆಯರು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು: ಗಿರೀಶ್.ವಿ ಕುಲಕರ್ಣಿ
ಬಳ್ಳಾರಿ,ಡಿ.31(ಕರ್ನಾಟಕ ವಾರ್ತೆ):
ಮಹಿಳಾ ಸಬಲೀಕರಣ ಸಮಾಜದಲ್ಲಿ ಬಹುಮುಖ್ಯವಾಗಿದ್ದು, ಮಹಿಳೆಯರು ವಿವಿಧ ರೀತಿಯ ಸ್ವ-ಉದ್ಯೋಗ ಮಾಡಲು ಸೃಜನಾತ್ಮಕ ಕೌಶಲ್ಯ ಬೆಳೆಸಿಕೊಳ್ಳಬೇಕು ಎಂದು ಕೆನರಾ ಬ್ಯಾಂಕ್‌ನ ಲೀಡ್ ಡಿಸ್ಟಿçÃಕ್ ಮ್ಯಾನೇಜರ್ ಗಿರೀಶ ವಿ ಕುಲಕರ್ಣಿ ಅವರು ಹೇಳಿದರು.
ಕೆನರಾ ಬ್ಯಾಂಕ್ ವತಿಯಿಂದ ಉಚಿತ ಹೊಲಿಗೆ ಯಂತ್ರ ತರಬೇತಿ ಹೊಂದಿದ ಮಹಿಳೆಯರಿಗೆ ಸಂಸ್ಥೆಯ ಆವರಣದಲ್ಲಿ ಮಂಗಳವಾರ ಟೂಲ್‌ಕಿಟ್ ವಿತರಿಸಿ ಅವರು ಮಾತನಾಡಿದರು.
ಮಹಿಳೆಯರು ಮನೆಯಲ್ಲಿ ಕುಳಿತು ಟೈಲರಿಂಗ್ ಮಾಡುವುದರಿಂದ ಸ್ವಾವಲಂಬಿ ಜೀವನ ರೂಪಿಸಿಕೊಳ್ಳುತ್ತಾರೆ ಹಾಗೂ ಸಮಾಜದಲ್ಲಿ ಉತ್ತಮ ಜೀವನ ನಡೆಸಲು ಈ ಹೋಲಿಗೆ ತರಬೇತಿ ಸಹಕಾರಿಯಾಗಲಿದೆ ಎಂದರು.
ಕೆನರಾ ಬ್ಯಾಂಕ್‌ನ ವಿಭಾಗೀಯ ಪ್ರಬಂಧಕರಾದ ಮಾಲತಿ ಅವರು ಮಾತನಾಡಿ, ಮಹಿಳೆಯರು ಮನೆಯಲ್ಲಿ ಟೈಲರಿಂಗ್ ಮಾಡಿಕೊಂಡು ಆರ್ಥಿಕವಾಗಿ ಕುಟುಂಬ ನಿರ್ವಹಣೆಗೆ ಸಹಕಾರಿಯಾಗುತ್ತದೆ ಎಂದು ಹೇಳಿದರು.
ನಿರ್ದೇಶಕರಾದ ರಾಜೆಸಾಬ್.ಎಚ್ ಎರಿಮನಿ ಮಾತನಾಡಿ, ಸಂಸ್ಥೆಯ ತರಬೇತಿಯಲ್ಲಿ ಕೌಶಲ್ಯದ ಜೊತೆಗೆ ಆತ್ಮವಿಶ್ವಾಸ, ವ್ಯಕ್ತಿತ್ವ ವಿಕಸನದ ಮಾಹಿತಿ ನೀಡಲಾಗುತ್ತಿದ್ದು, ತಮ್ಮ ವೃತ್ತಿ ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಈ ಸಂಧರ್ಭದಲ್ಲಿ ಜಿಲ್ಲಾ ಪಂಚಾಯತ್‌ನ ಎನ್‌ಆರ್‌ಎಲ್‌ಎಂ ಘಟಕದ ರಾಜೇಂದ್ರ ವಿಜಯ ಕುಮಾರ ಸೇರಿದಂತೆ ಜಡೆಪ್ಪ, ದಿನೇಶ, ಸಿದ್ದಲಿಂಗಮ್ಮ, ಮಂಜುಳಾ, ಸಂತೋಷ ಕುಮಾರ್, ಕಿರಣ ಕುಮಾರ ಹಾಗೂ ಶಿಭಿರಾರ್ಥಿಗಳು ಇದ್ದರು.
--------
ಸೋಮವಾರ, ಡಿಸೆಂಬರ್ 30, 2024
ಬಳ್ಳಾರಿ: ಸಾರಿಗೆಗೆ ‘ಶಕ್ತಿ ಯೋಜನೆ’ಯ ಬಲ | ಬಸ್ ಸಂಚಾರದಲ್ಲಿಯೂ ಗಣನೀಯ ಹೆಚ್ಚಳ
ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ):
ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಸಾರಿಗೆ ನಿಗಮಗಳಿಗೆ ಒಂದೆಡೆ ಆದಾಯ ಹರಿದುಬರುತ್ತಿದೆ. ಇನ್ನೊಂದೆಡೆ, ಸಾರಿಗೆ ವ್ಯವಸ್ಥೆಯ ಬಳಕೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಒತ್ತಡವೂ ಹೆಚ್ಚುತ್ತಿದ್ದು, ಇದನ್ನು ನಿವಾರಿಸಲು ಸಾರಿಗೆ ಇಲಾಖೆಯ ಬಳ್ಳಾರಿ ವಿಭಾಗವು ಬಸ್ ಮತ್ತು ಸರತಿ (ಟ್ರಿಪ್) ಸಂಖ್ಯೆಯನ್ನೂ ಹೆಚ್ಚಿಸುತ್ತಿದೆ.
ಕಳೆದ ವರ್ಷ ಜೂನ್ 11 ರಂದು ಶಕ್ತಿ ಯೋಜನೆ ಆರಂಭವಾಗುವುದಕ್ಕೂ ಮೊದಲು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದಲ್ಲಿದ್ದ ಬಸ್ ಗಳ ಸಂಖ್ಯೆ ಶಕ್ತಿ ಯೋಜನೆ ಜಾರಿಗೆ ಬಂದ ಒಂದೇ ವರ್ಷದಲ್ಲಿ ಬಸ್ ಗಳು ಏರಿಕೆಯಾಗಿವೆ. ಮಹಿಳೆಯರು ಮತ್ತು ಸಾರ್ವಜನಿಕರ ಪ್ರಯಾಣ ದಟ್ಟಣೆ ಕಡಿಮೆಗೊಳಿಸಲು ಸಾರಿಗೆ ಇಲಾಖೆಯು ತನ್ನ ಬಸ್ ಗಳ ಸರತಿ ಸೇವೆಗಳಲ್ಲಿಯೂ ಹೆಚ್ಚಿಸಿವೆ.
ಶಕ್ತಿ ಯೋಜನೆ ಬಂದ ಬಳಿಕ ಸಾರಿಗೆ ಸೇವೆ ಬಳಕೆ ಅಧಿಕವಾಗಿದೆ. ಜನರ ಸಂಚಾರ ಹೆಚ್ಚಾಗುತ್ತಿದೆ. ಜನರು ತಾವಿರುವ ಹಳ್ಳಿಗಳಿಗೆ ಬಸ್ ಸೇವೆ ಬರಲಿ ಎಂದು ಅಪೇಕ್ಷಿಸುತ್ತಿರುವ ಕಾರಣ ಹೊಸ ಹೊಸ ಜಾಗಗಳಿಗೆ ಬಸ್ ಸೇವೆ ನೀಡಲಾಗುತ್ತಿದೆ. ಹೀಗಾಗಿ ಬಸ್ ಗಳ ಸಂಖ್ಯೆ ಮತ್ತು ಸರತಿಯಲ್ಲಿ ಹೆಚ್ಚಳವಾಗುತ್ತಿದೆ.
ಆದಾಯದಲ್ಲೂ ಹೆಚ್ಚಳ:
ಶಕ್ತಿ ಯೋಜನೆ ಆರಂಭವಾದ 2023ರ ಜೂನ್ 11ರಿಂದ 2024ರ ನವೆಂಬರ್ ವರೆಗೆ ಕಲ್ಯಾಣ ಕರ್ನಾಟಕ ಸಾರಿಗೆ ಸಂಸ್ಥೆಯ ಬಳ್ಳಾರಿ ವಿಭಾಗದಲ್ಲಿ ಒಟ್ಟು 3,73,58,517 ಮಹಿಳೆಯರು ಸಂಚರಿಸಿದ್ದಾರೆ. ಇದರಲ್ಲಿ ವಯಸ್ಕರ ಸಂಖ್ಯೆ 3,58,89,773 ಆಗಿದ್ದರೆ, ಮಕ್ಕಳ ಸಂಖ್ಯೆ 14,68,744. ಇದರಿಂದ ಸಾರಿಗೆ ಸಂಸ್ಥೆಯ ಬಳ್ಳಾರಿ ವಿಭಾಗಕ್ಕೆ ಇಲ್ಲಿಯವರೆಗೆ ಒಟ್ಟು 1,35,10,15,030 ರೂ. ಆದಾಯ ಬಂದಿದೆ.
ತಾಲ್ಲೂಕುವಾರು ಸಾರಿಗೆ ಆದಾಯದ ವಿವರ (2023ರ ಜೂನ್ 11 ರಿಂದ 2024ರ ನವೆಂಬರ್ 30 ರವೆರೆಗೆ):
ಬಳ್ಳಾರಿ: 2,08,94,579-ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಒಟ್ಟು ವೆಚ್ಚ-70,56,50,800 ಆಗಿದೆ.
ಸಿರುಗುಪ್ಪ: 61,12,136-ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಒಟ್ಟು ವೆಚ್ಚ-24,95,52,930.
ಕುರುಗೋಡು ಮತ್ತು ಕಂಪ್ಲಿ: 34,88,457-ಮಹಿಳಾ ಪ್ರಯಾಣಿಕರು, ಒಟ್ಟು ವೆಚ್ಚ-14,71,72,401.
ಸಂಡೂರು: 68,63,345-ಮಹಿಳಾ ಪ್ರಯಾಣಿಕರು, ಒಟ್ಟು ವೆಚ್ಚ-24,86,38,899.
ಜಿಲ್ಲೆಯಲ್ಲಿ ಒಟ್ಟು 37358517 ಮಹಿಳಾ ಪ್ರಯಾಣಿಕರು ಸಂಚರಿಸಿದ್ದು, ಒಟ್ಟು 1,35,10,15,030 ರೂ. ವೆಚ್ಚವಾಗಿದೆ.
ಸಾರ್ವಜನಿಕರು ಮತ್ತು ವಿದ್ಯಾರ್ಥಿಗಳು ಸಾಮಾನ್ಯವಾಗಿ ಬೆಳಿಗ್ಗೆ ಮತ್ತು ಸಂಜೆ ಸಮಯದಲ್ಲಿ ಬಸ್ ಬಳಕೆಯು ಹೆಚ್ಚಾಗಿ ಕಂಡುಬರುತ್ತದೆ. ಪ್ರಯಾಣಿಕರ ದಟ್ಟಣೆಗೆ ಅನುಗುಣವಾಗಿ ಬಳ್ಳಾರಿ ವಿಭಾಗವು ಬಸ್ ಗಳನ್ನು ನಿಯೋಜನೆ ಮಾಡುತ್ತಿದೆ. ಎಲ್ಲ ಸಮಯದಲ್ಲೂ ಪ್ರಯಾಣಿಕರು ಬಸ್ ಗಳನ್ನು ಅಪೇಕ್ಷಿಸುತ್ತಿರುವುದರಿಂದ ಹೆಚ್ಚುವರಿ ಬಸ್ ಗಳನ್ನು, ಸರತಿ(ಟ್ರಿಪ್)ಗಳನ್ನು ಓಡಿಸಲಾಗುತ್ತಿದೆ.
ಸ್ಕೂಲ್ ರೌಂಡ್ ಕಡ್ಡಾಯ:
ವಿದ್ಯಾರ್ಥಿಗಳು ಶಾಲಾ–ಕಾಲೇಜುಗಳಿಗೆ ತೆರಳುವ ಬೆಳಿಗ್ಗಿನ ಸಮಯದಲ್ಲಿ ಗ್ರಾಮೀಣ ಸಾರಿಗೆ ವ್ಯವಸ್ಥೆ ಮೇಲೆ ವಿಪರೀತ ಒತ್ತಡ ಉಂಟಾಗುವುದನ್ನು ಗಮನಿಸಿ ಒತ್ತಡ ತಗ್ಗಿಸುವ ಸಲುವಾಗಿ ದೂರದ ಜಿಲ್ಲೆಗಳಿಂದ ಬಳ್ಳಾರಿಗೆ ಬೆಳಿಗ್ಗೆ ಬರುವ ಬಸ್ ಗಳಿಗೆ ಒಂದು ಸರತಿ ‘ಸ್ಕೂಲ್ ರೌಂಡ್' ಹೋಗಿ ಬರಲು ಸೂಚನೆ ನೀಡಲಾಗಿದೆ.
ಅಗತ್ಯವಿರುವ ಕಡೆ ಸರ್ವೆ ಮಾಡಿ ಬಸ್ ಗಳ ವ್ಯವಸ್ಥೆ ತೊಂದರೆಗಳ ನಡುವೆಯೂ ಉತ್ತಮ ಸೇವೆ ನೀಡಲು ಪ್ರಯತ್ನಿಸುತ್ತಿದೆ. ಶಾಲಾ- ಕಾಲೇಜು ಮಕ್ಕಳಿಗಾಗಿ ಸಾರಿಗೆ ಸೇವೆಯೂ ಹೆಚ್ಚಿಸಲಾಗಿದೆ. ಕೆಕೆಆರ್‌ಡಿಬಿ ಮತ್ತು ಡಿಎಂಎಫ್ ಅಡಿಯಲ್ಲಿ ಮತ್ತಷ್ಟು ಹೆಚ್ಚು ಬಸ್ ಗಳು ಬಂದಿವೆ. ಕೆಕೆಆರ್‌ಟಿಸಿ ಬಳ್ಳಾರಿ ವಿಭಾಗವು ಅಗತ್ಯ ಇರುವ ಕಡೆ ಸರ್ವೆ ಮಾಡಿ ಬಸ್ ಸೇವೆ ಒದಗಿಸುತ್ತಿದೆ.
ದುಡಿಯುವ ಮಹಿಳೆಯರಿಗೆ ಶಕ್ತಿ:
ರಾಜ್ಯ ಸರ್ಕಾರದ ಪ್ರಮುಖ ಧ್ಯೇಯವು ದುಡಿಯುವ ಬಡವರ್ಗದ ಮಹಿಳೆಯರಿಗೆ ಆತ್ಮಸ್ಥೆöÊರ್ಯ ತುಂಬುವುದು ಆಗಿದೆ. ಗ್ಯಾರಂಟಿ ಯೋಜನೆಗಳಲ್ಲೊಂದಾದ ಶಕ್ತಿ ಯೋಜನೆಯು ದುಡಿಯುವ ಮಹಿಳೆಯರಿಗೆ ಇನ್ನಷ್ಟು ಶಕ್ತಿ ತುಂಬುತ್ತಿದೆ.
ಗ್ರಾಮೀಣ ಭಾಗದಲ್ಲಿ ಹೆಣ್ಣು ಕುಟುಂಬದ ಕಣ್ಣಾಗಿದ್ದು, ತನ್ನ ಕುಟುಂಬದ ಪೋಷಣೆಗಾಗಿ ಸಣ್ಣ ವ್ಯಾಪಾರ-ವಹಿವಾಟುಗಳಿಗೆ ನಗರಕ್ಕೆ ಮುಖಮಾಡಿ ಬರುವಾಗ ಅವಳ ಪ್ರಯಾಣದ ಖರ್ಚು ತನ್ನ ಆದಾಯದ ಅರ್ಧದಷ್ಟಾಗುತ್ತದೆ. ತಮ್ಮ ವ್ಯಾಪಾರ ವಹಿವಾಟು ನಡೆಸಲು ಅದರ ಭಾರವನ್ನು ಹೊರೆಯಾಗದಂತೆ ನಿರ್ವಹಿಸಲು ಈ ಯೋಜನೆಯು ಸಹಕಾರಿಯಾಗುತ್ತಿದೆ.
ಶಕ್ತಿ ಯೋಜನೆ ಜಾರಿಯಾದ ನಂತರ ಮುಜರಾಯಿ ದೇಗುಲಗಳಿಗೆ ಭಕ್ತರ ಭೇಟಿ ಹೆಚ್ಚಿದೆ. ಇದರಿಂದ ಬಹುತೇಕ ದೇವಾಲಯಗಳ ಆದಾಯವೂ ದುಪ್ಪಟ್ಟಾಗಿದೆ.
ಕೋಟ್ 1:
ಜೋಳ, ಕಡ್ಲೆ ಮತ್ತು ತರಕಾರಿ ಮಾರಲು ಪ್ರತಿನಿತ್ಯ ಬಳ್ಳಾರಿ ನಗರಕ್ಕೆ ಓಡಾಡುತ್ತೇನೆ. ಮುಂಚೆ ಹಣ ನೀಡಿ ಟಿಕೇಟ್ ಪಡೆಯುತ್ತಿದ್ದೆ. ಸಿದ್ದರಾಮಯ್ಯನವರು ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ಫ್ರೀ ಟಿಕೇಟ್ ಪಡೆಯುತ್ತಿದ್ದು, ಉಳಿಯುವ ಟಿಕೇಟ್ ಹಣದಿಂದ ಬಹಳ ಅನುಕೂಲವಾಗುತ್ತಿದೆ. ಇನ್ನಷ್ಟು ವ್ಯಾಪಾರ ಕೈಗೊಳ್ಳಲು ಉತ್ತೇಜನ ದೊರಕಿದಂತಾಗಿದೆ. ಯೋಜನೆ ಜಾರಿಗೊಳಿಸಿದ ಸಿಎಂ ಸಿದ್ದರಾಮಯ್ಯ ಅವರಿಗೆ ಧನ್ಯವಾದ ಅರ್ಪಿಸುತ್ತೇನೆ.
- ಈರಮ್ಮ, ಗಿರಿಜಮ್ಮ, ಸಣ್ಣ ವ್ಯಾಪಾರಿಗಳು, ಕೆ.ವೀರಾಪುರ, ಬಳ್ಳಾರಿ ತಾಲ್ಲೂಕು.
ಕೋಟ್ 2:
ಪ್ರತಿನಿತ್ಯ ವಿದ್ಯಾಭ್ಯಾಸಕ್ಕೆ ಬೆಳಿಗ್ಗೆ ಹಳ್ಳಿಯಿಂದ ಪಟ್ಟಣಕ್ಕೆ ತೆರಳುತ್ತೇನೆ. ಸಂಚರಿಸಲು ಬಸ್ ನಲ್ಲಿ ಯಾವುದೇ ವ್ಯತ್ಯಯವಿಲ್ಲ. ಸ್ಕೂಲ್ ಅವಧಿಯಂತೆ ಬಸ್ ಓಡಾಡುವುದರಿಂದ ಸಂಚಾರಕ್ಕೆ ಅಡ್ಡಿಯಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಜಾರಿಗೊಳಿಸಿದ ಶಕ್ತಿ ಯೋಜನೆಯಿಂದ ಸೊನ್ನೆ ಮೊತ್ತದ ಟಿಕೇಟ್ ಬರುತ್ತಿದ್ದು, ಪಾಸ್‌ಗಾಗಿ ಬಳಸುತ್ತಿದ್ದ ಹಣದಿಂದ ಪುಸ್ತಕ, ಪೆನ್ ಖರೀದಿಸುತ್ತೇನೆ.
- ರೇಣುಕಾ, ಪ್ರೌಢಶಾಲೆ ವಿದ್ಯಾರ್ಥಿನಿ, ಗೆಣಿಕೆಹಾಳ್ ಗ್ರಾಮ, ಕುರುಗೋಡು ತಾಲ್ಲೂಕು.
ಕೋಟ್ 3:
ನಮ್ಮ ಗ್ರಾಮದಿಂದ 35 ಕಿ.ಮೀ ದೂರದ ಪಟ್ಟಣಕ್ಕೆ ತೆರಳಿ ಮೂರು ತಿಂಗಳ ಕಂಪ್ಯೂಟರ್ ತರಬೇತಿ ಪಡೆದುಕೊಳ್ಳಲು ಸರ್ಕಾರದ ಶಕ್ತಿ ಯೋಜನೆಯಡಿ ಉಚಿತ ಪ್ರಯಾಣ ತುಂಬಾ ಉಪಯೋಗವಾಯಿತು. ಪ್ರಸ್ತುತ ಬ್ಯೂಟಿ ಪಾರ್ಲರ್ ತರಬೇತಿ ಪಡೆಯುತ್ತಿದ್ದೇನೆ. ಜೀವನ ರೂಪಿಸಿಕೊಳ್ಳಲು ಶಕ್ತಿ ಯೋಜನೆ ಅನುಕೂಲಕರವಾಗಿದ್ದು, ಪ್ರತಿ ತಿಂಗಳು 1,000 ರಿಂದ 1,500 ರೂ. ಉಳಿತಾಯವಾಗುತ್ತಿದೆ. ರಾಜ್ಯ ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ.
- ಅಶ್ವಿನಿ.ಹೆಚ್, ತೊಣಸಿಗೇರಿ ಗ್ರಾಮ, ಸಂಡೂರು ತಾಲ್ಲೂಕು.
ಸರ್ಕಾರದ ಮಹತ್ವಕಾಂಕ್ಷಿ ಪಂಚ ಗ್ಯಾರಂಟಿ ಯೋಜನೆಗಳಾದ ಶಕ್ತಿಯೋಜನೆ, ಅನ್ನಭಾಗ್ಯ, ಗೃಹಲಕ್ಷಿö್ಮ, ಗೃಹಜ್ಯೋತಿ ಮತ್ತು ಯುವನಿಧಿ ಯೋಜನೆಗಳನ್ನು ಎಲ್ಲ ಅರ್ಹರಿಗೆ ತಲುಪಿಸುವಲ್ಲಿ ಸರ್ಕಾರವೇ ನೇಮಿಸಿರುವ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಕೆ.ಇ.ಚಿದಾನಂದಪ್ಪ ಹಾಗೂ ಉಪಾಧ್ಯಕ್ಷರಾದ ಆಶಾ ಲತಾ ಸೋಮಪ್ಪ ಅವರು, ನಿರಂತರ ಶ್ರಮ ವಹಿಸುತ್ತಿದ್ದು, ಜಿಲ್ಲೆಯ ಜೊತೆಗೆ ಪ್ರತಿ ತಾಲ್ಲೂಕು ಮಟ್ಟದಲ್ಲಿಯೂ ಯೋಜನೆ ಅನುಷ್ಠಾನದ ಪ್ರಗತಿ ಪರಿಶೀಲನೆ ನಡೆಸುತ್ತಿದ್ದಾರೆ.
ಶಕ್ತಿ ಯೋಜನೆ ಬಳಿಕ ಸಾರ್ವಜನಿಕ ಸಾರಿಗೆ ಬಸ್ ಗಳ ಬಳಕೆಯೂ ಹೆಚ್ಚಾಗಿದೆ. ಅದಕ್ಕೆ ಪೂರಕವಾಗಿ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಬಲಪಡಿಸಬೇಕು ಎಂದು ಸಾರ್ವಜನಿಕರು ಅಭಿಪ್ರಾಯ ಪಡುತ್ತಾರೆ.
----------
ಜಿಲ್ಲೆಯಲ್ಲಿ ಸಹಜ ಹೆರಿಗೆಗೆ ಆದ್ಯತೆ ನೀಡಿ: ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ
ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ):
ಗಂಡಾAತರ ಗರ್ಭಿಣಿಯರಿಗೆ ರಕ್ತಹೀನತೆಯನ್ನು ಆರಂಭದಲ್ಲಿಯೇ ನಿಯಂತ್ರಿಸಲು ಕಬ್ಬಿಣಾಂಶ ಮಾತ್ರೆಗಳನ್ನು ವೈದ್ಯರ ಸಲಹೆಯಂತೆ ತೆಗೆದುಕೊಳ್ಳಲು ವ್ಯಾಪಕ ಪ್ರಚಾರ ನೀಡಬೇಕು. ರಕ್ತಹೀನತೆ ಉಂಟಾಗುವುದು ತಡೆಗಟ್ಟುವ ಮೂಲಕ ಜಿಲ್ಲೆಯಲ್ಲಿ ಸಹಜ ಹೆರಿಗೆಯೊಂದಿಗೆ ತಾಯಿ ಮಗು ಮನೆಗೆ ಸಂತಸದಿAದ ಮರಳುವಂತೆ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ತಾಯಿ ಮತ್ತು ಶಿಶು ಮರಣ ತಡೆಗಟ್ಟುವಿಕೆ ಕುರಿತ ಅಂತರ ಇಲಾಖೆ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕುಟುಂಬದ ಸದಸ್ಯರಿಗೆ ತಮ್ಮ ಮನೆಯಲ್ಲಿರುವ ಗರ್ಭಿಣಿ ಮಹಿಳೆಗೆ ವೈದ್ಯರ ಬಳಿ ತಪಾಸಣೆಗೆ ಒಳಪಟ್ಟ ನಂತರ ರಕ್ತ ಹೀನತೆಯನ್ನು ತಡೆಗಟ್ಟಲು ಕಬ್ಬಿಣಾಂಶ ಮಾತ್ರೆಗಳನ್ನು ನಿರ್ಲಕ್ಷö್ಯವಹಿಸದೇ ತೆಗೆದುಕೊಳ್ಳಲು ಸೂಕ್ತ ಮಾಹಿತಿ ನೀಡಬೇಕು. ಗ್ರಾಮೀಣ ಪ್ರದೇಶದಲ್ಲಿ ತಾಯಂದಿರ ಆರೈಕೆ ಕುರಿತು ಕುಟುಂಬದ ಸದಸ್ಯರಿಗೆ ತಿಳಿ ಹೇಳಬೇಕು. ಚೊಚ್ಚಲು ಗರ್ಭಿಣಿ ಅವಧಿಯಲ್ಲಿ ಆರೋಗ್ಯ ಇಲಾಖೆಯು ವೈದ್ಯಕೀಯ ಕಾರಣಗಳಿಂದ ಗುರ್ತಿಸಲ್ಪಡುವ ಗಂಡಾAತರ ಗರ್ಭಿಣಿ ಸಂದರ್ಭದಲ್ಲಿ ಹೆಚ್ಚಿನ ಕಾಳಜಿ ವಹಿಸಲು ಆದ್ಯತೆ ನೀಡಬೇಕು ಎಂದು ಹೇಳಿದರು.
ಕ್ಷೇತ್ರ ಮಟ್ಟದಲ್ಲಿ ವೈದ್ಯಾಧಿಕಾರಿಗಳಿಂದ ಹಿಡಿದು ಪ್ರತಿಯೊಬ್ಬ ಸಿಬ್ಬಂದಿಯವರು ಗಂಡಾAತರ ಗರ್ಭಿಣಿ ಎಂದು ತಿಳಿದ ದಿನದಿಂದಲೇ ಕಬ್ಬಿಣಾಂಶ ಮಾತ್ರೆಗಳ ಕುರಿತು ಪಾಲಕರಲ್ಲಿ ತಪ್ಪು ನಂಬಿಕೆಗಳು ಇದ್ದಲ್ಲಿ ಹೆಚ್ಚಿನ ಜಾಗೃತಿ ನೀಡಬೇಕು. ಮಾತ್ರೆಗಳನ್ನು ಪ್ರತಿದಿನ ತಪ್ಪದೇ ನುಂಗಲು ತಿಳಿಸಬೇಕು. ವೈದ್ಯರ ಸಲಹೆ ಮೇರೆಗೆ ಸ್ಕಾö್ಯನಿಂಗ್, ರಕ್ತ ಪರೀಕ್ಷೆ, ಮೂತ್ರ ಪರೀಕ್ಷೆ, ಹೆಚ್.ಐ.ವಿ ಪರೀಕ್ಷೆ, ಅಗತ್ಯವೆನಿಸುವ ಇತರೆ ಪರೀಕ್ಷೆಗಳನ್ನು ಕಾಲ ಕಾಲಕ್ಕೆ ಮಾಡಿಸಲು ಸೂಚಿಸಬೇಕು ಎಂದರು.
ತಾಯಿ ಕಾರ್ಡ್ನಲ್ಲಿ ಎಲ್ಲಾ ದಾಖಲೆಗಳ ವಿವರಗಳನ್ನು ಕಡ್ಡಾಯವಾಗಿ ನಮೂದಿಸಬೇಕು. ಗರ್ಭಿಣಿ ಮಹಿಳೆಯು ಯಾವುದೇ ಆಸ್ಪತ್ರೆಗೆ ತಪಾಸಣೆಗೆ ಹೋದ ಸಂದರ್ಭದಲ್ಲಿ ತಾಯಿ ಕಾರ್ಡ್ ಆಧಾರದ ಮೇಲೆ ಚಿಕಿತ್ಸೆ ಮುಂದುವರೆಸಬೇಕು.
ಜಿಲ್ಲೆಯ ಎಲ್ಲಾ ಆರೋಗ್ಯ ಕೇಂದ್ರಗಳ ನೀರಿನ ಸಂಗ್ರಹಗಳನ್ನು ಪರೀಕ್ಷಿಸಬೇಕು. ಸೂಕ್ತ ಕಾರ್ಯ ಯೋಜನೆಯೊಂದಿಗೆ ಪೌಷ್ಟಿಕ ಆಹಾರ ಒದಗಿಸಬೇಕು ಎಂದು ಸೂಚಿಸಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಮಾತನಾಡಿ, ಗರ್ಭಿಣಿಯರ ದ್ವಿತೀಯ ತ್ರೆöÊಮಾಸಿಕ ಆರಂಭದ ನಂತರ ಒಂದು ಅಲ್ಬೆಂಡಜೋಲ್ ಮಾತ್ರೆಯನ್ನು ನೀಡಲಾಗುತ್ತಿದ್ದು, ರಕ್ತದಲ್ಲಿ ಹೆಚ್.ಬಿ ಪ್ರಮಾಣ 10 ಕ್ಕಿಂತ ಮೇಲ್ಪಟ್ಟವರಿಗೆ ಪ್ರತಿ ದಿನ ಒಂದರAತೆ 180 ಕಬ್ಬಿಣಾಂಶ ಮಾತ್ರೆಗಳು, ಹೆಚ್.ಬಿ ಪ್ರಮಾಣ 9 ರಿಂದ 10 ಮಧ್ಯೆದಲ್ಲಿರುವವರಿಗೆ ಪ್ರತಿ ದಿನ 2 ರಂತೆ 360 ಕಬ್ಬಿಣಾಂಶ ಮಾತ್ರೆಗಳು, ಹೆಚ್.ಬಿ.ಪ್ರಮಾಣ 7 ರಿಂದ 9 ಇರುವವರಿಗೆ 5 ಬಾರಿ ಐರನ್ ಸುಕ್ರೋಸ್ ಚುಚ್ಚುಮದ್ದು ನೀಡಲಾಗುವುದು ಎಂದು ಸಭೆಗೆ ತಿಳಿಸಿದರು.
ಒಂದು ವೇಳೆ 7 ಕ್ಕಿಂತ ಕಡಿಮೆ ಇದ್ದಲ್ಲಿ ರಕ್ತ ಹಾಕಿಸುವ ಕಾರ್ಯ ಮಾಡಲಾಗುತ್ತಿದ್ದು, ಎಲ್ಲಾ ಗರ್ಭಿಣಿಯರಿಗೂ ಕ್ಯಾಲ್ಶಿಯಂ ಮಾತ್ರೆಯನ್ನು ನೀಡಲಾಗುತ್ತಿದೆ. ಪ್ರತಿ ತಿಂಗಳು ವೈದ್ಯರ ಮೂಲಕ ತಪಾಸಣೆಯನ್ನು 7ನೇ ತಿಂಗಳವರೆಗೆ, 7 ರಿಂದ 9 ತಿಂಗಳಲ್ಲಿ ಪ್ರತಿ 15 ದಿನಕ್ಕೊಮ್ಮೆ ತಪಾಸಣೆ ಹಾಗೂ 9 ತಿಂಗಳ ನಂತರ ಪ್ರತಿ ವಾರ ವೈದ್ಯರ ಮೂಲಕ ತಪಾಸಣೆ ಮಾಡಿಸುವ ಜೊತೆಗೆ ಪ್ರತಿ ತಿಂಗಳು 09ನೇ ಮತ್ತು 20ನೇ ತಾರೀಖುನಂದು ಎಲ್ಲಾ ಗರ್ಭಿಣಿಯರ ತಪಾಸಣೆ ಕೈಗೊಂಡು ಜಾಗೃತಿ ನೀಡಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಎಸ್.ಸಂಕನೂರು, ಬಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ, ಜಿಲ್ಲಾ ಶಸ್ತçಚಿಕಿತ್ಸಕ ಡಾ.ಎನ್ ಬಸರೆಡ್ಡಿ, ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ, ಬಿಮ್ಸ್ ತಜ್ಞರಾದ ಡಾ.ಚಂದ್ರಶೇಖರ್, ಡಾ.ಶ್ರೀಕಾಂತ, ಕಾರ್ಯಕ್ರಮ ಅನುಷ್ಠಾನಾಧಿಕಾರಿಗಳು ಹಾಗೂ ತಾಲ್ಲೂಕು ಆರೋಗ್ಯ ಅಧಿಕಾರಿಗಳು, ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
----------
ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ: ಅರ್ಜಿ ಸಲ್ಲಿಕೆಯ ಅವಧಿ ವಿಸ್ತರಣೆ
ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ):
ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ವಿಶೇಷ ಪ್ರೋತ್ಸಾಹ ಧನ ನೀಡಲು ಈಗಾಗಲೇ ಅರ್ಜಿ ಸಲ್ಲಿಸಲು ಸೇವಾಸಿಂಧು ಪೋರ್ಟಲ್‌ನಲ್ಲಿ ಆಹ್ವಾನಿಸಲಾಗಿತ್ತು. ಅರ್ಜಿ ಸಲ್ಲಿಸುವ ಅವಧಿಯನ್ನು ಜನವರಿ 06 ರವರೆಗೆ ವಿಸ್ತರಿಸಲಾಗಿದೆ ಎಂದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ದ, ಸಿಖ್ಖ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ ಮಾತ್ರ 2024-25ನೇ ಸಾಲಿಗೆ ಬಿ.ಎಡ್ ಕೋರ್ಸ್ಗೆ ಮಾತ್ರ ಅರ್ಜಿ ಆಹ್ವಾನಿಸಲಾಗಿದ್ದು, ಸೇವಾ ಸಿಂಧು ಅಭ್ಯರ್ಥಿಗಳು ಸೇವಾಸಿಂದು ಪೋರ್ಟಲ್ https;//sevasindu.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲೆಗಳೊಂದಿಗೆ ವಿದ್ಯಾರ್ಥಿ ವ್ಯಾಸಂಗ ಮಾಡುತ್ತಿರುವ ಕಾಲೇಜು ಇರುವ ತಾಲೂಕಿನ ಅಲ್ಪಸಂಖ್ಯಾತರ ಮಾಹಿತಿ ಕೇಂದ್ರಗಳಲ್ಲಿ ಸಲ್ಲಿಸಬೇಕು.
ಜಿಲ್ಲಾ ಮತ್ತು ತಾಲ್ಲೂಕುವಾರು ವಿವರ:
ಬಳ್ಳಾರಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಮೌಲಾನ ಅಜಾದ ಭವನ, ಜೋಳದರಾಶಿ ದೊಡ್ಡನಗೌಡ ರಂಗಮAದಿರ ಹತ್ತಿರ-ಮೊ.8310321101, ಸಂಡೂರು ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ತೋಟಗಾರಿಗೆ ಇಲಾಖೆೆ ಕಚೇರಿ ಆವರಣ ಸಂಡೂರು (ಮೊ.9036925966, 8660575061), ಸಿರುಗುಪ್ಪ ತಾಲೂಕು ಅಲ್ಪಸಂಖ್ಯಾತರ ಮಾಹಿತಿ ಕೇಂದ್ರ, ನಗರಸಭೆ ಕಚೇರಿ ಆವರಣ, ಬಳ್ಳಾರಿ ರಸ್ತೆ, ಸಿರುಗುಪ್ಪ (ಮೊ.9148889975).
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಹಾಯವಾಣಿ ಸಂಖ್ಯೆ 8277799990 (24*7) ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಶಿಕ್ಷಣದಿಂದ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಸಾಧ್ಯ: ನ್ಯಾ.ರಾಜೇಶ್ ಎನ್.ಹೊಸಮನೆ
ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ):
ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆ ಮಾಡಲು ಮಕ್ಕಳಿಗೆ ಶಿಕ್ಷಣ ಕೊಡಿಸಬೇಕು. ಶಿಕ್ಷಣದಿಂದ ಮಾತ್ರ ಬಾಲಕಾರ್ಮಿಕ ಪದ್ದತಿ ನಿರ್ಮೂಲನೆ ಮಾಡಲು ಸಾಧ್ಯ ಎಂದು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ ಅವರು ಹೇಳಿದರು.
ಕಾರ್ಮಿಕ ಇಲಾಖೆ ಮತ್ತು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಸಹಯೋಗದಲ್ಲಿ ಸಂಸ್ಥೆಯ ಸಭಾಂಗಣದಲ್ಲಿ ಇತ್ತೀಚೆಗೆ ನಡೆದ ವ್ಯಾಪಾರಿ- ವಾಣಿಜ್ಯೋದ್ಯಮಿಗಳ ಸೌಹಾರ್ದ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ಬಾಲಕಾರ್ಮಿಕ ಪದ್ಧತಿಯು ಸಮಾಜದಲ್ಲಿ ದೊಡ್ಡ ಪಿಡುಗಾಗಿದ್ದು, ಶಿಕ್ಷಣದ ಮೂಲಕವೇ ಈ ಸಮಸ್ಯೆಗೆ ಪರಿಹಾರ ಸಾಧ್ಯ. ಅಧಿಕಾರಿಗಳು ಮತ್ತು ವ್ಯಾಪಾರಿ- ಉದ್ಯಮಿಗಳು ಪರಸ್ಪರ ಮಾನವೀಯತೆಯ ಆಧಾರದಲ್ಲಿ ಸಮಸ್ಯೆಗೆ ಪರಿಹಾರ ಕಂಡುಹಿಡಿಯಬೇಕು ಎಂದು ತಿಳಿಸಿದರು.
ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಯಶವಂತರಾಜ್ ನಾಗಿರೆಡ್ಡಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಕಾರ್ಮಿಕ ಇಲಾಖೆ ಮತ್ತು ವ್ಯಾಪಾರ-ವಾಣಿಜ್ಯೋದ್ಯಮಿಗಳು ಪರಸ್ಪರ ಸಹಕಾರದಿಂದ ಇದ್ದಲ್ಲಿ ಮಾತ್ರ ಬಾಲಕಾರ್ಮಿಕ ಸಮಸ್ಯೆಯನ್ನು ಶಾಶ್ವತವಾಗಿ ಪರಿಹರಿಸಲು ಸಾಧ್ಯ ಎಂದು ಅವರು ತಿಳಿಸಿದರು.
ಪ್ರತಿ ಮೂರು ಅಥವಾ ಆರು ತಿಂಗಳಿಗೆ ವ್ಯಾಪಾರಿ ಮತ್ತು ಉದ್ಯಮಿಗಳಿಗೆ ಅರಿವು ಕಾರ್ಯಾಗಾರ ಏರ್ಪಡಿಸಬೇಕು. ಕಾರ್ಮಿಕ ಇಲಾಖೆಯು ಕಾಲ ಕಾಲಕ್ಕೆ ಸಭೆ ನಡೆಸಬೇಕು ಎಂದರು.
ಕಾರ್ಮಿಕ ಅಧಿಕಾರಿ ಸಿದ್ದಪ್ಪ ಖೈನೂರ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿವಾರಣೆ ಮಾಡಲು ವ್ಯಾಪಾರಿಗಳು ಮತ್ತು ಉದ್ಯಮಿಗಳು ಪರಸ್ಪರ ಸಹಕಾರ ನೀಡಬೇಕು ಎಂದರು.
ಬಾಲಕಾರ್ಮಿಕ ಯೋಜನೆಯ ಯೋಜನಾಧಿಕಾರಿ ಮೌನೇಶ್ ಅವರು ಮಾತನಾಡಿ, ಮಕ್ಕಳು ಶಿಕ್ಷಣ ಹೊಂದುವಲ್ಲಿ ಮೂಲಭೂತ ಹಕ್ಕು ಹೊಂದಿದ್ದು, ಮಕ್ಕಳನ್ನು ಸಾಕಲಾಗದ ಪೋಷಕರು - ಪಾಲಕರು ಇದ್ದಲ್ಲಿ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲುö್ಯಸಿ)ಗೆ ತಿಳಿಸಿದಲ್ಲಿ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದರು.
ಈ ವೇಳೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಜಂಟಿ ಕಾರ್ಯದರ್ಶಿಗಳಾದ ಡಾ.ಮರ್ಚೇಡ್ ಮಲ್ಲಿಕಾರ್ಜುನಗೌಡ, ವಿ.ರಾಮಚಂದ್ರ, ಗೌರವ ಕಾರ್ಯದರ್ಶಿ ಕೆ.ಸಿ.ಸುರೇಶಬಾಬು, ಹೋಟಲ್ ಮಾಲೀಕರ ಸಂಘದ ಪೋಲಾ ವಿಕ್ರಮ, ವ್ಯಾಪಾರಿಗಳ ಪರವಾಗಿ ಜೆ.ರಾಜೇಶ್, ಲಕ್ಷಿö್ಮÃನಾರಾಯಣ, ಎಸ್.ಎಂ.ವೇಣುಗೋಪಾಲ್ ಸೇರಿದಂತೆ ವಿವಿಧ ಸಂಘಟನೆಗಳ ಪದಾಧಿಕಾರಿಗಳು- ಸದಸ್ಯರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.
---------
ಖೆಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ಗೆ ಸಚಿನ್ ಆಯ್ಕೆ
ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ):
ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯದ ಸಚಿನ್ (ಜಿ.ಬಿ.ಆರ್. ಕಾಲೇಜು, ಹೂವಿನಹಡಗಲಿ) ಅವರು ಒಡಿಸ್ಸಾದ ಕಳಿಂಗ ವಿಶ್ವವಿದ್ಯಾಲಯ ಭುವನೇಶ್ವರದಲ್ಲಿ ನಡೆದ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಪುರುಷÀ ಮತ್ತು ಮಹಿಳೆಯರ ಅಥ್ಲೆಟಿಕ್ ಪಂದ್ಯಾವಳಿಯಲ್ಲಿ ಹ್ಯಾಮರ್ ಥ್ರೊದಲ್ಲಿ ಖೆಲೋ ಇಂಡಿಯಾ ಯುನಿವರ್ಸಿಟಿ ಗೇಮ್ಸ್ 2025 ಕ್ಕೆ ಅರ್ಹತೆ ಪಡೆದಿದ್ದಾರೆ.
ಕ್ರೀಡಾಪಟುವಿನ ಸಾಧನೆಗೆ ವಿಶ್ವವಿದ್ಯಾಲಯದ ಕುಲಪತಿಗಳು, ಕುಲಸಚಿವರು(ಆಡಳಿತ), ಕುಲಸಚಿವರು ಮೌಲ್ಯಮಾಪನ, ಹಣಕಾಸು ಅಧಿಕಾರಿಗಳು, ದೈಹಿಕ ಶಿಕ್ಷಣ ಮತ್ತು ಕ್ರೀಡಾ ವಿಭಾಗ ಹಾಗೂ ಅಥ್ಲೆಟಿಕ್ಸ್ ತಂಡದ ವ್ಯವಸ್ಥಾಪಕರು ಮತ್ತು ತರಬೇತುದಾರರಾದ ಡಾ.ಶಶಿಧರ ಕೆಲ್ಲೂರ ಮತ್ತು ಬಡೇಸಾಬ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಶುಭ ಕೋರಿದ್ದಾರೆ.
-------
ಯುವತಿ ಕಾಣೆ: ಪತ್ತೆಗೆ ಮನವಿ
ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ):
ಸಿರುಗುಪ್ಪ ಪಟ್ಟಣದ ನಿವಾಸಿ ಗಾಯತ್ರಿ ಎನ್ನುವ 22 ವರ್ಷದ ಯುವತಿ ನ.18 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
*ಯುವತಿಯ ಚಹರೆ:*
ಎತ್ತರ 5.5 ಅಡಿ, ದುಂಡು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಹಣೆಗೆ ಹಚ್ಚೆ ಗುರುತು ಇರುತ್ತದೆ. ಯುವತಿ ಕಾಣೆಯಾದ ಸಂದರ್ಭದಲ್ಲಿ ಕೆಂಪು ಬಣ್ಣದ ಚುಕ್ಕೆ ಇರುವ ನೈಟಿ ತೊಟ್ಟಿದ್ದು, ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾಳೆ.
ಮೇಲ್ಕಂಡ ಚಹರೆ ಗುರುತುಗಳುಳ್ಳ ಯುವತಿಯ ಬಗ್ಗೆ ಮಾಹಿತಿ ದೊರೆತಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ದೂ.08396-220333, ಸಿರುಗುಪ್ಪ ವೃತ್ತದ ಸಿಪಿಐ ದೂ.08396-220003, ಸಿರುಗುಪ್ಪ ಉಪ ವಿಭಾಗದ ಡಿಎಸ್‌ಪಿ ದೂ.08392-276000 ಅಥವಾ ಬಳ್ಳಾರಿ ಎಸ್‌ಪಿ ಅವರ ಕಚೇರಿ ದೂ.08392-25400 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ವ್ಯಕ್ತಿ ಕಾಣೆ: ಪ್ರಕರಣ ದಾಖಲು
ಬಳ್ಳಾರಿ,ಡಿ.30(ಕರ್ನಾಟಕ ವಾರ್ತೆ):
ಸಿರುಗುಪ್ಪ ಪಟ್ಟಣದ ಬಸವೇಶ್ವರ ನಗರದ ನಿವಾಸಿ ಹಾಗೂ ಸಿಮೆಂಟ್ ವ್ಯಾಪಾರ ನಡೆತ್ತಿದ್ದ ಎಂ.ಸೋಮಪ್ಪ ಎನ್ನುವ 38 ವರ್ಷದ ವ್ಯಕ್ತಿ ನ.26 ರಂದು ಕಾಣೆಯಾಗಿರುವ ಕುರಿತು ಸಿರುಗುಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಠಾಣಾಧಿಕಾರಿ ಮನವಿ ಮಾಡಿದ್ದಾರೆ.
*ಕಾಣೆಯಾದ ವ್ಯಕ್ತಿಯ ಚಹರೆ:*
ಎತ್ತರ 5.6 ಅಡಿ, ದುಂಡು ಮುಖ, ಕಪ್ಪನೇ ಮೈಬಣ್ಣ, ದೃಢವಾದ ಮೈಕಟ್ಟು ಹೊಂದಿದ್ದು, ಕಾಣೆಯಾದ ಸಂದರ್ಭದಲ್ಲಿ ಬಿಳಿ ಬಣ್ಣದ ಅರ್ಧ ತೋಳಿನ ಅಂಗಿ, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ ಹಾಗೂ ಕನ್ನಡ ಭಾಷೆ ಮಾತನಾಡುತ್ತಾನೆ.
ವ್ಯಕ್ತಿಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಸಿರುಗುಪ್ಪ ಪೊಲೀಸ್ ಠಾಣೆಯ ಪಿಎಸ್‌ಐ ದೂ.08396-220333, ಸಿರುಗುಪ್ಪ ವೃತ್ತದ ಸಿಪಿಐ ದೂ.08396-220003, ಸಿರುಗುಪ್ಪ ಉಪ ವಿಭಾಗದ ಡಿಎಸ್‌ಪಿ ದೂ.08392-276000 ಅಥವಾ ಬಳ್ಳಾರಿ ಎಸ್‌ಪಿ ಕಚೇರಿ ದೂ.08392-25400 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಗುರುವಾರ, ಡಿಸೆಂಬರ್ 26, 2024
ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಅಪೂರ್ಣ ಅರ್ಜಿಗಳ ಪುನಃ ಭರ್ತಿಗೆ ಅವಕಾಶ
ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ):
ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ಬಳ್ಳಾರಿ (ಗ್ರಾ), ಕುರುಗೋಡು ಮತ್ತು ಕಂಪ್ಲಿ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 25 ಅಂಗನವಾಡಿ ಕಾರ್ಯಕರ್ತೆಯರು ಮತ್ತು 58 ಸಹಾಯಕಿಯರ ಗೌರವಸೇವೆಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಈಗಾಗಲೇ ಕಾಲಾವಕಾಶ ಮುಗಿದಿದ್ದು, ಅಪೂರ್ಣವಾದ ಅರ್ಜಿಗಳನ್ನು ಪುನಃ ಭರ್ತಿ ಮಾಡಲು ಜ.05 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಬಳ್ಳಾರಿ ಗ್ರಾಮಾಂತರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 04 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವರಿಗೆ ಒಂದನೇ ಹಂತದಲ್ಲಿಯೇ “ಅಪ್ಲಿಕೇಶನ್ ಸಕ್ಸೆಸ್‌ಫುಲ್ ಅಪ್‌ಲೋಡೆಡ್” ಎಂಬ ಮೆಸೇಜ್ ಮೊಬೈಲ್ ಸಂಖ್ಯೆಗಳಿಗೆ ಸ್ವೀಕೃತವಾಗಿರುವುದರಿಂದ ಅರ್ಜಿಗಳನ್ನು ಪೂರ್ಣಗೊಳಿಸಿರುವುದಿಲ್ಲ.
ಬಳ್ಳಾರಿ ತಾಲ್ಲೂಕಿನ ವ್ಯಾಪ್ತಿಯ ಕಾರ್ಯಕರ್ತೆಯರ ಹುದ್ದೆಗೆ 304 ಅಪೂರ್ಣ ಅರ್ಜಿ ಹಾಗೂ ಸಹಾಯಕಿಯರ ಹುದ್ದೆಗಳಿಗೆ 111 ಅಪೂರ್ಣ ಅರ್ಜಿ, ಕುರುಗೋಡು ತಾಲ್ಲೂಕು ವ್ಯಾಪ್ತಿಯ ಕಾರ್ಯಕರ್ತೆಯರ ಹುದ್ದೆಗೆ 190 ಹಾಗೂ ಸಹಾಯಕಿಯರ ಹುದ್ದೆಗಳಿಗೆ 128, ಕಂಪ್ಲಿ ತಾಲ್ಲೂಕು ವ್ಯಾಪ್ತಿಯ ಕಾರ್ಯಕರ್ತೆಯರ ಹುದ್ದೆಗೆ 31, ಸಹಾಯಕಿಯರ ಹುದ್ದೆಗಳಿಗೆ 07 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿರುತ್ತವೆ. ಅಪೂರ್ಣ ಅರ್ಜಿಗಳ ಬಗ್ಗೆ ಮಾಹಿತಿಯನ್ನು ಆಯಾ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪಡೆಯಬಹುದಾಗಿದೆ.
ಅರ್ಜಿ ಸಲ್ಲಿಸುವ 04 ಹಂತಗಳನ್ನು ಪೂರ್ಣಗೊಳಿಸದೇ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಮಾತ್ರ ಜ.05 ರ ವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್: https://karnemakaone.kar.nic.in/abcd/ ನಲ್ಲಿ ಪೂರ್ಣಗೊಳಿಸಲು ಕಾಲಾವಕಾಶ ನೀಡಲಾಗಿದೆ.
01 ನೇ ಹಂತ: ಆನ್‌ಲೈನ್ ತಂತ್ರಾAಶದಲ್ಲಿ ನಿಗಧಿತ ಅರ್ಜಿ ನಮೂನೆಯಲ್ಲಿ ಮಾಹಿತಿಯನ್ನು ತುಂಬುವುದು.
02 ನೇ ಹಂತ: ತಮ್ಮ ಭಾವಚಿತ್ರ ಮತ್ತು ಸಹಿ ಅಪ್‌ಲೋಡ್ ಮಾಡುವುದು.
03 ನೇ ಹಂತ: ತಮ್ಮ ದಾಖಲಾತಿಗಳನ್ನು ಅಪ್‌ಲೋಡ್ ಮಾಡುವುದು.
04 ನೇ ಹಂತ: ತಮ್ಮ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರದೊಂದಿಗೆ ಅರ್ಜಿಯನ್ನು ಪೂರ್ಣಗೊಳಿಸುವುದು.
ವಿಶೇಷ ಸೂಚನೆ: ಅರ್ಜಿ ಆಹ್ವಾನಿಸಿದ ಅಧಿಸೂಚನೆಯ ಕೊನೆಯ ದಿನಾಂಕದೊಳಗೆ ಪಡೆಯಲಾದ ದಾಖಲಾತಿಗಳನ್ನು ಮಾತ್ರ ಪರಿಗಣಿಸಲಾಗುವುದು. ಮುಂದುವರೆದು ವಿಸ್ತರಣಾ ದಿನಾಂಕದಲ್ಲಿ ಪಡೆದ ದಾಖಲಾತಿಗಳನ್ನು ಪರಿಗಣಿಸಲಾಗುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಬಳ್ಳಾರಿ (ಗ್ರಾಮಾಂತರ) ಶಿಶು ಅಭಿವೃದ್ಧಿ ಯೋಜನಾ ಕಚೇರಿ ಅಥವಾ ಅಥವಾ ದೂ.08392-266080 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-----------
ಡಿ.28 ರಂದು ಸೋಮಸಮುದ್ರ-ಗುಡದೂರು ವಿದ್ಯುತ್ ಉಪಕೇಂದ್ರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ):
ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ಉಪ-ಕೇಂದ್ರದ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೆöÊಮಾಸಿಕ ನಿರ್ವಹಣೆ ಮತ್ತು ದುರಸ್ತಿ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರ ಮತ್ತು 33/11ಕೆ.ವಿ ಗುಡದೂರು ವಿದ್ಯುತ್ ಉಪಕೇಂದ್ರದಿAದ ವಿದ್ಯುತ್ ಸರಬರಾಜು ಆಗುವ 11ಕೆ.ವಿ ಮಾರ್ಗಗಳಲ್ಲಿ ಡಿ.28 ರಂದು ಬೆಳಿಗ್ಗೆ 10 ಗಂಟೆಯಿAದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-1 ಎನ್‌ಜೆವೈ ಬಾಲಾಜಿ ನಗರ ಕ್ಯಾಂಪ್ ಮಾರ್ಗದ ಕರ‍್ಲಗುಂದಿ, ವಿಜಯನಗರ ಕ್ಯಾಂಪ್, ಜಾಲಿಬೆಂಜಿ, ಬಾಲಾಜಿ ನಗರ ಕ್ಯಾಂಪ್, ಜ್ಯಾಲಿಬೆಂಜಿ. ಎಫ್-2 ಐ.ಪಿ ಸೆಟ್ ಫೀಡರ್ ಸೋಮಸಮುದ್ರ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಕೊಳಗಲ್ಲು, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್, ಕೃಷಿ ಪ್ರದೇಶಗಳು.
ಎಫ್-11 ಶ್ರೀಧರಗಡ್ಡೆ ಎನ್.ಜೆ.ವೈ ಫೀಡರ್ ಮಾರ್ಗದ ಸೋಮಸಮುದ್ರ, ವಕ್ರಾಣಿ ಕ್ಯಾಂಪ್, ಲಕ್ಷಿö್ಮನಗರ ಕ್ಯಾಂಪ್, ವೀರಾಂಜಿನೇಯ ಕ್ಯಾಂಪ್, ಕೋಳೂರು, ಮದಿರೆ, ಭಾಗ್ಯನಗರ ಕ್ಯಾಂಪ್, ಮಲ್ಲಾರೆಡ್ಡಿ ಕ್ಯಾಂಪ್ ಗ್ರಾಮಗಳು. ಕೋಳೂರು ಕ್ರಾಸ್, ದಮ್ಮೂರು, ಡಿ.ಕಗ್ಗಲ್, ವಿ.ಟಿ.ಕ್ಯಾಂಪ್.
ಎಫ್-4 ಐ.ಪಿ ಸೆಟ್ ಕರ‍್ಲಗುಂದಿ ಫೀಡರ್ ಮಾರ್ಗದ ಕರ‍್ಲಗುಂದಿ, ಬಾಲಾಜಿನಗರ ಕ್ಯಾಂಪ್, ಜ್ಯಾಲಿಬೆಂಜಿ, ಶ್ರೀಧರಗಡ್ಡೆ, ವಿಜಯನಗರ ಕ್ಯಾಂಪ್, ಕೃಷಿ ಪ್ರದೇಶಗಳು. ಎಫ್-5 ಡಾಕ್ಟರ್ ಕ್ಯಾಂಪ್ ಮಾರ್ಗದ ಶ್ರೀಧರಗಡ್ಡೆ, ಗುಡಾರ್ ನಗರ.
ಎಫ್-01 ಡಿ.ಕಗ್ಗಲ್ ಐಪಿ ಮಾರ್ಗದ ಡಿ.ಕಗ್ಗಲ್ ಕೃಷಿ ಪ್ರದೇಶಗಳು. ಎಫ್02- ಗುಡುದೂರು ಐಪಿ ಮಾರ್ಗದ ಗುಡುದೂರು, ಹಂದಿಹಾಳ್ ಕೃಷಿ ಪ್ರದೇಶಗಳು. ಎಫ್-03 ಹಂದಿಹಾಳ್ ಐಪಿ ಮಾರ್ಗದ ಹಂದಿಹಾಳ್, ಚಾನಾಳ್ ಕೃಷಿ ಪ್ರದೇಶಗಳು. ಎಫ್-04 ಗುಡುದೂರು ಎನ್.ಜೆ.ವೈ ಮಾರ್ಗದ ಹಂದಿಹಾಳ್, ಚಾನಾಳ್, ಗುಡುದೂರು ಗ್ರಾಮ.
ಎಫ್-05 ಚಾನಾಳ್ ಐಪಿ ಮಾರ್ಗದ ಚಾನಾಳ್ ಕೃಷಿ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ್‌ಬಾಬು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
---------
ಅಪೂರ್ಣ ಅರ್ಜಿ ಪುನಃ ಭರ್ತಿಗೆ ಜ.05 ರವರೆಗೆ ಅವಕಾಶ
ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ):
ಬಳ್ಳಾರಿ(ನಗರ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 64 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಧಿಸೂಚನೆ ಹೊರಡಿಸಿ ಅರ್ಜಿ ಸಲ್ಲಿಸಲು ಕಾಲಾವಕಾಶ ನೀಡಲಾಗಿತ್ತು. ಈಗಾಗಲೇ ಕಾಲಾವಕಾಶ ಮುಗಿದಿದ್ದು, ಅಪೂರ್ಣವಾದ ಅರ್ಜಿಗಳನ್ನು ಪುನಃ ಭರ್ತಿ ಮಾಡಲು ಜ.05 ರವರೆಗೆ ಕಾಲಾವಕಾಶ ನೀಡಲಾಗಿದೆ ಎಂದು ಬಳ್ಳಾರಿ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ತಿಳಿಸಿದ್ದಾರೆ.
ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವರಿಗೆ 1ನೇ ಹಂತದಲ್ಲಿಯೇ ಅಪ್ಲಿಕೇಷನ್ ಸಕ್ಸಸ್‌ಪುಲ್ ಅಪ್‌ಲೋಡ್ ಎಂಬ ಮೆಸೇಜ್ ಅವರ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿ ಪೂರ್ಣಗೊಳಿಸಿರುವುದಿಲ್ಲ.
ಸರ್ಕಾರದ ಆದೇಶದನ್ವಯ ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಜ.05 ರವರೆಗೆ ಅರ್ಜಿ ಪೂರ್ಣಗೊಳಿಸಲು ವೆಬ್‌ಸೈಟ್ ವಿಳಾಸ: hಣಣಠಿs://https://karnemakaone.kar.nic.in/adcd/ ಮೂಲಕ ಅವಕಾಶ ನೀಡಿ ಆದೇಶಿಸಲಾಗಿದೆ.
ಅಭ್ಯರ್ಥಿಗಳು ಮೊದಲನೇ ಹಂತ ಆನ್‌ಲೈನ್‌ನಲ್ಲಿ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬುವುದು. 2ನೇ ಹಂತದಲ್ಲಿ ಭಾವಚಿತ್ರ ಮತ್ತು ಸಹಿ ಅಪ್‌ಲೋಡ್ ಮಾಡಬೇಕು. 3ನೇ ಹಂತದಲ್ಲಿ ದಾಖಲಾತಿ ಅಪ್ಲೋಡ್ ಮಾಡಬೇಕು. 4ನೇ ಹಂತ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರಯೊಂದಿಗೆ ಅರ್ಜಿ ಪೂರ್ಣಗೊಳಿಸಬೇಕು.
ಬಳ್ಳಾರಿ(ನಗರ)ದ ಅಂಗನವಾಡಿ ಸಹಾಯಕಿಯರ ಹುದ್ದೆಗೆ 259 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿವೆ ಅಪೂರ್ಣವಾದ ಅರ್ಜಿದಾರರ ಹೆಸರನ್ನು ಆಯಾ ಅಂಗನವಾಡಿ ಕೇಂದ್ರದಲ್ಲಿ ಲಭ್ಯವಿರುತ್ತದೆ, ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ತೆಗೆದುಕೊಂಡು ಅರ್ಜಿ ಪೂರ್ಣಗೊಳಿಸಬೇಕು ಎಂದು ಬಳ್ಳಾರಿ(ನಗರ) ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
----------
ಜ.01 ರಂದು ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮ
ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಜ.01 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕೂಡ್ಲಿಗಿ ತಾಲ್ಲೂಕಿನ ಖಾನಹೊಸಳ್ಳಿಯ ಸಾಹಿತಿಗಳು ಹಾಗೂ ನಿವೃತ್ತ ಪ್ರಾಂಶುಪಾಲರಾದ ಡಾ.ವೃಷಭೇಂದ್ರಚಾರ್ಯ ಅರ್ಕಸಾಲಿ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ಕಂಪ್ಲಿ ತಾಲ್ಲೂಕಿನ ಎಮ್ಮಿಗನೂರಿನ ರಾಜು ತಂಡದಿAದ ಭಕ್ತಿ ಸಂಗೀತ ಇರಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
----------
ಡಿ.29 ರಂದು ರಾಷ್ಟçಕವಿ ಕುವೆಂಪು ಜನ್ಮದಿನದ ಅಂಗವಾಗಿ “ವಿಶ್ವಮಾನವ ದಿನಾಚರಣೆ” ಕಾರ್ಯಕ್ರಮ
ಬಳ್ಳಾರಿ,ಡಿ.26(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟçಕವಿ ಕುವೆಂಪು ಜನ್ಮದಿನ ಅಂಗವಾಗಿ “ವಿಶ್ವಮಾನವ ದಿನಾಚರಣೆ” ಕಾರ್ಯಕ್ರಮವನ್ನು ಡಿ.29 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್‌ಕುಮಾರ್ ರಸ್ತೆಯ ಸಾಂಸ್ಕೃತಿಕ ಸಮುಚ್ಛಯ ಆವರಣದ ಹೊಂಗಿರಣದಲ್ಲಿ ಆಯೋಜಿಸಲಾಗಿದೆ.
ವಸತಿ, ವಕ್ಫ್ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಸಚಿವರು ಹಾಗೂ ಬಳ್ಳಾರಿ ಉಸ್ತುವಾರಿ ಸಚಿವ ಬಿ.ಜೆಡ್.ಜಮೀರ್ ಅಹ್ಮದ್ ಖಾನ್ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ಹಾಗೂ ಶಾಸಕ ಜೆ.ಎನ್ ಗಣೇಶ್, ಸಂಸದರಾದ ಈ.ತುಕಾರಾಂ, ಕೆ.ರಾಜಶೇಖರ ಬಸವರಾಜ ಹಿಟ್ನಾಳ್, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಬಿ.ನಾಗೇಂದ್ರ, ಬಿ.ಎಂ.ನಾಗರಾಜ, ವಿಧಾನಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ, ಶಶೀಲ್ ನಮೋಶಿ, ವೈ.ಎಂ.ಸತೀಶ್, ಡಾ.ಬಾಬು ಜಗಜೀವನ್‌ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ, ಮಹಾನಗರ ಪಾಲಿಕೆಯ ಮಹಾಪೌರರಾದ ಮುಲ್ಲಂಗಿ ನಂದೀಶ್, ಬಳ್ಳಾರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಜೆ.ಎಸ್.ಆಂಜನೇಯಲು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಶ್ರೀ ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಆಲಂಭಾಷ ಅವರು ವಿಶೇಷ ಉಪನ್ಯಾಸ ನೀಡುವರು.
ಕಾರ್ಯಕ್ರಮದಲ್ಲಿ ರಾಘವೇಂದ್ರ ಗುಡದೂರು ತಂಡದಿAದ ಸುಗಮ ಸಂಗೀತ ಇರಲಿದೆ.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿವಿ.ಜೆ., ಜಿಲ್ಲಾ ಪಂಚಾಯತ್‌ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಎನ್.ಝುಬೇರ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಇತರರು ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
----------
ಮಂಗಳವಾರ, ಡಿಸೆಂಬರ್ 24, 2024
ಕೃಷಿಕ ಸಮಾಜ ಚುನಾವಣೆ: 15 ಪದಾಧಿಕಾರಿಗಳ ಆಯ್ಕೆ
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ತಾಲ್ಲೂಕಿನ ಕೃಷಿಕ ಸಮಾಜಜ ಚುನಾವಣೆಗೆ 2025-26 ರಿಂದ 2029-30 ನೇ ಸಾಲಿನವರೆಗೆ ನಡೆಯುವ ಕಾರ್ಯಗಾರಿ ಸಮಿತಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಳ್ಳಾರಿ ನಗರದ ಪಿ.ಗಾದೆಪ್ಪ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಪರಮದೇವನಹಳ್ಳಿ ಗ್ರಾಮದ ಜಿ.ಸತ್ಯನಾರಾಯಣರೆಡ್ಡಿ ಉಪಾಧ್ಯಕ್ಷರಾಗಿ, ಕೊರ್ಲ್ಲಗುಂದಿ ಗ್ರಾಮದ ವೈ.ಲಿಂಗರಾಜು ಖಜಾಂಚಿಯಾಗಿ, ಬಳ್ಳಾರಿ ನಗರದ ಎನ್.ಸುರೇಶ್ ನಂದಿ ಜಿಲ್ಲಾ ಪ್ರತಿನಿಧಿಯಾಗಿ ಮತ್ತು ಸಿರಿವಾರ ಗ್ರಾಮದ ಕೆ.ಚಂದ್ರಪ್ಪ ಪ್ರಧಾನ ಕಾರ್ಯದರ್ಶಿಯಾಗಿ ಆವಿರೋಧ ಆಯ್ಕೆಯಾಗಿದ್ದಾರೆ. ತಾಲ್ಲೂಕಿನ ಕೃಷಿಕ ಸಮಾಜಕ್ಕೆ ಒಟ್ಟು 15 ಜನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಹಾಗೂ ಸಹಾಯಕ ಕೃಷಿ ನಿರ್ದೇಶಕ ಎಂ.ದಯಾನAದ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಗೌರವಸೇವೆ ಹುದ್ದೆ | ಅಪೂರ್ಣ ಅರ್ಜಿ ಪುನ: ಭರ್ತಿಗೆ ಜ.05 ರವರೆಗೆ ಅವಕಾಶ
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ಜಿಲ್ಲೆಯ ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಸಿರುಗುಪ್ಪ (ಕಂಪ್ಲಿ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾ.ಪಂ., ಪ.ಪಂ, ಪುರಸಭೆ, ನಗರಸಭೆ, ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 96 ಕಾರ್ಯಕರ್ತೆ ಹಾಗೂ 293 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಈಗಾಗಲೇ ಕಾಲಾವಕಾಶ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್‌ಸೈಟ್‌ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವರಿಗೆ 1ನೇ ಹಂತದಲ್ಲಿಯೇ ಅಪ್ಲಿಕೇಷನ್ ಸಕ್ಸಸ್‌ಪುಲ್ ಅಪ್‌ಲೋಡ್ ಎಂಬ ಮೆಸೇಜ್ ಅವರ ಮೊಬೈಲ್‌ಗೆ ಸ್ವೀಕೃತವಾಗಿರುವುದರಿಂದ ಅರ್ಜಿ ಪೂರ್ಣಗೊಳಿಸಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯ್‌ಕುಮಾರ್ ಅವರು ತಿಳಿಸಿದ್ದಾರೆ.
ಸರ್ಕಾರದ ಆದೇಶದನ್ವಯ ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಡಿ.26 ರಿಂದ ಜ.05 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್‌ಸೈಟ್ ವಿಳಾಸ : https://karnemakaone.kar.nic.in/adcd/ ಮೂಲಕ ಅವಕಾಶ ನೀಡಿ ಅದೇಶಿಸಲಾಗಿದೆ.
ಅಭ್ಯರ್ಥಿಗಳು ಮೊದಲನೇ ಹಂತ ಆನ್‌ಲೈನ್ ನಲ್ಲಿ ಅರ್ಜಿ ನಮೂನೆಯಲ್ಲಿ ಮಾಹಿತಿ ತುಂಬುವುದು. 2ನೇ ಹಂತದಲ್ಲಿ ಭಾವಚಿತ್ರ ಮತ್ತು ಸಹಿ ಅಪ್‌ಲೋಡ್ ಮಾಡಬೇಕು. 3ನೇ ಹಂತದಲ್ಲಿ ದಾಖಲಾತಿ ಅಪ್ಲೋಡ್ ಮಾಡಬೇಕು. 4ನೇ ಹಂತ ಆಧಾರ್ ಸಂಖ್ಯೆ ನಮೂದಿಸಿ, ಇ-ಹಸ್ತಾಕ್ಷರಯೊಂದಿಗೆ ಅರ್ಜಿ ಪೂರ್ಣಗೊಳಿಸಬೇಕು.
ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ 1181 ಅಪೂರ್ಣ ಅರ್ಜಿಗಳು ಹಾಗೂ ಸಹಾಯಕಿಯರ ಹುದ್ದೆಗೆ 893 ಅಪೂರ್ಣ ಅರ್ಜಿಗಳು ಸ್ವೀಕೃತವಾಗಿವೆ. ಅಪೂರ್ಣವಾದ ಅರ್ಜಿದಾರರ ಹೆಸರನ್ನು ಆಯಾ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಲಭ್ಯವಿದ್ದು, ಕೇಂದ್ರಕ್ಕೆ ಭೇಟಿ ನೀಡಿ ಮಾಹಿತಿ ತೆಗೆದುಕೊಂಡು ಅರ್ಜಿಗಳನ್ನು ಪೂರ್ಣಗೊಳಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯ್‌ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
----------
ಪಂಚ ಗ್ಯಾರಂಟಿ ಸಾಮಾನ್ಯ ಜನರಿಗೆ ವರದಾನ, ಅರ್ಹರಿಗೆ ತಲುಪಿಸುವಲ್ಲಿ ಪ್ರಗತಿ ಸಾಧಿಸಿ: ಚಿದಾನಂದಪ್ಪ.ಕೆ.ಇ
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ರಾಜ್ಯ ಸರ್ಕಾರದ ಮಹತ್ವ ಪೂರ್ಣ ಪಂಚಗ್ಯಾರAಟಿ ಯೋಜನೆಗಳಿಂದ ಸಾಮಾನ್ಯ ಮತ್ತು ಅಸಹಾಯಕ ಕುಟುಂಬಗಳಿಗೆ ವರದಾನವಾಗಿದ್ದು, ಜಿಲ್ಲೆಯಲ್ಲಿ ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಶೇ.100 ರಷ್ಟು ಪ್ರಗತಿ ಸಾಧಿಸಿ ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಸಮಿತಿಯ ಜಿಲ್ಲಾ ಅಧ್ಯಕ್ಷ ಚಿದಾನಂದಪ್ಪ.ಕೆ.ಇ ಅವರು ಹೇಳಿದರು.
ನಗರದ ಜಿಲ್ಲಾ ಪಂಚಾಯತ್‌ನ ನಜೀರ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನಷ್ಠಾನ ಪ್ರಾಧಿಕಾರದಿಂದ ಮಂಗಳವಾರ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗ್ಯಾರಂಟಿ ಯೋಜನೆಗಳಿಂದ ಹೊರಗುಳಿದ ಅರ್ಹ ಫಲಾನುಭವಿಗಳನ್ನು ಗುರುತಿಸಿ, ಗ್ಯಾರಂಟಿ ಯೋಜನೆಗಳ ಲಾಭ ತಲುಪಿಸಲು ಅಧಿಕಾರಿಗಳು ಪ್ರಾಮಾಣಿಕ ಪ್ರಯತ್ನ ಮಾಡಬೇಕು. ಮುಂದಿನ ದಿನಗಳಲ್ಲಿ ಜಿಲ್ಲೆಯಲ್ಲಿ ಪರಿಣಾಮಕಾರಿಯಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸಿ, ಶೇ.100ರಷ್ಟು ಪ್ರಗತಿ ಸಾಧಿಸಲು ಕ್ರಮವಹಿಸುವ ಮೂಲಕ ರಾಜ್ಯದಲ್ಲಿಯೇ ಮೊದಲ ಸ್ಥಾನ ತಲುಪಬೇಕು ಎಂದರು.
ಗೃಹಲಕ್ಷಿö್ಮ ಯೋಜನೆಯಡಿ ನೋಂದಣಿಯಾದ ಫಲಾನುಭವಿಗಳಿಗೆ ಆಗಸ್ಟ್ 2023 ರಿಂದ ಸೆಪ್ಟಂಬರ್ 2024 ರವರೆಗೆ ರೂ.2,000 ರಂತೆ ಒಟ್ಟು 3762682 ಫಲಾನುಭವಿಗಳಿಗೆ ಮಾಹೆವಾರು ಒಟ್ಟು 752,53,64,00 ರೂ. ಗಳು ಸರ್ಕಾರದಿಂದ ನೇರವಾಗಿ ಫಲಾನುಭವಿಗಳ ಖಾತೆಗಳಿಗೆ ವರ್ಗಾವಣೆ ಮಾಡಲಾಗಿದೆ. ನೋಂದಾಯಿಸಿರುವ ಎಲ್ಲಾ ಫಲಾನುಭವಿಗಳಿಗೂ ಈ ಯೋಜನೆಯ ಲಾಭ ಒದಗಿಸಲು ಕೆಲ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಶೇ. ನೂರಕ್ಕೆ ನೂರು ಪ್ರಗತಿ ಸಾಧಿಸಲು ಕ್ರಮಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‌ಕುಮಾರ್ ಅವರು ಸಭೆಗೆ ತಿಳಿಸಿದರು.
ಇದಕ್ಕೆ ಅಧ್ಯಕ್ಷರು ಮಾತನಾಡಿ, ವಿವಿಧ ಕಾರಣಗಳಿಂದ ಫಲಾನುಭವಿಗಳಿಗೆ ಹಣ ಪಾವತಿಯಾಗದಿರುವ ಕುರಿತು ನನ್ನ ಕಚೇರಿಗೆ ಅರ್ಜಿ ಬರುತ್ತಿವೆ, ಇದಕ್ಕೆ ಏನು ಪರಿಹಾರ ಎಂದು ಪ್ರಶ್ನಿಸಿದರು.
ವಿಜಯ್‌ಕುಮಾರ್ ಅವರು ಪ್ರತಿಕ್ರಿಯಿಸಿ, ಅಂಗನವಾಡಿ ಕಾರ್ಯಕರ್ತೆಯರ ಮೂಲಕ ಮನೆಗಳಿಗೆ ಭೇಟಿ ನೀಡಿ ತಾಂತ್ರಿಕ ದೋಷವಿರುವ ಇ-ಕೆವೈಸಿ, ಎನ್‌ಪಿಸಿಐ ಸಮಸ್ಯೆಗಳನ್ನು ಸರಿಪಡಿಸಿಕೊಳ್ಳುವಂತೆ ಫಲಾನುಭವಿಗಳಿಗೆ ತಿಳಿಸಲಾಗುತ್ತಿದೆ. ಐಟಿ ಮತ್ತು ಜಿಎಸ್‌ಟಿ ಸಂಬAಧಿತ ಕಾರಣಗಳಿಂದ ಸೌಲಭ್ಯ ವಂಚಿತರಾದ ಫಲಾನುಭವಿಗಳಿಗೆ ಮರು ಸೌಲಭ್ಯ ಪಡೆಯಲು ಅನುಕೂಲವಾಗುವಂತೆ ಐಟಿ ಮತ್ತು ಜಿಎಸ್‌ಟಿ ಕಟಾವಣೆ ಮಾಡಿಸದೇ ಇರುವ ದೃಢೀಕರಣ ಪ್ರತಿ ನೀಡಲು ಸಂಬAಧಪಟ್ಟ ಫಲಾನುಭವಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ ಎಂದು ಸಭೆಗೆ ತಿಳಿಸಿದರು.
ಅನ್ನಭಾಗ್ಯ ಯೋಜನೆಯಡಿ ಜುಲೈ 2023 ರಿಂದ ಆಗಸ್ಟ್ 2024 ರವರೆಗೆ ಜಿಲ್ಲೆಯಲ್ಲಿ ಒಟ್ಟು 13958781 ಫಲಾನುಭವಿಗಳಿಗೆ ಇದುವರೆಗೂ ಒಟ್ಟು 223.71 ಕೋಟಿ ರೂ. ಗಳ ಸಹಾಯಧನ ನೀಡಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನಾ ಅವರು ಸಭೆಗೆ ತಿಳಿಸಿದರು.
ಬಿಪಿಎಲ್ ಕಾರ್ಡ್ನಿಂದ ಎಪಿಎಲ್ ಕಾರ್ಡ್ಗಳಿಗೆ ವರ್ಗಾವಣೆ ಕುರಿತು ಪಡಿತರ ಫಲಾನುಭವಿಗಳು ವಿಚಲಿತರಾಗುತ್ತಿದ್ದು, ಈ ಕುರಿತು ಅವರಿಗೆ ಅರಿವು ಮೂಡಿಸುವ ಕಾರ್ಯವಾಗಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯಲ್ಲಿ ಒಟ್ಟು 290480 ಅರ್ಹ ಗ್ರಾಹಕರಿದ್ದು, ಅದರಲ್ಲಿ ಈವರೆಗೆ (ಅ.31 ರ ವರೆಗೆ) 2,80,282 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದಾರೆ. 10198 ಗ್ರಾಹಕರು ನೋಂದಾಯಿಸಲು ಬಾಕಿಯಿದ್ದಾರೆ. ಸರ್ಕಾರವು 2023ರ ಆಗಸ್ಟ್ನಿಂದ 2024ರ ಅಕ್ಟೋಬರ್ ವರೆಗೆ ಒಟ್ಟು 170.08 ಕೋಟಿ ರೂ. ಪಾವತಿಸಿದೆ ಎಂದು ಜೆಸ್ಕಾಂ ಇಲಾಖೆಯ ಅಧಿಕಾರಿಗಳು ಸಭೆಗೆ ತಿಳಿಸಿದರು.
ಜಿಲ್ಲೆಯಲ್ಲಿ ಅನಧೀಕೃತವಾಗಿ ವಿದ್ಯುತ್ ಸಂಪರ್ಕ ಪಡೆಯುತ್ತಿರುವವರನ್ನು ಗುರುತಿಸಿ ವಿದ್ಯುತ್ ಮೀಟರ್ ಸಂಪರ್ಕ ಪಡೆಯಲು ತಿಳಿಸಬೇಕು ಎಂದು ಜೆಸ್ಕಾಂ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿ ಶಕ್ತಿ ಯೋಜನೆಯಡಿ ಸಾರಿಗೆ ಇಲಾಖೆಯ ಬಸ್‌ಗಳಲ್ಲಿ ಜೂನ್-2023 ರಿಂದ ನವೆಂಬರ್-2024 ರವರೆಗೆ ಮಹಿಳಾ ವಯಸ್ಕರು ಮತ್ತು ಮಕ್ಕಳು ಸೇರಿ ಒಟ್ಟು 37358517 ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದು, 135,10,15,030 ರೂ. ಗಳು ಸಾರಿಗೆ ಆದಾಯ ಹೊಂದಲಾಗಿದೆ ಎಂದು ಕ.ಕ.ಸಾರಿಗೆ ಸಂಸ್ಥೆ ಅಧಿಕಾರಿಗಳು ತಿಳಿಸಿದರು.
ಬಸ್‌ಗಳಲ್ಲಿ ಸಂಚರಿಸುವ ವಯಸ್ಕ ಮಹಿಳೆಯರಿಗೆ ಮತ್ತು ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದAತೆ ಮುತುವರ್ಜಿ ವಹಿಸಬೇಕು ಎಂದು ಅಧ್ಯಕ್ಷರು ಸೂಚಿಸಿದರು.
ಯುವ ನಿಧಿ ಯೋಜನೆಯಡಿ ನವೆಂಬರ್-2024 ಮಾಹೆವರೆಗೆ ಜಿಲ್ಲೆಯ 18,774 ನಿರುದ್ಯೋಗಿಗಳು ನೋಂದಾಯಿಸಿದ್ದು, ಈವರೆಗೆ 5,54,34,000 ರೂ. ಫಲಾನುಭವಿಗಳಿಗೆ ಜಮೆ ಮಾಡಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿ ಹಟ್ಟಪ್ಪ ಅವರು ಸಭೆಗೆ ತಿಳಿಸಿದರು.
ಜಿಲ್ಲಾ ಪಂಚಾಯತ್‌ನ ಉಪಕಾರ್ಯದರ್ಶಿ ಅವರು ಮಾತನಾಡಿ, ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಮಾಹಿತಿಯನ್ನು ಜಿಲ್ಲೆಯ ಪ್ರತಿ ಹಳ್ಳಿಗಳ ಪ್ರತಿ ಮನೆ ಮನೆಗಳಿಗೆ ತಿಳಿಸಲು ಹಾಗೂ ಅರಿವು ಮೂಡಿಸಲು ಸ್ವಚ್ಛ ಭಾರತ್ ಕಸ ವಿಲೇವಾರಿ ವಾಹನಗಳ ಮೂಲಕ ಸಾರ್ವಜನಿಕರಿಗೆ ಅರಿವು ಮೂಡಿಸಲಾಗುವುದು ಎಂದು ಸಭೆಗೆ ತಿಳಿಸಿದರು.
ಅಧ್ಯಕ್ಷರು ಮಾತನಾಡಿ, ಅಧಿಕಾರಿಗಳು ತಮ್ಮ ಸೇವಾ ಮನೋಭಾವದಿಂದ ಕೆಲಸ ನಿರ್ವಹಿಸಬೇಕು. ಸರ್ಕಾರ ಯೋಜನೆಗಳನ್ನು ಜನ ಸಾಮಾನ್ಯರಿಗೆ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸಕಾಲದಲ್ಲಿ ಅವರಿಗೆ ಸೇವೆ ಒದಗಿಸಿದಾಗ ಮಾತ್ರ ಯೋಜನೆಗಳಿಗೆ ಸಾರ್ಥಕತೆ ದೊರಕುತ್ತದೆ. ಇದರಿಂದ ಸಾರ್ವಜನಿಕ ವಲಯದಲ್ಲಿ ಸರ್ಕಾರದ ಮೇಲೆ ಉತ್ತಮ ಅಭಿಪ್ರಾಯ ಮೂಡುತ್ತದೆ ಎಂದರು.
ಇದಕ್ಕೂ ಮುನ್ನ ಯುವನಿಧಿ ಯೋಜನೆಗೆ ನೋಂದಣಿಗೆ ಮಾಹಿತಿ ಕುರಿತ ಭಿತ್ತಿಚಿತ್ರ ಬಿಡಿಗಡೆಗೊಳಿಸಿದರು.
ಈ ಸಂದರ್ಭದಲ್ಲಿ ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲ್ಲೂಕು ಸದಸ್ಯರಾದ ಕರಿಬಸಪ್ಪ, ಆಶಾ ಲತಾ ಸೋಮಪ್ಪ, ಗೋನಾಳ್ ನಾಗಭೂಷಣ ಗೌಡ, ನಾಗೇನಹಳ್ಳಿ ಮಲ್ಲಿಕಾರ್ಜುನ, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಗಿರಿಜಾ ಶಂಕರ್, ಜಿಪಂ ಯೋಜನಾಧಿಕಾರಿ ಪ್ರಮೋದ್, ಆಹಾರ ಇಲಾಖೆಯ ಉಪನಿರ್ದೇಶಕರಾದ ಸಕೀನಾ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಹಟ್ಟಪ್ಪ ಸೇರಿದಂತೆ ಇತರೆ ಗ್ಯಾರಂಟಿ ಯೋಜನೆಗಳ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
----------
ರಾಷ್ಟಿçÃಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮದಲ್ಲಿ ನ್ಯಾ.ವಿದ್ಯಾಧರ ಶಿರಹಟ್ಟಿ ಸಲಹೆ ಪ್ರತಿಯೊಬ್ಬರಿಗೂ ಗ್ರಾಹಕರ ರಕ್ಷಣೆ ಕಾಯ್ದೆಯ ಅರಿವು ಅಗತ್ಯ
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ಹಣ ನೀಡಿ ಸೇವೆ ಸ್ವೀಕರಿಸುವ ಪ್ರತಿಯೊಬ್ಬರೂ ಗ್ರಾಹಕರಾಗಿದ್ದು, ಸೇವೆಯಲ್ಲಿ ಲೋಪವಾದಾಗ ಗ್ರಾಹಕರ ರಕ್ಷಣೆ ಕಾಯ್ದೆ-1986ರ ಕುರಿತು ಅರಿವು ಹೊಂದುವುದು ಅಗತ್ಯವಾಗಿದೆ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ಒಂದನೇ ಹೆಚ್ಚುವರಿ ನ್ಯಾಯಧೀಶರಾದ ವಿದ್ಯಾಧರ ಶಿರಹಟ್ಟಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಕಾನೂನು ಮಾಪನ ಶಾಸ್ತç ಇಲಾಖೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಆಹಾರ ಸುರಕ್ಷತಾ ಇಲಾಖೆ ಹಾಗೂ ವಿಜಯನಗರ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾಲಯ ಇವರ ಸಂಯುಕ್ತಾಶ್ರಯದಲ್ಲಿ ನಗರದ ಅಲ್ಲಿಪುರ ರಸ್ತೆಯ ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾ ಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ರಾಷ್ಟಿçÃಯ ಗ್ರಾಹಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸಮಾಜದಲ್ಲಿ ಜೀವಿಸುವ ಪ್ರತಿಯೊಬ್ಬರೂ ಒಂದಲ್ಲ ಒಂದು ರೀತಿ ವ್ಯಾಪಾರ ವಹಿವಾಟಿನಲ್ಲಿ ಭಾಗಿದಾರರಾಗುತ್ತಾರೆ. ವಸ್ತು-ಆಹಾರ ವಿಷಯ ಸೇರಿದಂತೆ ಗ್ರಾಹಕರು ಖರೀದಿಸುವ ಇನ್ನಿತರೆ ಸಾಮಾಗ್ರಿಗಳಲ್ಲಿ ರಾಜಿ ಸಲ್ಲ. ಗಾಳಿ, ಬೆಳಕು, ನೀರು ಶುದ್ಧವಾಗಿರುವಂತೆ ಹೇಗೆ ಬಯಸುತ್ತೇವೋ ಅದೇ ರೀತಿ ಗ್ರಾಹಕರು ಖರೀದಿಸುವ ಪ್ರತಿಯೊಂದು ವಸ್ತುವಿನಲ್ಲಿ ಶುಭ್ರತೆ, ಗುಣಮಟ್ಟ ಅಪೇಕ್ಷೆ ಪಡುವುದು ಗ್ರಾಹಕರ ಕರ್ತವ್ಯವಾಗಿದೆ ಎಂದರು.
ಗ್ರಾಹಕರು ವಸ್ತು-ಸಾಮಾಗ್ರಿ ಖರೀದಿಸುವ ಸಂಧರ್ಭದಲ್ಲಿ ಉತ್ಕೃಷ್ಠ ಹಾಗೂ ಉತ್ತಮ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸೇವಾ ವಲಯ ಮತ್ತು ವಾಣಿಜ್ಯ ವಲಯ ಸೇರಿದಂತೆ ಇತರೆ ವಲಯಗಲ್ಲಿ ಗ್ರಾಹಕರು ನ್ಯೂನತೆ ಎದುರಿಸಿದಲ್ಲಿ ಕಾನೂನಾತ್ಮಕ ರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದರು.
ಪ್ರಸ್ತುತ ಡಿಜಿಟಲ್ ಮಾಧ್ಯಮದ ಯುಗವಾಗಿದೆ. ಗ್ರಾಹಕರು ತಮ್ಮ ಅಂಗೈಯಲ್ಲಿನ ಮೊಬೈಲ್ ಬಳಕೆಯಿಂದ ಅಗತ್ಯ ವಸ್ತುಗಳ ಖರೀದಿಗೆ ಮುಂದಾಗುತ್ತಾರೆ. ಆನ್‌ಲೈನ್ ವಹಿವಾಟಿನಲ್ಲಿ ಮೋಸ ಹೋಗುವ ಸಂಭವವಿದ್ದು, ಕಾನೂನು ತಿಳುವಳಿಕೆ ಇರಬೇಕು ಎಂದು ವಿದ್ಯಾರ್ಥಿ-ಗ್ರಾಹಕರಿಗೆ ಸಲಹೆ ನೀಡಿದರು.
ವಿವಿಯ ಕುಲಪತಿಗಳಾದ ಪ್ರೊ.ಎಂ.ಮುನಿರಾಜು ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ವಿದ್ಯಾವಂತ ಗ್ರಾಹಕರೇ ಹೆಚ್ಚು ವಂಚಿತರಾಗುತ್ತಿದ್ದು, ಅವರು ಎಚ್ಚೆತ್ತುಕೊಳ್ಳಬೇಕಿದೆ. ಅವಿದ್ಯಾವಂತರಿಗೆ ಮತ್ತು ತಮ್ಮ ನೆರೆ-ಹೊರೆಯರಿಗೆ ಗ್ರಾಹಕರ ರಕ್ಷಣೆಯ ಕಾನೂನು-ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ತಿಪ್ಪೇಸ್ವಾಮಿ.ಎನ್ ಮಾತನಾಡಿ, ಹಣ ನೀಡಿ ಸೇವೆ ಪಡೆಯುವ ಎಲ್ಲರೂ ಗ್ರಾಹಕರೆ. ಗ್ರಾಹಕರು ಖರೀದಿಸುವ ವಸ್ತು ಅಥವಾ ಸಾಮಾಗ್ರಿಗಳಲ್ಲಿ ಲೋಪವಾದಲ್ಲಿ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಿದರೇ, ಗ್ರಾಹಕರ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಂಡು ಪರಿಹಾರ ಒದಗಿಸಿ ಕೊಡಲಾಗುತ್ತದೆ ಎಂದು ಹೇಳಿದರು.
ಗ್ರಾಹಕರು ಕಾನೂನಿನಾತ್ಮಕ ಹಕ್ಕುಗಳಾದ ಗ್ರಾಹಕರ ರಕ್ಷಣಾ ಹಕ್ಕು, ಮಾಹಿತಿ ಪಡೆಯುವ ಹಕ್ಕು, ಆಯ್ಕೆಯ ಹಕ್ಕು, ಅದಾಲತ್ ಹಕ್ಕು, ಪರಿಹಾರ ಪಡೆಯುವ ಹಕ್ಕು, ಆರೋಗ್ಯ ಪೂರ್ಣ ಪರಿಸರ ಹಕ್ಕುಗಳ ಕುರಿತು ಜ್ಞಾನ ಹೊಂದಬೇಕು. ಯಾವುದೇ ವಸ್ತು-ಸಾಮಾಗ್ರಿ ಖರೀದಿಸಿದಾಗ ರಸೀದಿ ಪಡೆಯಬೇಕು ಎಂದು ತಿಳಿಸಿದರು.
ಹಿರಿಯ ವಕೀಲರಾದ ಎನ್.ಪ್ರಕಾಶ್ ಅವರು ಕಾರ್ಯಕ್ರಮ ಕುರಿತು ವಿಶೇಷÀ ಉಪನ್ಯಾಸ ನೀಡಿದರು.
ಈ ಸಂಧರ್ಭದಲ್ಲಿ ವಿಜಯನಗರ ಶ್ರೀ ಕೃಷÀ್ಣದೇವರಾಯ ವಿಶ್ವವಿದ್ಯಾಲಯದ ಕುಲಸಚಿವರಾದ ರುದ್ರೇಶ್, ಹಿರಿಯ ಸಿವಿಲ್ ನ್ಯಾಯಾಧೀಶರಾದ ಇಬ್ರಾಹಿಂ ಮುಜಾವರ್, ಕಾನೂನು ಮಾಪನ ಶಾಸ್ತçದ ಸಹಾಯಕ ನಿಯಂತ್ರಕರಾದ ಅಮೃತಾ ಪಿ.ಚವ್ಹಾಣ, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರಾದ ಸಕೀನ ಸೇರಿದಂತೆ ವಿದ್ಯಾರ್ಥಿಗಳು ಹಾಗೂ ಇತರರು ಉಪಸ್ಥಿತರಿದ್ದರು.
-----------
ಶಿಶುವಿಗೆ ಪೆಂಟಾವಲೆAಟ್ ಲಸಿಕೆ ಹಾಕಿಸಿ: ಡಿಹೆಚ್‌ಓ ಡಾ.ಯಲ್ಲಾ ರಮೇಶ್ ಬಾಬು
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ಜನನವಾದ 45 ದಿನಗಳ ಅವಧಿಯಲ್ಲಿ ಶಿಶುವಿಗೆ ಪೆಂಟಾವಲೆAಟ್ ಲಸಿಕೆಯನ್ನು ಹಾಕಿಸುವ ಮೂಲಕ ಮಾರಕ ರೋಗಗಳು ತಡೆಗಟ್ಟಲು ಪಾಲಕರು ಕೈ ಜೋಡಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶ್ ಬಾಬು ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ದೇವಿನಗರ ಇವರ ಸಂಯುಕ್ತಾಶ್ರಯದಲ್ಲಿ ದೇವಿನಗರ ಅಂಗನವಾಡಿ ಕೇಂದ್ರದಲ್ಲಿ ಡಿಸೆಂಬರ್ 31 ರವರೆಗೆ ಜರುಗುವ ಪೆಂಟಾವಲೆAಟ್ ಲಸಿಕೆ ವಿಶೇಷ ಅಭಿಯಾನದ ಚಾಲನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಬಾಲ್ಯದಲ್ಲಿ ಕಂಡು ಬರುವ ಮಾರಕ ಕಾಯಿಲೆಗಳಿಂದ ಮಕ್ಕಳ ಆರೋಗ್ಯದ ದೃಷ್ಟಿಯಿಂದ 12 ಮಾರಕ ರೋಗಗಳಿಗೆ ಸಂಬAಧಿಸಿದ ಲಸಿಕೆಗಳನ್ನು ಮಕ್ಕಳಿಗೆ ನೆಗಡಿ, ಕೆಮ್ಮು ಸಾಧಾರಣ ಜ್ವರ ಇದ್ದರೂ ಸಹ ಯಾವುದೇ ಹಿಂಜರಿಕೆಯಿಲ್ಲದೆ ಲಸಿಕೆ ಹಾಕಿಸುವ ಮೂಲಕ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ತಪ್ಪದೇ ಪಾಲಕರು ಲಸಿಕೆಗಳನ್ನು ಹಾಕಿಸಬೇಕು ಎಂದು ಕೋರಿದರು.
ಒಂದು ಚುಚ್ಚುಮದ್ದು ನೀಡುವ ಮೂಲಕ 5 ರೋಗಗಳನ್ನು ತಡೆಗಟ್ಟಲು ಸಹಾಯಕವಾಗುವ ಪೆಂಟಾವಲೆAಟ್ ಲಸಿಕೆಯನ್ನು ಮಗುವಿನ ಒಂದುವರೆ ತಿಂಗಳು, ಎರಡುವರೆ ತಿಂಗಳು ಹಾಗೂ ಮೂರುವರೆ ತಿಂಗಳು ವಯಸ್ಸಿನ ಅವಧಿಯಲ್ಲಿ ಹಾಕಿಸಬೇಕು. ಈ ಮೂಲಕ ಗಂಟಲು ಮಾರಿ, ನಾಯಿಕೆಮ್ಮು, ಧನುರ್ವಾಯು, ಯಕೃತ್ತಿನ ಉರಿ ಮತ್ತು ಊತ, ಕಾಮಾಲೆ, ಹೆಚ್‌ಇನ್‌ಪ್ಲ್ಯುಯೆಂಜಾ ಬಿ, ಮೆದುಳು ರೋಗ ಮೆನಂಜೆಟೀಸ್ ರೋಗಗಳನ್ನು ತಡೆಗಟ್ಟಲು ಸಹಕಾರಿಯಾಗುತ್ತದೆ ಎಂದು ಅವರು ತಿಳಿಸಿದರು.
ಮಕ್ಕಳ ಸದೃಢ ಆರೋಗ್ಯಕ್ಕಾಗಿ ತಪ್ಪದೇ ಲಸಿಕೆಗಳನ್ನು ಹಾಕಿಸಬೇಕು. ಒಂದು ವರ್ಷದ ಒಳಗಡೆ ಮಗುವಿಗೆ ಪೆಂಟಾವಲೆAಟ್ ಲಸಿಕೆ ಹಾಕಿಸದೇ ಇದ್ದರೂ ಸಹ ತಪ್ಪದೇ ಲಸಿಕೆ ಹಾಕಿಸಲು ವಿನಂತಿಸಿದರು.
ಜಿಲ್ಲಾ ಆರ್‌ಸಿಹೆಚ್ ಅಧಿಕಾರಿ ಡಾ.ಹನುಮಂತಪ್ಪ ಅವರು ಮಾತನಾಡಿ, ಮಗುವಿಗೆ ಹುಟ್ಟಿದ ತಕ್ಷಣ ಪೋಲಿಯೋ, ಹೆಪಟೈಟಿಸ್ ಬಿ, ಬಾಲಕ್ಷಯ ರೋಗ ತಡೆಗಟ್ಟಲು ಲಸಿಕೆಗಳನ್ನು ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಹಾಕಲಾಗುತ್ತಿದೆ ಎಂದು ಹೇಳಿದರು.
ಮಗುವಿನ ಒಂದುವರೆ ತಿಂಗಳು, ಎರಡುವರೆ ತಿಂಗಳು ಹಾಗೂ ಮೂರುವರೆ ತಿಂಗಳು ವಯಸ್ಸಿನ ಅವಧಿಯಲ್ಲಿ ಅತಿಸಾರಬೇಧಿಗೆ ರೋಟಾವೈರಸ್, ನಿಮೋಕಾಕಲ್ ಲಸಿಕೆ, ಪೆಂಟಾವಲೆAಟ್ ಹಾಗೂ ಪೋಲಿಯೋ ಲಸಿಕೆಯನ್ನು ಬಾಯಿ ಮೂಲಕ ಹಾಗೂ ಚುಚ್ಚುಮದ್ದು ಮೂಲಕ ನೀಡಲಾಗುತ್ತದೆ ಎಂದರು.
ಮಗುವಿಗೆ 9 ತಿಂಗಳು ತುಂಬಿದ ನಂತರ ಮೆದುಳು ಜ್ವರ ರೋಗಕ್ಕೆ ಜಾಪನೀಸ್ ಎನ್ಸ್ಪಲಿಟಿಸ್ ಲಸಿಕೆ, ದಡಾರ ರೂಬೇಲ್ಲಾ ರೋಗಕ್ಕೆ ಮಿಸಲ್ಸ್ ರೂಬೆಲ್ಲಾ ಲಸಿಕೆ ಮತ್ತು ಸಂಜೆಯ ಹೊತ್ತು ಕಂಡುಬರುವ ಇರುಳುಗಣ್ಣು ರೋಗಕ್ಕೆ ವಿಟಾಮಿನ್-ಎ ಅನ್ನಾಂಗ ದ್ರಾವಣ ನೀಡಲಾಗುತ್ತದೆ. ಇವೆಲ್ಲವುಗಳನ್ನು ಮಗುವಿನ ಒಂದು ವರ್ಷದೊಳಗೆ ಹಾಕಲಾಗುತ್ತಿದ್ದು, ಇವುಗಳನ್ನು ತಪ್ಪದೆ ಆರೋಗ್ಯ ಕೇಂದ್ರಗಳಲ್ಲಿ ಪಡೆದುಕೊಳ್ಳಬೇಕು. ಗ್ರಾಮ ವಾರ್ಡ್ಗಳಲ್ಲಿ ಪ್ರತಿ ಗುರುವಾರ ಹಾಕುವ ಬಗ್ಗೆ ಹೆಚ್ಚು ಜಾಗೃತಿ ನೀಡಬೇಕು ಎಂದು ಸೂಚಿಸಿದರು.
ಈ ಸಂದರ್ಭದಲ್ಲಿ ಆಡಳಿತ ವೈದ್ಯಾಧಿಕಾರಿ ಡಾ.ಸುರೇಖ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರ, ಡಿಎನ್‌ಒ ಗಿರೀಶ್, ಪಿಹೆಚ್‌ಸಿಒ ಕಾವ್ಯ, ಹೆಚ್‌ಐಒ ರಾಮಕೃಷ್ಣ, ಆಶಾಕಾರ್ಯಕರ್ತೆ ಹೈಯತುನ್ನೀಸ, ಅಂಗನವಾಡಿ ಕಾರ್ಯಕರ್ತೆ ಮರಿಯಮ್ಮ ಸೇರಿದಂತೆ ತಾಯಂದಿರು ಹಾಗೂ ಇನ್ನೀತರರು ಉಪಸ್ಥಿತರಿದ್ದರು.
----------
ಜ.16 ರಿಂದ ಮೂರು ದಿನಗಳ ಕಾಲ ಜಿಲ್ಲೆಗೆ ಉಪ ಲೋಕಾಯುಕ್ತರ ಭೇಟಿ ಅಗತ್ಯ ಮಾಹಿತಿಯೊಂದಿಗೆ ಹಾಜರಾಗಲು ಅಧಿಕಾರಿಗಳಿಗೆ ಡಿಸಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಜನವರಿ 16, 17 ಹಾಗೂ 18 ರಂದು 3 ದಿನಗಳ ಕಾಲ ಬಳ್ಳಾರಿ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯಲ್ಲಿ ವಿವಿಧ ಇಲಾಖೆಗಳಿಗೆ ಸಂಬAಧಿಸಿದAತೆ ಬಾಕಿ ಇರುವ ಲೋಕಾಯುಕ್ತ ದೂರುಗಳ ವಿಚಾರಣೆ ಹಾಗೂ ವಿಲೇವಾರಿ ಕಾರ್ಯಕ್ರಮ ನಡೆಸಲಿದ್ದು, ಅಗತ್ಯ ಮಾಹಿತಿಯೊಂದಿಗೆ ಉಪ ಲೋಕಾಯುಕ್ತರ ಎಲ್ಲಾ ಕಾರ್ಯಕ್ರಮದಲ್ಲೂ ಹಾಜರಾಗಬೇಕೆಂದು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ವಿಡಿಯೋ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸೋಮವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.
ಉಪ ಲೋಕಾಯುಕ್ತರು ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ದಾಖಲಾಗಿ ತನಿಖೆಗೆ ಬಾಕಿ ಇರುವ ದೂರು ಪ್ರಕರಣಗಳ ವಿಚಾರಣೆ ಮತ್ತು ಸಭೆ ನಡೆಸುವರು. ಈವರೆಗೆ ನೋಂದಣಿಯಾದ ದೂರು ಪ್ರಕರಣಗಳು, ಅವುಗಳ ವಿಲೇವಾರಿ ಮಾಹಿತಿಯೊಂದಿಗೆ ಎಲ್ಲಾ ಇಲಾಖೆಗಳ ಅಧಿಕಾರಿಗಳು, ಉಪ ಲೋಕಾಯುಕ್ತರ ಕಾರ್ಯಕ್ರಮಗಳಿಗೆ ಅಗತ್ಯ ಮಾಹಿತಿಯೊಂದಿಗೆ ಹಾಜರಾಗಬೇಕು ಎಂದು ತಿಳಿಸಿದರು.
ಲೋಕಾಯುಕ್ತ ಪ್ರಕರಣ ಅರ್ಜಿಗಳು ವಿಲೇವಾರಿಯಾಗದೆ ಬಾಕಿ ಉಳಿಸಿಕೊಂಡಿದ್ದಲ್ಲಿ ಸೂಕ್ತ ಕಾರಣವನ್ನು ಉಪ ಲೋಕಾಯುಕ್ತರ ಗಮನಕ್ಕೆ ತರಬೇಕು ಎಂದರು.
ಬಾಕಿ ಉಳಿದಿರುವ ಲೋಕಾಯುಕ್ತ ದೂರು ಅರ್ಜಿಗಳನ್ನು ವೈಯಕ್ತಿಕ ಗಮನಹರಿಸಿ ಶೀಘ್ರ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು. ವಿಲೇವಾರಿ ಮಾಡಲು ಕಾನೂನು ಚೌಕಟ್ಟಿನಲ್ಲಿ ಅವಕಾಶವಿಲ್ಲದಿದ್ದಲ್ಲಿ ದೂರುದಾರರರಿಗೆ ಹಿಂಬರಹ ನೀಡಬೇಕು. ಹಿಂಬರಹ ನೀಡಿರುವ ಬಗ್ಗೆ ಅಗತ್ಯ ದಾಖಲೆಗಳನ್ನು ಸಂಬAಧಿಸಿದ ಇಲಾಖಾಧಿಕಾರಿಗಳು ಹೊಂದಿರಬೇಕು ಎಂದು ನಿರ್ದೇಶನ ನೀಡಿದರು.
*ಕರ್ನಾಟಕ ಉಪ ಲೋಕಾಯುಕ್ತರಿಂದ ವಿಡಿಯೋ ಸಂವಾದ:*
ಬರುವ ಜನವರಿ 16, 17 ಮತ್ತು 18 ರಂದು ಕರ್ನಾಟಕ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ.ವೀರಪ್ಪ ಅವರು, ಜಿಲ್ಲೆಗೆ ಭೇಟಿ ನೀಡಲಿರುವ ಪ್ರಯುಕ್ತ ಉಪ ಲೋಕಾಯುಕ್ತರು, ಸೋಮವಾರ ಸಂಜೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ವಿಡೀಯೋ ಸಂವಾದ ಸಭೆ ನಡೆಸಿ ಮಾಹಿತಿ ಪಡೆದುಕೊಂಡರು.
ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯ ಎಲ್ಲಾ ವಸತಿ ನಿಲಯಗಳಲ್ಲಿ ಸ್ವಚ್ಛತೆ, ಶೌಚಾಲಯ, ವಸತಿ ನಿಲಯಗಳ ಕಾಂಪೌAಡ್ ವ್ಯವಸ್ಥೆ ಸೇರಿದಂತೆ ಅಗತ್ಯ ಮೂಲಸೌಕರ್ಯಗಳು ಸುವ್ಯವಸ್ಥಿತದಲ್ಲಿರಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯಲ್ಲಿನ ಎಲ್ಲಾ ಶಾಲೆಗಳಿಗೆ ಸೂಕ್ತ ಕಟ್ಟಡದ ವ್ಯವಸ್ಥೆ, ಶಾಲಾ ಮಕ್ಕಳಿಗೆ ಬ್ಯಾಗ್, ಶೂ-ಸಾಕ್ಸ್ ಹಾಗೂ ಬಿಸಿಯೂಟದ ವ್ಯವಸ್ಥೆ ಮತ್ತು ಮಕ್ಕಳಿಗೆ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯಗಳು ಅಚ್ಚುಕಟ್ಟಾಗಿರಬೇಕು ಎಂದು ಡಿಡಿಪಿಐ ಅಧಿಕಾರಿಗಳಿಗೆ ತಿಳಿಸಿದರು.
ಬಳ್ಳಾರಿ ನಗರದಲ್ಲಿ ಖಾತಾ ಬದಲಾವಣೆಗೆ ಸಂಬAಧಿಸಿದAತೆ ಬಾಕಿ ಇರುವ ಪ್ರಕರಣಗಳು, ಕಸ ವಿಲೇವಾರಿ, ಪ್ಲಾಸ್ಟಿಕ್ ಬಳಕೆಗೆ ಕಡಿವಾಣ, ಕುಡಿಯುವ ನೀರಿನ ವ್ಯವಸ್ಥೆ, ಒಳಚರಂಡಿ ವ್ಯವಸ್ಥೆ, ಕಸ ವಿಲೇವಾರಿ ಘಟಕಗಳ ಕುರಿತು ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ನರೇಗಾ ಯೋಜನೆ, ಸ್ವಚ್ಛ ಭಾರತ್ ಮಿಷನ್ ಯೋಜನೆಗಳ ಕುರಿತು ಜಿಪಂ ಅಧಿಕಾರಿಗಳೊಂದಿಗೆ ಮಾಹಿತಿ ಪಡೆದುಕೊಂಡರು. ಜಿಲ್ಲೆಯಲ್ಲಿ ಅರಣ್ಯ ಜಾಗ ಒತ್ತುವರಿ ಕುರಿತು ಅರಣ್ಯ ಇಲಾಖಾಧಿಕಾರಿಗಳ ಜೊತೆ ಪರಸ್ಪರ ಚರ್ಚಿಸಿ ಮಾಹಿತಿ ಪಡೆದುಕೊಂಡರು.
ಕAದಾಯ, ಡಿಎಂಎಫ್, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಜೆಸ್ಕಾಂ, ಸಾರಿಗೆ, ಆಹಾರ, ಅಬಕಾರಿ, ಜೆಸ್ಕಾಂ, ಆರೋಗ್ಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳಿಗೆ ಸಂಬAಧಿಸಿದAತೆ ಎಲ್ಲಾ ಅಧಿಕಾರಿಗಳೊಂದಿಗೆ ಸಂವಾದ ನಡೆಸಿ ಮಾಹಿತಿ ಪಡೆದುಕೊಂಡ ಅವರು, ಸಾರ್ವಜನಿಕರಿಗೆ ಸರ್ಕಾರದ ಯೋಜನೆಗಳನ್ನು ಸಕಾಲದಲ್ಲಿ ತಲುಪಿಸಬೇಕು. ಯಾವುದೇ ರೀತಿಯಲ್ಲಿ ವಿಳಂಬವಾಗುವAತಿಲ್ಲ. ಯಾವುದೇ ಅಕ್ರಮಗಳಿಗೆ ಅಧಿಕಾರಿಗಳು ಅಸ್ಪದ ನೀಡಬಾರದು ಎಂದು ಸೂಚನೆ ನೀಡಿದರು.
ಈ ವೇಳೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೊಲೀಸ್ ಅಧೀಕ್ಷಕರಾದ ಸಿದ್ದರಾಜು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಎಎಸ್ಪಿ ನವೀನ್ ಕುಮಾರ್, ಸಹಾಯಕ ಆಯುಕ್ತ ಪ್ರಮೋದ್ ಸೇರಿದಂತೆ ಜಿಲ್ಲಾ ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.
-----------
ಜ.06 ರಂದು ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗಲು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸೂಚನೆ
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳಿಗೆ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗಿದ್ದು, ಆಯ್ಕೆಯಾಗಿರುವ ಅಭ್ಯರ್ಥಿಗಳು ತಮ್ಮ ಮೂಲ ದಾಖಲೆಗಳೊಂದಿಗೆ ಜ.06 ರಂದು ಬೆಳಿಗ್ಗೆ 10.30 ಗಂಟೆಗೆ ನಗರದ ರೈಲ್ವೆ ಸ್ಟೇಷನ್ ಎದುರುಗಡೆಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆಯುವ ದಾಖಲೆ ಪರಿಶೀಲನೆಗೆ ಹಾಜರಾಗಬೇಕು.
ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ 17 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ನೇರ ನೇಮಕಾತಿಯ ಮೂಲಕ ಭರ್ತಿ ಮಾಡಲು ಮೆರಿಟ್ ಕಮ್ ರೋಸ್ಟರ್ ಆಧಾರದ ಮೇಲೆ ಬಳ್ಳಾರಿ ಜಿಲ್ಲೆಯ ವೆಬ್‌ಸೈಟ್ http://bellary.nic.in ನಲ್ಲಿ ಪ್ರಕಟಿಸಲಾಗಿದೆ ಎಂದು ಗ್ರಾಮ ಆಡಳಿತ ಅಧಿಕಾರಿಗಳ ನೇರ ನೇಮಕಾತಿ ಆಯ್ಕೆ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
---------
ರೈತರು ಸಮಗ್ರ ಕೃಷಿ ಪದ್ಧತಿ ಅಳವಡಿಸಿಕೊಳ್ಳಬೇಕು: ಸೋಮಸುಂದರ್
ಬಳ್ಳಾರಿ,ಡಿ.24(ಕರ್ನಾಟಕ ವಾರ್ತೆ):
ರೈತರು ರಾಷ್ಟçದ ಬೆನ್ನೆಲುಬಾಗಿದ್ದು, ರೈತರು ಸಮಗ್ರ ಕೃಷಿ ಪದ್ದತಿ ಅಳವಡಿಸಿಕೊಂಡು ಆದಾಯವನ್ನು ದ್ವಿಗುಣಗೊಳಿಸಿಕೊಳ್ಳಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಸೋಮಸುಂದರ್.ಕೆ.ಎA ಅವರು ಹೇಳಿದರು.
ನಗರದ ಹಳೆಯ ತಾಲ್ಲೂಕು ಕಚೇರಿ ಅವರಣದಲ್ಲಿ ಸೋಮವಾರ ಆಯೋಜಿಸಿದ್ದ ಅಂತರಾಷ್ಟಿçÃಯ ರೈತ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ದೇಶದ ಜೀವನಾಡಿಯಾಗಿದ್ದು, ಸಮಾಜದಲ್ಲಿ ಎಲ್ಲರೂ ರೈತರನ್ನು ಗೌರವದಿಂದ ಕಾಣಬೇಕು ಎಂದು ತಿಳಿಸಿದರು.
ಉಪ ಕೃಷಿ ನಿರ್ದೇಶಕ ಮಂಜುನಾಥ.ಎಸ್.ಎನ್ ಅವರು ಪ್ರಾಸ್ತಾವಿಕವಾಗಿ ಮಾತನಾಡಿ, ರೈತರು ಹಗಲು-ಇರುಳು ಯಾವುದೇ ಸ್ವಾರ್ಥ ಇಲ್ಲದೇ ನಿಸ್ವಾರ್ಥದಿಂದ ದುಡಿಯುವ ಶ್ರಮಿಕರಾಗಿದ್ದಾರೆ, ಅವರಿಗೆ ಗೌರವಿಸುವುದು ನಮ್ಮ ಧರ್ಮವಾಗಿದೆ. ರೈತರು ತಮ್ಮ ಆರೋಗ್ಯದ ಕಾಳಜಿ ವಹಿಸಬೇಕು ಎಂದರು.
ಸಹಾಯಕ ಕೃಷಿ ನಿರ್ದೇಶಕ ದಯಾನಂದ.ಎA ಅವರು ಮಾತನಾಡಿ, ಕೃಷಿ ಇಲಾಖೆಯಡಿ ಲಭ್ಯವಿರುವ ವಿವಿಧ ಯೋಜನೆಗಳನ್ನು ರೈತರು ಸದುಪಯೋಗಪಡಿಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ 2024-25ನೇ ಸಾಲಿನಲ್ಲಿ ಬಳ್ಳಾರಿ ತಾಲ್ಲೂಕು ಕೃಷಿ ಇಲಾಖೆಯ ಆತ್ಮಯೋಜನೆ(ಕಿಸಾನ್ ಗೋಷ್ಠಿ)ಯಡಿ ಸಾಧಕ ರೈತ ಮತ್ತು ರೈತ ಮಹಿಳೆಯರಿಗೆ ಸನ್ಮಾನಿಸಲಾಯಿತು.
ಜಿಲ್ಲಾ ಮಟ್ಟದಿಂದ 10 ರೈತರು-ರೈತ ಮಹಿಳೆಯರು ಹಾಗೂ ತಾಲ್ಲೂಕು ಮಟ್ಟದಿಂದ 03 ರೈತ-ರೈತ ಮಹಿಳೆಯರಿಗೆ ಸಮಗ್ರ ಕೃಷಿ ಪದ್ದತಿಯಡಿ ಸಾಧನೆಗೈದ ರೈತ ಮತ್ತು ರೈತ ಮಹಿಳೆಯರನ್ನು ಸನ್ಮಾನಿಸಲಾಯಿತು.
ಇದೇ ವೇಳೆ ಹಗರಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಿಂದ “ಸಮೃದ್ಧ ಸಿರಿಧಾನ್ಯಗಳ ಮೌಲ್ಯವರ್ಧನೆ” ಎಂಬ ಶೀರ್ಷಿಕೆಯ ಕಿರುಹೊತ್ತಿಗೆ ಬಿಡುಗಡೆ ಮಾಡಿ ಸಿರಿಧಾನ್ಯಗಳ ಮೌಲ್ಯ ಹಾಗೂ ಅವುಗಳ ಉಪಯುಕ್ತತೆ ಕುರಿತು ಮಹತ್ವ ತಿಳಿಸಿಕೊಟ್ಟರು.
ಈ ಸಂದರ್ಭದಲ್ಲಿ ಹಗರಿ ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಡಾ.ಪಾಲಯ್ಯ, ಡಾ.ರಾಜೇಶ್ವರಿ, ಜುವಾರಿ ಮುಖ್ಯ ವ್ಯವಸ್ಥಾಪಕರಾದ ಮಹೇಶ್ ಕಾಟ್ಕೆ ಸೇರಿದಂತೆ ಕೃಷಿ ಅಧಿಕಾರಿಗಳು, ಸಹಾಯಕ ಕೃಷಿ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಆತ್ಮಯೋಜನೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
----------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳು (Atom)








































