ಬುಧವಾರ, ಜನವರಿ 31, 2024

“ಸಂವಿಧಾನ ಜಾಗೃತಿ ಜಾಥಾ”: ರೂಪನಗುಡಿಯಲ್ಲಿ ಅದ್ದೂರಿ ಸ್ವಾಗತ

ಬಳ್ಳಾರಿ,ಜ.31(ಕರ್ನಾಟಕ ವಾರ್ತೆ): ಸಂವಿಧಾನದ ಮಹತ್ವ ಮತ್ತು ಅದರ ಅರಿವು ಕುರಿತಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಜಿಲ್ಲೆಯಲ್ಲಿ ಸಂಚರಿಸುತ್ತಿರುವ “ಸಂವಿಧಾನ ಜಾಗೃತಿ ಜಾಥಾ”ಗೆ ಬಳ್ಳಾರಿ ತಾಲ್ಲೂಕಿನ ರೂಪನಗುಡಿ ಗ್ರಾಮದಲ್ಲಿ ಬುಧವಾರ ಅದ್ದೂರಿಯಾಗಿ ಬರಮಾಡಿಕೊಂಡರು. ರೂಪನಗುಡಿ ಗ್ರಾಮಕ್ಕೆ ಸಂವಿಧಾನ ಜಾಗೃತಿ ಜಾಥಾ ಆಗಮಿಸುತ್ತಿದಂತೆಯೇ ಕಳಶ ಮತ್ತು ಪೂರ್ಣ ಕುಂಭ ಹೊತ್ತ ಮಹಿಳೆಯರು, ಡೊಳ್ಳು ಕಲಾವಿದರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಗ್ರಾಮದ ಜನಪ್ರತಿನಿಧಿಗಳು, ಊರಿನ ಮುಖಂಡರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದರು. ಜಾಥಾ ಕಾರ್ಯಕ್ರಮದಲ್ಲಿ ರೂಪನಗುಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಮಲ್ಲಯ್ಯ ಅವರು ಮಾತನಾಡಿ, ಸರ್ಕಾರವು ಸಮಾಜ ಕಲ್ಯಾಣ ಇಲಾಖೆಯ ಮೂಲಕ ಸಂವಿಧಾನ ಜಾಗೃತಿ ಜಾಥಾವನ್ನು ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಚರಿಸಿ ಜನ ಜಾಗೃತಿ ಮೂಡಿಸುತ್ತಿರುವುದು ತುಂಬಾ ಸಂತೋಷದಾಯಕ ವಿಚಾರವಾಗಿದೆ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಸಮಾಜ ಕಲ್ಯಾಣ ಇಲಾಖಾ ಸಚಿವರಾದ ಎಚ್.ಸಿ.ಮಹಾದೇವಪ್ಪ ರವರಿಗೆ ಅಭಿನಂದನೆ ತಿಳಿಸಿದರು. ಚೆಳ್ಳಗುರ್ಕಿ ಗ್ರಾಮದ ಮುಖಂಡ ರಾಮಣ್ಣ ಅವರು ಮಾತನಾಡಿ, ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮವು ಜನಸಾಮಾನ್ಯರು ಸಂವಿಧಾನದ ಬಗ್ಗೆ ತಿಳಿಯಲು ಉಪಯುಕ್ತವಾಗಿದೆ ಎಂದರು. ಇದಕ್ಕೂ ಮುನ್ನ ಜಾಥಾವು ರೂಪನಗುಡಿ, ಚೆಳ್ಳಗುರ್ಕಿ, ಪಿ.ಡಿ.ಹಳ್ಳಿ, ಅಮರಾಪುರ, ಶಿಡಿಗಿನಮೊಳ ಹಾಗೂ ಕಾರೇಕಲ್ಲು ಮಾರ್ಗವಾಗಿ ಸಂಚರಿಸಿ, ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಿ, ಸಂವಿಧಾನ ರಚನಾ ಸಭೆಯ ಕುರಿತ ವಿಡಿಯೋ ತುಣುಕುಗಳನ್ನು ಸಾರ್ವಜನಿರಿಗೆ ಪ್ರದರ್ಶಿಸಲಾಯಿತು. ಬಳಿಕ ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ, ಜಾಥಾದ ಉದ್ದಕ್ಕೂ ಸಂವಿಧಾನ ಪ್ರಸ್ತಾವನೆಯ ಪ್ರತಿಗಳನ್ನು ಹಂಚಿಕೆ ಮಾಡಲಾಯಿತು. ಜಾಥಾ ಕಾರ್ಯಕ್ರಮದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರಾದ ಪಿ.ಮಮತಾ, ಇಲಾಖೆಯ ಸಿಬ್ಬಂದಿ ವರ್ಗದವರು, ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿಗಳ ಜನಪ್ರತಿನಿಧಿಗಳು ಮತ್ತು ಸಾರ್ವಜನಿಕರು ಪಾಲ್ಗೊಂಡಿದ್ದರು. --------

ವಿಶೇಷ ಬೆನ್ನು ಹುರಿ (ಸ್ಪೆಷಲ್ ಸ್ಪೈನ್) ಹೊರರೋಗಿ ವಿಭಾಗ ಆರಂಭ

ಬಳ್ಳಾರಿ,ಜ.31(ಕರ್ನಾಟಕ ವಾರ್ತೆ): ವಿಮ್ಸ್‍ನ ಟ್ರಾಮಾಕೇರ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶೇಷ ಬೆನ್ನು ಹುರಿ (ಸ್ಪೆಷಲ್ ಸ್ಪೈನ್) ಹೊರರೋಗಿ ವಿಭಾಗ ಆರಂಭಿಸಲಾಗಿದೆ ಎಂದು ವಿಮ್ಸ್‍ನ ನಿರ್ದೇಶಕ ಡಾ.ಟಿ.ಎನ್.ಗಂಗಾಧರ ಗೌಡ ಅವರು ತಿಳಿಸಿದ್ದಾರೆ. ಬೆನ್ನುಮೂಳೆ, ಬೆನ್ನು ಹುರಿಗೆ ಸಂಬಂಧಿಸಿದ ನರತಂತುಗಳ ಎಲ್ಲಾ ಸಮಸ್ಯೆಗಳಿಗೆ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆ ಸೌಲಭ್ಯ ಲಭ್ಯವಿದೆ. ಆಧುನಿಕ ಎಂಡೋಸ್ಕೋಪಿ ಮತ್ತು ಮೈಕ್ರೋಸ್ಕೋಪಿಗೆ ಸಂಬಂಧಿಸಿದ ಶಸ್ತ್ರಚಿಕಿತ್ಸೆ ಲಭ್ಯವಿದೆ. ಟ್ರಾಮಾಕೇರ್ ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರತಿ ಸೋಮವಾರ ಮತ್ತು ಗುರುವಾರ ಸ್ಪೆಷಲ್ ಸ್ಪೈನ್ ಓಪಿಡಿ ಆರಂಭಿಸಲಾಗಿದ್ದು, ಅದೇ ರೀತಿ ಬುಧವಾರ ಮೆದುಳು ಓಪಿಡಿ ಚಿಕಿತ್ಸಾ ಸೌಲಭ್ಯ ವ್ಯವಸ್ಥೆಯು ಕೊಠಡಿ ಸಂ: 41, 42, 43 ರಲ್ಲಿ ಲಭ್ಯವಿರುತ್ತದೆ. ಕಳೆದ 14 ವರ್ಷಗಳಿಂದ ವಿಮ್ಸ್‍ನಲ್ಲಿ ಮೆದುಳು ಮತ್ತು ನರರೋಗ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಬೆನ್ನು ಮೂಳೆ, ಬೆನ್ನು ಹುರಿ, ಬೆನ್ನಿನ ನರತಂತುಗಳು, ಕುತ್ತಿಗೆನೋವು, ಬೆನ್ನು ನೋವು, ಬೆನ್ನು ಮೂಳೆ ಮುರಿತ ಮತ್ತು ಡಿಸ್ಕ್‍ನಿಂದ ಆಗುವ ಬೆನ್ನು ಮತ್ತು ಕುತ್ತಿಗೆ ನೋವು, ಬೆನ್ನಿನ ಟಿಬಿ, ಸ್ಪೈನ್ ಟ್ಯೂಮರ್ ಹಾಗು ಸ್ಪೈನ್, ಮೆನಿಂಗೊಸೆಲ್ ರೋಗಗಳಿಗೆ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆಯನ್ನು ಸಮರ್ಥವಾಗಿ ಮಾಡಿಕೊಂಡು ಬರಲಾಗುತ್ತಿದೆ. ಮೆದುಳು ಮತ್ತು ನರರೋಗ ಶಸ್ತ್ರಚಿಕಿತ್ಸಾ ವಿಭಾಗದಲ್ಲಿ ಮೆದುಳಿಗೆ ಸಂಬಂಧಿಸಿದ ಕಾಯಿಲೆಗಳಾದ ತಲೆಬುರುಡೆ ಮತ್ತು ಮೆದುಳಿನ ಅಪಘಾತ, ಬ್ರೈನ್ ಟ್ಯೂಮರ್, ಮೆದುಳಿನ ರಕ್ತನಾಳ ತೊಂದರೆ, ಮೆದುಳಿನ ರಕ್ತಸ್ರಾವ, ಸ್ಟ್ರೋಕ್, ಮೂರ್ಛೆರೋಗ ಚಿಕಿತ್ಸೆ, ಮೆದುಳಿನಲ್ಲಿ ನೀರು ತುಂಬುವುದು (ಹೈಡ್ರೋ ಕೆಫೆಲೆಸ್), ಹುಟ್ಟಿನಿಂದ ಉಂಟಾಗಿರುವ ಮೆದುಳಿನ ತೊಂದರೆಗಳಿಗೆ ಚಿಕಿತ್ಸೆ ಮತ್ತು ಶಸ್ತ್ರ ಚಿಕಿತ್ಸೆಗಳಿಗೆ ಆಧುನಿಕ ಉಪಕರಣಗಳ ಸೌಲಭ್ಯವಿರುತ್ತದೆ. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿಮ್ಸ್‍ನ ನಿರ್ದೇಶಕ ಡಾ.ಟಿ.ಗಂಗಾಧರಗೌಡ ಅವರು ಮನವಿ ಮಾಡಿದ್ದಾರೆ. ---------

ಕಂಪ್ಲಿ ಪಟ್ಟಣದಲ್ಲಿ “ಕಿಸಾನ್ ವೃತ್ತ” ನಾಮಕರಣ; ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ

ಬಳ್ಳಾರಿ,ಜ.31(ಕರ್ನಾಟಕ ವಾರ್ತೆ): ಕಂಪ್ಲಿ ಪಟ್ಟಣದ ಕಂಪ್ಲಿ-ಕುರುಗೋಡು ರಸ್ತೆಯ ಎ.ಪಿ.ಎಂ.ಸಿ ಎದುರುಗಡೆಯ ಬ್ರೈಟ್‍ವೇ ಶಾಲೆಗೆ ಹೋಗುವ ಮಾರ್ಗದ ಎದುರಲ್ಲಿ “ಕಿಸಾನ್ ವೃತ್ತ” ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಬಹುದು ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ತಿಳಿಸಿದ್ದಾರೆ. ಕಂಪ್ಲಿ ಪಟ್ಟಣದ ಕಿಸಾನ್ ಜಾಗೃತಿ ಸಂಘವು ನಾಮಕರಣ ಮಾಡಲು ಕೋರಿದ್ದು, ಪುರಸಭೆಯ ಸಾಮಾನ್ಯ ಸಭೆಯ ನಡವಳಿಯ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅನುಮೋದಿಸಲಾಗಿದೆ. ಈ ಕುರಿತು ಯಾರಿಗಾದರೂ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ಮತ್ತು ಪೂರಕ ದಾಖಲೆಗಳೊಂದಿಗೆ ಪ್ರಕಟಣೆಗೊಂಡ 30 ದಿನಗಳೊಳಗಾಗಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಫೆ.02 ರಂದು ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜ.31(ಕರ್ನಾಟಕ ವಾರ್ತೆ): ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯಲ್ಲಿ 110ಕೆ.ವಿ ಲಿಲೋ ನಿರ್ಮಾಣ ಕಾರ್ಯವನ್ನು ತುರ್ತಾಗಿ ಕೈಗೆತ್ತಿಕೊಳ್ಳುತ್ತಿರುವುದರಿಂದ 110/11ಕೆ.ವಿ ಮೋಕಾ, 110/11ಕೆ.ವಿ ಮೀನಹಳ್ಳಿ ಉಪಕೇಂದ್ರದಿಂದ ಮತ್ತು 33/11ಕೆ.ವಿ ಉಪಕೇಂದ್ರದಿಂದ ಯರ್ರಗುಡಿ ವಿದ್ಯುತ್ ಸರಬರಾಜು ಆಗುವ ಎಲ್ಲಾ 11ಕೆ.ವಿ ಮಾರ್ಗಗಳಲ್ಲಿ ಫೆ.02 ರಂದು ಬೆಳಿಗ್ಗೆ 08 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನ ಬಾಬು ಅವರು ತಿಳಿಸಿದ್ದಾರೆ. *ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:* 110/11ಕೆ.ವಿ ಮೋಕಾ ಉಪಕೇಂದ್ರ ಮಾರ್ಗದ ಮೋಕಾ ಬಿ.ಡಿ.ಹಳ್ಳಿ ಗೋಟೂರು, ಕೆ.ಕೆಹಾಳ್, ಮಸೀದಿಪುರ, ವಣೆನೂರು, ಗುಡುದೂರು, ಶಿವಪುರ, ಕಪ್ಪಗಲ್ಲು, ಸಿರಿವಾರ, ಚಾಗನೂರು ಗೋಟೂರು, ಕೆ.ಕೆ.ಹಾಳ್, ಮಸೀದಿಪುರ, ವಣೆನೂರು, ಕರ್ಚೇಡು, ಬಸರಕೋಡು, ಹೀರೆಹಡ್ಲಿಗಿ, ಕರ್ಚೇಡು, ಬಸರಕೋಡು, ಹೀರೆಹಡ್ಲಿಗಿ, ಶಿವಪುರ, ಅಶೋಕ ನಗರ ಕ್ಯಾಂಪ್, ಕಪ್ಪಗಲ್ಲು, ಸಿರಿವಾರ, ಚಾಗನೂರು, ಮೋಕಾ ಮತ್ತು ಬಿ.ಡಿ.ಹಳ್ಳಿ ಗ್ರಾಮಗಳು ಮತ್ತು ಕೃಷಿ ಪ್ರದೇಶಗಳು. 110/11ಕೆ.ವಿ ಮೀನಹಳ್ಳಿ ಉಪಕೇಂದ್ರ ಮಾರ್ಗದ ಮೀನಹಳ್ಳಿ, ಶಿಡಿಗಿನಮೋಳ, ಕೆ.ವೀರಾಪುರ, ಕಾರೆಕಲ್ಲು, ಚಾಗನೂರು ಪಿ.ಡಿ.ಹಳ್ಳಿ, ಕಗ್ಗಲ್, ಲಿಂಗದೇವನಹಳ್ಳಿ, ಯಾಳ್ಪಿ, ಜೋಳದರಾಶಿ, ಚೆಳ್ಳಗುರ್ಕಿ ಗ್ರಾಮಗಳು ಮತ್ತು ಕೃಷಿ ಪ್ರದೇಶಗಳು. ಮೆ.ಜಾನಕಿ ಕಾರ್ಪೋ.ಪ್ರೈ.ಲಿ., ಮೆ.ಬಸಾಯಿ ಸ್ಟೀಲ್ ಪ್ರೈ.ಲಿ., ಮೆ.ಕ್ಲೀನ್ ಮ್ಯಾಕ್ಸ್ ಸೊಲಾರ್, ಕ್ಲೀನ್ ಸೊಲಾರ್, ಮೆ.ಮೌರ್ಯ ಸೀಲಾಮ್ ಸೋಲಾರ್ ಐ.ಪಿ.ಪಿ., 33/11ಕೆ.ವಿ ಉಪಕೇಂದ್ರ ಯರ್ರಗುಡಿ ಮಾರ್ಗದ ಡಿ.ಎನ್.ಹಳ್ಳಿ, ಜಿ.ಎನ್.ಹಳ್ಳಿ, ತಂಬ್ರಳ್ಳಿ, ಜಾಲಿಚಿಂತೆ, ಹಳೆ ಯರ್ರಗುಡಿ, ಹೊಸ ಯರ್ರಗುಡಿ, ಸಿಂಧುವಾಳ, ಬೆಣಕಲ್ಲು ಗೋನಾಳ್, ಜಾಲಿಹಾಳ್, ಬೊಮ್ಮನಹಾಳ್ 33ಕೆ.ವಿ ಎನ್.ಡಿ.ಪಿ.ಎಲ್ ಮತ್ತು ಕೃಷಿ ಪ್ರದೇಶಗಳು. ಆದ್ದರಿಂದ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಬಳ್ಳಾರಿ,ಜ.31(ಕರ್ನಾಟಕ ವಾರ್ತೆ): ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ 2023-24ನೇ ಸಾಲಿನ ಪಿಯುಸಿ ಯಿಂದ ಪಿಹೆಚ್‍ಡಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಹಾಗೂ ವೃತಿಪರ ಮತ್ತು ತಾಂತ್ರಿಕ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆರಿಟ್ ಕಮ್ ಮೀನ್ಸ್ ಶುಲ್ಕ ಮರುಪಾವತಿ ವಿದ್ಯಾರ್ಥಿವೇತನಕ್ಕಾಗಿ ಈಗಾಗಲೇ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಕೆಯ ಅವಧಿಯನ್ನು ವಿಸ್ತರಿಸಲಾಗಿದೆ. ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ದ, ಪಾರ್ಸಿ ಸಮುದಾಯದ ವಿದ್ಯಾರ್ಥಿಗಳು ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ನಗರದ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಮೌಲಾನ ಅಜಾದ ಭವನದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿ ಅಥವಾ ಆಯಾ ತಾಲ್ಲೂಕು ವಿಸ್ತರಣಾಧಿಕಾರಿಗಳ ಕಚೇರಿಗೆ ಭೇಟಿ ನೀಡಬಹುದು. ಜಿಲ್ಲಾ ಹಾಗೂ ತಾಲ್ಲೂಕು ಮಾಹಿತಿ ಕೇಂದ್ರಗಳ ದೂ: ಬಳ್ಳಾರಿ-08392-245755 ಮತ್ತು 8310321101, ಸಿರುಗುಪ್ಪ-9148889975, ಸಂಡೂರು-9036925966 ಹಾಗೂ ಹೆಲ್ಪ್ ಡೆಸ್ಕ್ ನಂ:8277799990 (24*7) ಸಹಾಯವಾಣಿಯ ಮೂಲಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನದ ಅರ್ಜಿ ಸಲ್ಲಿಸುವ ಪ್ರಕ್ರಿಯೆಯ ಬಗ್ಗೆ ಮಾಹಿತಿ ಮತ್ತು ತಾಂತ್ರಿಕ ತೊಂದರೆಗಳಿದ್ದಲ್ಲಿ ಸಂಪರ್ಕಿಸಬಹುದು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವಿಠೋಬಾ ಹೊನಕಾಂಡೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಮಂಗಳವಾರ, ಜನವರಿ 30, 2024

ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ ಯಶಸ್ವಿಗೊಳಿಸಿ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ನಗರದಲ್ಲಿ ಜ.30 ರಿಂದ ಫೆ.13 ರ ವರೆಗೆ ನಡೆಯುವ ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ ನಡೆಯುತ್ತಿದ್ದು, ಶಾಲಾ ಕಾಲೇಜುಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ಆರೊಗ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದಾಗ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮಹಾನಗರ ಪಾಲಿಕೆಯ ಸದಸ್ಯ ನಾಗಲಕೆರೆ ಗೋವಿಂದ್ ಅವರು ಹೇಳಿದರು. ಇಂದು, ನಗರ ಆರೋಗ್ಯ ಕೇಂದ್ರ ಬಂಡಿಹಟ್ಟಿ ವ್ಯಾಪ್ತಿಯ ಆಶ್ರಯ ಕಾಲೋನಿಯಲ್ಲಿ ಬರುವ ಜಿ.ಎ.ಡಿ.ಆಸ್ಪತ್ರೆಯಲ್ಲಿ “ಕಳಂಕವನ್ನು ಕೊನೆಗೊಳಿಸಿ ಘನತೆಯನ್ನು ಎತ್ತಿ ಹಿಡಿಯಿರಿ” ಎಂಬ ಘೋಷವಾಕ್ಯದಡಿ ಏರ್ಪಡಿಸಿದ್ದ ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ -2024 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಆರೋಗ್ಯ ಇಲಾಖೆ ಸಿಬ್ಬಂದಿಗಳು ಜ.31 ರಿಂದ ಫೆ.13 ರ ವರೆಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳಿಗೆ ಭೇಟಿ ಮಾಡಿ ಪ್ರತಿಜಾÐವಿಧಿ ಭೋದಿಸುವ ಮೂಲಕ ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ -2024 ಕಾರ್ಯಕ್ರಮ ಕುರಿತು ವ್ಯಾಪಕ ಪ್ರಚಾರ ಮಾಡಲಾಗುತ್ತದೆ ಎಂದು ತಿಳಿಸಿದರು. ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದ ವಾರ್ಡ್‍ಗಳಲ್ಲಿ ಗುಂಪು ಸಭೆಗಳನ್ನು ಮಾಡುವುದರ ಮೂಲಕ ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ -2024 ಕಾರ್ಯಕ್ರಮ ಕುರಿತು ವ್ಯಾಪಕ ಪ್ರಚಾರ ಮಾಡುತ್ತಾರೆ ಎಂದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ ಬಾಬು ಅವರು ಮಾತನಾಡಿ, ಕುಷ್ಠರೋಗ ಸಾಂಕ್ರಾಮಿಕ ರೋಗವಾಗಿದ್ದು, ಇದು ಮೈಕೋಬ್ಯಾಕ್ಟೀರಿಯಂ ಲೆಪ್ರೈ ಎಂಬ ರೋಗಾಣುವಿನಿಂದ ಬರುತ್ತದೆ. ಇದು ಚಿಕಿತ್ಸೆ ಪಡೆಯದೇ ಇರುವ ಕುಷ್ಠರೋಗಿಯು ಕೆಮ್ಮಿದಾಗ ಸೀನಿದಾಗ ತುಂತುರು ಹನಿಗಳು ಉಸಿರಾಡುವ ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವಂತಹ ರೋಗವಾಗಿದ್ದು, ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರಿಂದ ಅಂಗವಿಕಲತೆಯಾಗುವುದನ್ನು ತಪ್ಪಿಸಬಹುದೆಂದು ತಿಳಿಸಿದರು. ಪ್ರಸ್ತುತ ಜಿಲ್ಲೆಯಲ್ಲಿ 88 ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ತಿಳಿಸಿದರು. ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯ ಆಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ, ನಗರ ಸಭೆಗಳಲ್ಲಿ, ಪುರಸಭೆಗಳಲ್ಲಿ, ಪಟ್ಟಣ ಪಂಚಾಯತಿಗಳಲ್ಲಿ, ಮಹಾನಗರಪಾಲಿಕೆಗಳಲ್ಲಿ, ಆಧಿಕಾರಿಗಳು, ಸಿಬ್ಬಂದಿಗಳು, ಚುನಾಯಿತ ಜನಪ್ರತಿನಿಧಿಗಳಿಗೆ ಪ್ರತಿಜಾÐವಿಧಿ ಭೋದಿಸುವ ಮೂಲಕ ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ -2024 ಕಾರ್ಯಕ್ರಮ ಕುರಿತು ವ್ಯಾಪಕ ಪ್ರಚಾರ ಮಾಡಲಾಗುತ್ತದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಡಂಗೂರ ಹಾಕಿಸುವುದು. ಕಸದ ವ್ಯಾನ್‍ಗಳ ಮೂಲಕ ಆಡಿಯೋ ಜಿಂಗಲ್ಸ್ ಹಾಕುವುರ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು. ಮಹಾತ್ಮ ಗಾಂಧೀಜಿಯವರ ಕಂಡ ಕನಸು “ಕುಷ್ಠರೋಗ ಮುಕ್ತ ಭಾರತ ” ಮಾಡಲು ಆರೊಗ್ಯ ಇಲಾಖೆ ಸಿಬ್ಬಂದಿಗಳು ಗ್ರಾಮ ಪಂಚಾಯತಿ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಮಹಾನಗರ ಪಾಲಿಕೆ, ಶಾಲಾ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು ಹಾಗು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು. ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರು, ಆಡಳಿತ ವೈಧ್ಯಾಧಿಕಾರಿಗಳಾದ ಡಾ.ಕಾಶೀಪ್ರಸಾದ, ಡಾ.ಯಾಸ್ಮಿನ್, ಡಿ.ಎಫ್.ಐ.ಟಿ. ಸಮನ್ವಯ ಅಧಿಕಾರಿ ಎಸ್.ಸುಧಾಕರ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಚೇರಿಯ ಮೇಲ್ವಿಚಾರಕ ಎ.ಮಾನಪ್ಪ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮೇಲ್ವಿಚಾರಕ ಮುಸ್ತಾಕ್ ಅಹಮ್ಮದ್ ಸೇರಿದಂತೆ ಆಶಾ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು. -------

ಸಂವಿಧಾನ ಜಾಗೃತಿ ಜಾಥಾ: ಅದ್ದೂರಿ ಸ್ವಾಗತ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ಸಂವಿಧಾನದ ಆಶಯ ಮತ್ತು ಮೌಲ್ಯಗಳನ್ನು ಕುರಿತು ಸಾರ್ವಜನಿಕರಲ್ಲಿ ಜಾಗೃತಿಯನ್ನು ಮೂಡಿಸಲು ಜಿಲ್ಲೆಯಲ್ಲಿ ನಡೆಯುತ್ತಿರುವ “ಸಂವಿಧಾನ ಜಾಗೃತಿ ಜಾಥಾ”ವು ಮಂಗಳವಾರದಂದು ಕೊಳಗಲ್ಲು, ಬಿ.ಬೆಳಗಲ್ಲು, ಹಲಕುಂದಿ, ಸಂಜೀವರಾಯನಕೋಟೆ, ವೈ.ಬೂದಿಹಾಳ್ ಹಾಗೂ ಶಂಕರಬಂಡೆ ಮಾರ್ಗವಾಗಿ ಸಂಚರಿಸಿ, ಸಂವಿಧಾನ ರಚನಾ ಸಭೆಯ ಕುರಿತ ವಿಡಿಯೋ ತುಣುಕುಗಳನ್ನು ಸಾರ್ವಜನಿರಿಗೆ ಪ್ರದರ್ಶಿಸಿ, ಸಂವಿಧಾನ ಪ್ರಸ್ತಾವನೆಯ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿ ಜಾಥಾದ ಉದ್ದಕ್ಕೂ ಸಂವಿಧಾನ ಪ್ರಸ್ತಾವನೆಯ ಪ್ರತಿಗಳನ್ನು ಹಂಚಿಕೆ ಮಾಡಲಾಯಿತು. ಇಂದು ಬೆಳಿಗ್ಗೆ ಕೊಳಗಲ್ಲು ಗ್ರಾಮದಲ್ಲಿ ಜಾಥಾವನ್ನು ಪೂರ್ಣ ಕುಂಭ ಹೊತ್ತ ಮಹಿಳೆಯರು, ಡೊಳ್ಳು ಕಲಾವಿದರು, ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು, ಗ್ರಾಮದ ಜನಪ್ರತಿನಿಧಿಗಳು, ಊರಿನ ಮುಖಂಡರು ಹಾಗೂ ಸಾರ್ವಜನಿಕರು ಅದ್ದೂರಿಯಾಗಿ ಸ್ವಾಗತಿಸಿದರು. ಕೊಳಗಲ್ಲು ಗ್ರಾಮದಲ್ಲಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 3ನೇ ತರಗತಿ ವಿದ್ಯಾರ್ಥಿ ಕೆ.ನಂದೀಶ ಸಂವಿಧಾನದ ಪ್ರಸ್ತಾವನೆಯ ಪ್ರತಿಜ್ಞಾ ವಿಧಿ ಬೋಧಿಸಿದ್ದು ವಿಶೇಷವಾಗಿತ್ತು. ಹಲಕುಂದಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸದಸ್ಯರಾದ ಕೇಶವ ಅವರು ಮಾತನಾಡಿ, ರಾಜ್ಯ ಸರ್ಕಾರವು ಸಂವಿಧಾನ ಜಾಗೃತಿ ಜಾಥಾವನ್ನು ಎಲ್ಲಾ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಂಚರಿಸಿ ಜನ ಜಾಗೃತಿ ಮೂಡಿಸುತ್ತಿರುವುದು ತುಂಬಾ ಸಂತೋಷದಾಯಕವಾದ ವಿಚಾರವಾಗಿದೆ ಎಂದು ತಿಳಿಸಿದರು. ಸಂಜೀವರಾಯನಕೋಟೆಯಲ್ಲಿ ಮಾಜಿ ಎಸ್.ಡಿ.ಎಂ.ಸಿ. ಅಧ್ಯಕ್ಷರಾದ ಆರ್.ಶಿವನಗೌಡ ಮಾತನಾಡಿ, ಈ ಜನಜಾಗೃತಿ ಕಾರ್ಯಕ್ರಮವನ್ನು ಸರ್ಕಾರವು ಆಯೋಜಿಸಿದ್ದು, ಜನಸಾಮಾನ್ಯರಿಗೆ ಸಂವಿಧಾನದ ಬಗೆಗೆ ಅರಿಯಲು ಸಹಕಾರಿಯಾಗಿದೆ ಎಂದರು. ಜಾಥಾ ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು, ಶಿಕ್ಷಕರು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು, ವಿವಿಧ ಇಲಾಖೆಗಳ ಸಿಬ್ಬಂದಿ ವರ್ಗದವರು, ಗ್ರಾಮ ಪಂಚಾಯಿತಿಗಳ ಜನಪ್ರತಿನಿಧಿಗಳು, ಪೂರ್ಣ ಕುಂಭ ಹೊತ್ತ ಮಹಿಳೆಯರು ಹಾಗೂ ಸಾರ್ವಜನಿಕರು ಪಾಲ್ಗೊಂಡಿದ್ದರು. ---------

ವಿದ್ಯಾರ್ಥಿ ನಿಲಯ ನಡೆಸಲು ಬಾಡಿಗೆ ಆಧಾರದಲ್ಲಿ ಖಾಸಗಿ ಕಟ್ಟಡ ನೀಡಲು ಮಾಲೀಕರಿದ್ದಲ್ಲಿ ಸಂಪರ್ಕಿಸಿ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಕಂಪ್ಲಿ ಪಟ್ಟಣದಲ್ಲಿನ ನಿರ್ವಹಿಸುತ್ತಿರುವ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಕಂಪ್ಲಿ ಟೌನ್ (ಬಿಸಿಡಬ್ಲ್ಯೂಡಿ 200) ಈ ವಿದ್ಯಾರ್ಥಿ ನಡೆಸಲು ಲೋಕೋಪಯೋಗಿ ಇಲಾಖೆ ನಿಗದಿ ಪಡಿಸುವ ಬಾಡಿಗೆಗೆನುಸಾರವಾಗಿ ಕಟ್ಟಡವನ್ನು ಬಾಡಿಗೆಗೆ ನೀಡಲು ಇಚ್ಚಿಸುವ ಕಟ್ಟಡಗಳ ಮಾಲೀಕರಿದ್ದಲ್ಲಿ ಸಂಪರ್ಕಿಸಬೇಕೆಂದು ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಅವರು ತಿಳಿಸಿದ್ದಾರೆ. *ಸಂಪರ್ಕಿಸುವ ಕಚೇರಿ ವಿಳಾಸ:* ತಾಲ್ಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿ, 1ನೇ ಮಹಡಿ ಡಿಸ್ನಿ ಫಂಕ್ಷನ್ ಹಾಲ್ ಎದುರುಗಡೆ, ಎಲ್.ಎಲ್.ಸಿ ಕಾಲೋನಿ ಹತ್ತಿರ, ಓ.ಪಿ.ಸರ್ಕಲ್ ಕಂಟೋನ್‍ಮೆಂಟ್, ಬಳ್ಳಾರಿ-583104, ದೂರವಾಣಿ ಸಂಖ್ಯೆ: 08392 294492 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ------

ಕುಟುಂಬಸ್ಥರು ಕಾಣೆ; ಪತ್ತೆಗೆ ಮನವಿ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ಗಾಂಧಿನಗರ ಪೆÇೀಲಿಸ್ ಠಾಣೆ ವ್ಯಾಪ್ತಿಯಲ್ಲಿ ಎಸ್.ಎಂ.ಜಯದೇವ ಎನ್ನುವ 71 ವರ್ಷದ ವ್ಯಕ್ತಿ, ಎಸ್.ಎಂ.ಗಿರೀಜಾ ದೇವಿ ಎನ್ನುವ 65 ವರ್ಷದ ಮಹಿಳೆ, ಎಸ್.ಎಂ ಸುಲಕ್ಷನಾ ದೇವಿ ಎನ್ನುವ 40 ವರ್ಷದ ಮಹಿಳೆ ಎನ್ನುವ ಒಂದೇ ಕುಟುಂಬಸ್ಥರು 2023ರ ಜು.27 ರಂದು ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಗಾಂಧಿನಗರ ಪೆÇೀಲಿಸ್ ಠಾಣೆಯ ಪೆÇೀಲಿಸ್ ಸಬ್‍ಇನ್ಸ್‍ಪೆಕ್ಟರ್ ಮನವಿ ಮಾಡಿದ್ದಾರೆ. ಎಸ್.ಎಂ. ಜಯದೇವ ಅವರ ಚಹರೆ ಗುರುತು: ಎತ್ತರ 5.8 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕನ್ನಡ, ತೆಲುಗು, ಇಂಗ್ಲೀಷ್ ಭಾಷೆ ಮಾತನಾಡುತ್ತಾನೆ. ವ್ಯಕ್ತಿ ಕಾಣೆಯಾದ ಸಂಧರ್ಭದಲ್ಲಿ ಬಿಳಿ ಶರ್ಟ್ ಮತ್ತು ನೀಲಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಎಸ್.ಎಂ.ಗಿರಿಜಾ ದೇವಿ ಚಹರೆ ಗುರುತು: ಎತ್ತರ 5 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕನ್ನಡ, ತೆಲುಗು, ಇಂಗ್ಲೀಷ್ ಭಾಷೆ ಮಾತನಾಡುತ್ತಾಳೆ. ಕಾಣೆಯಾದ ಸಂಧರ್ಭದಲ್ಲಿ ನೀಲಿ ಸೀರೆ ಧರಿಸಿರುತ್ತಾಳೆ ಎಸ್.ಎಂ.ಸುಲಕ್ಷನಾ ದೇವಿ ಚಹರೆ ಗುರುತು: ಎತ್ತರ 5.5 ಅಡಿ, ಕೋಲು ಮುಖ, ಗೋಧಿ ಮೈಬಣ್ಣ, ತೆಳ್ಳನೆಯ ಮೈಕಟ್ಟು ಹೊಂದಿದ್ದು, ಕನ್ನಡ, ತೆಲುಗು, ಇಂಗ್ಲೀಷ್ ಭಾಷೆ ಮಾತನಾಡುತ್ತಾಳೆ. ಕಾಣೆಯಾದ ಸಂಧರ್ಭದಲ್ಲಿ ಬಿಳಿ ನೈಟಿ ಧರಿಸಿರುತ್ತಾಳೆ. ಮೇಲ್ಕಂಡ ಚಹರೆಯುಳ್ಳ ಕುಟುಂಬಸ್ಥರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ:08392272192, ಗಾಂಧಿನಗರ ಪೆÇೀಲಿಸ್ ಠಾಣೆ ಪಿ.ಎಸ್.ಐ ಮೊ:9480803082, ಗಾಂಧಿನಗರ ಪಿ.ಐ ಮೊ:9480803046 ಇವರಿಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕುಡತಿನಿಯಲ್ಲಿ ತಾಲ್ಲೂಕು ಮಟ್ಟದ 'ಜನಸ್ಪಂದನ'/ಸಮಸ್ಯೆಗಳ ಮಹಾಪೂರ; ಬಗೆಹರಿಸಲು ಆಶ್ವಾಸನೆ

‘ಕುಡತಿನಿ ಪಟ್ಟಣದಲ್ಲಿ ವಿವಿಧ ವಾರ್ಡ್‍ಗಳಲ್ಲಿ ರಸ್ತೆ ಅಭಿವೃದ್ದಿ ಕಾಮಗಾರಿ ಮತ್ತು ಒಳಚರಂಡಿ ವ್ಯವಸ್ಥೆ ಮಾಡಬೇಕು. ಪಟ್ಟಣದ ಸುತ್ತ ಮುತ್ತಲಿನ ಕಾರ್ಖಾನೆಗಳಿಂದ ಹೊರಸೂಸುವ ವಿಷ ಅನಿಲದಿಂದ ಸಾರ್ವಜನಿಕರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದ್ದು, ಜಿಲ್ಲಾಡಳಿತವು ನಿಯಂತ್ರಣ ಮಾಡುವಲ್ಲಿ ಸೂಕ್ತ ಕ್ರಮ ಕೈಗೊಳ್ಳಬೇಕು.’ ‘ಪಟ್ಟಣವು ಹೆಚ್ಚು ಜನಸಂಖ್ಯೆ ಹೊಂದಿದ್ದು, ಸ್ಮಶಾನಕ್ಕೆ ಭೂಮಿ ಸಮಸ್ಯೆಯಾಗುತ್ತಿದೆ. ಹೆಚ್ಚುವರಿಯಾಗಿ ಜಮೀನು ಮಂಜೂರು ಮಾಡಬೇಕು. ಪಟ್ಟಣವನ್ನು ಹಸೀರುಕರಣ ಮಾಡುವಲ್ಲಿ ಹೆಚ್ಚು ಗಿಡಗಳನ್ನು ನೆಟ್ಟು ಪರಿಸರ ಅಸಮತೋಲನ ಕಾಪಾಡಬೇಕು.’ ‘ಕುಡತಿನಿ ಪಟ್ಟಣದ ಸುತ್ತ ಮುತ್ತ 10 ಕ್ಕೂ ಹೆಚ್ಚು ಕಾರ್ಖಾನೆಗಳಿವೆ. ಅದರಲ್ಲಿ ಕೆಲಸ ಮಾಡಲು ತಾಂತ್ರಿಕ ತರಗತಿಗಳು ಅವಶ್ಯತೆ ಇದ್ದು, ಈ ಭಾಗದಲ್ಲಿ ಸರ್ಕಾರಿ ಡಿಪೆÇ್ಲೀಮಾ ಮತ್ತು ಪದವಿ ಪೂರ್ವ ಕಾಲೇಜು ಪ್ರಾರಂಭಿಸಬೇಕು. ಮುಖ್ಯವಾಗಿ ಸ್ಥಳೀಯರಿಗೆ ಕಾರ್ಖಾನೆಗಳಲ್ಲಿ ಉದ್ಯೋಗ ನೀಡಲು ಸೂಕ್ತ ಕ್ರಮ ಕೈಗೊಳ್ಳಬೇಕು.’ ‘ಕುಡತಿನಿ ಮತ್ತು ಕುರುಗೋಡು ಪಟ್ಟಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯಲ್ಲಿನ ರೇಲ್ವೆ ಮೇಲ್ಸೇತುವೆ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಬೇಕು’ ಎಂದು ಕುಡತಿನಿ ಪಟ್ಟಣದ ಪಲ್ಲೇದ್ ಭವನದಲ್ಲಿ ಮಂಗಳವಾರ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಕುಡತಿನಿ ಪಟ್ಟಣಕ್ಕೆ ಸಂಬಂಧಿಸಿದಂತೆ ಮೂಲ ಸೌಲಭ್ಯಗಳ ಕುರಿತು ಸಾಲು ಸಾಲು ಸಮಸ್ಯೆಗಳ ಮಹಾಪೂರವೇ ಹರಿದುಬಂದ ಪ್ರಸಂಗ ನಡೆಯಿತು. ಜಿಲ್ಲಾಡಳಿತ, ತಾಲ್ಲೂಕು ಆಡಳಿತ ಹಾಗೂ ಕುಡತಿನಿ ಪಟ್ಟಣ ಪಂಚಾಯಿತಿ ಇವರ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮವನ್ನು ಸಂಡೂರು ಶಾಸಕ ಈ.ತುಕರಾಂ ಅವರು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ‘ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಶಯದಂತೆ, ಸರ್ಕಾರವನ್ನೇ ಜನರ ಮನೆ ಬಾಗಿಲಿಗೆ ಕೊಂಡೊಯ್ದು ಅವರ ಸಮಸ್ಯೆಗಳನ್ನು ಅಲ್ಲಿಯೇ ಆಲಿಸಿ ಪರಿಹಾರ ಒದಗಿಸುವುದೇ ‘ಜನಸ್ಪಂದನ’ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ’ ಎಂದು ಹೇಳಿದರು. ಸರ್ಕಾರಿ ಸಂಬಂಧಿತ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಕೆಲಸಗಳನ್ನು ಸಕಾಲದಲ್ಲಿ ಮಾಡಿಕೊಳ್ಳಲು ಸಾಧ್ಯವಾಗದೇ ಇದ್ದಲ್ಲಿ, ಒಂದೇ ಸೂರಿನಡಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಅಹವಾಲುಗಳಿದ್ದಲ್ಲಿ ಸಲ್ಲಿಸಲು ಈ ಜನಸ್ಪಂದನ ಕಾರ್ಯಕ್ರಮದಲ್ಲಿ ಭಾಗವಹಿಸಿ ಬರವಣಿಗೆಯ ಮೂಲಕ ಅಹವಾಲು ನೀಡಬಹುದು ಎಂದು ತಿಳಿಸಿದರು. ಕುಡತಿನಿ ಪಟ್ಟಣದಲ್ಲಿ ಅನೇಕ ಸಮಸ್ಯೆಗಳಿವೆ, ಅವುಗಳನ್ನು ಹಂತ-ಹಂತವಾಗಿ ಬಗೆಹರಿಸಲು ರೂ.68 ಕೋಟಿ ವೆಚ್ಚದಲ್ಲಿ ಕಾಮಗಾರಿಗಳನ್ನು ಕೈಗೆತ್ತಿಕೊಂಡಿದ್ದು, ಕಾಲಮಿತಿಯಲ್ಲಿ ಬಗೆಹರಿಸಲಾಗುವುದು. ನಮ್ಮ ಸರ್ಕಾರವು ಎಲ್ಲಾ ವರ್ಗದ ಜನರಿಗೆ ಸರ್ಕಾರದ ಎಲ್ಲಾ ಸೌಲಭ್ಯಗಳನ್ನು ತಲುಪಿಸುತ್ತಿದೆ ಎಂದು ಹೇಳಿದ ಶಾಸಕ ಈ.ತುಕರಾಂ ಅವರು, ಸಾರ್ವಜನಿಕರು ‘ಜನಸ್ಪಂದನ’ ಕಾರ್ಯಕ್ರಮದ ಫಲಪ್ರದ ಮಾಡಿಕೊಳ್ಳಬೇಕು ಎಂದರು. ಕುಡತಿನಿ ಪಟ್ಟಣದಲ್ಲಿ 408 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿರುವ ರೈತರನ್ನು ಭೇಟಿ ಮಾಡಿದ ಅವರು, ಈ ಕುರಿತು ಈಗಾಗಲೇ ಮುಖ್ಯಮಂತ್ರಿಗಳ ಜೊತೆ ಸಭೆ ನಡೆಸಲಾಗಿದೆ. ಸಮಸ್ಯೆ ಆಲಿಸಿ, ಬಗೆಹರಿಸುವ ಆಶ್ವಾಸನೆ ನೀಡಿದರು. ಕಾರ್ಯಕ್ರಮಕ್ಕೂ ಮುನ್ನ ಜಿಲ್ಲಾ ಪಂಚಾಯತ್ ಮತ್ತು ಪಂಚಾಯತ್ ರಾಜ್ ಇಂಜಿನಿಯರಿಂಗ್ ವಿಭಾಗ ಮತ್ತು ಉಪವಿಭಾಗ ಆಶ್ರಯದಲ್ಲಿ 2021-22 ನೇ ಸಾಲಿನ ಡಿ.ಎಂ.ಎಫ್ ಅನುದಾನದಡಿ ರೂ.99 ಲಕ್ಷ ವೆಚ್ಚದಲ್ಲಿ ಪಟ್ಟಣದ ವಾಲ್ಮೀಕಿ ನಗರದಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯನ್ನು ಉದ್ಘಾಟಿಸಿದರು. ತಾಲ್ಲೂಕು ಮಟ್ಟದ ‘ಜನಸ್ಪಂದನ’ ಕಾರ್ಯಕ್ರಮದಲ್ಲಿ ಸಂಡೂರು ಶಾಸಕ ಈ.ತುಕರಾಂ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಾಳ್ಮೆಯಿಂದಲೇ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ತಾಲ್ಲೂಕು ಮಟ್ಟದ ಜನಸ್ಪಂದನ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ಅಹವಾಲು ಸಲ್ಲಿಸಲು ಅನುಕೂಲಕ್ಕಾಗಿ ಒಟ್ಟು ಎಲ್ಲಾ ಇಲಾಖೆಗಳನ್ನೊಳಗೊಂಡ 15 ಮಳಿಗೆಗಳನ್ನು ಹಾಕಲಾಗಿತ್ತು. ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಒಟ್ಟು 124 ಅರ್ಜಿಗಳು ಸ್ವೀಕೃತಗೊಂಡವು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್.ಎನ್., ಎಎಸ್ಪಿ ಬಿ.ನವೀನ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಅಬಕಾರಿ ಉಪ ಆಯುಕ್ತ ಮಂಜುನಾಥ, ಬಳ್ಳಾರಿ ತಾಲ್ಲೂಕು ತಹಶೀಲ್ದಾರ ಗುರುರಾಜ, ಕುರುಗೋಡು ತಾಲ್ಲೂಕು ತಹಶೀಲ್ದಾರ ರಾಘವೇಂದ್ರ ಸೇರಿದಂತೆ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು. -------

ಬಳ್ಳಾರಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯ/ ಸ್ವಚ್ಛತೆ ಕಾರ್ಯ ಪರಿಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ: ನ್ಯಾ.ಪುಷ್ಪಾಂಜಲಿ ದೇವಿ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ಎಲ್ಲರೂ ಸ್ವಚ್ಛತೆ ಕಾರ್ಯವನ್ನು ಕೈಗೊಳ್ಳಬೇಕು ಹಾಗೂ ದಿನನಿತ್ಯ ಇದನ್ನು ಪರಿಪಾಲನೆ ಮಾಡಬೇಕು. ಇದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಹೇಳಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ “ರಾಷ್ಟೀಯ ಸ್ವಚ್ಛತಾ ದಿನಾಚರಣೆ” ಅಂಗವಾಗಿ ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಕಸ ಮುಕ್ತ ಭಾರತ” ಕಾರ್ಯಕ್ರಮದ “ಜಾಗೃತಿ ಅಭಿಯಾನ”ದ ವಿಡಿಯೋ ಪ್ರದರ್ಶನಕ್ಕೆ ಬಟನ್ ಒತ್ತುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಎಲ್ಲರೂ ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತಾ ಕಾರ್ಯ ಒಂದು ದಿನಕ್ಕೆ ಸೀಮಿತವಾಗದೆ, ದಿನನಿತ್ಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕಸವನ್ನು ಎಲ್ಲೆಂದರೆಲ್ಲೆ ಬೀಸಾಡದೆ, ನಿಗದಿಪಡಿಸಿದ ವಾಹನಗಳಿಗೆ ಕಸ ನೀಡಬೇಕು ಎಂದು ತಿಳಿಸಿದರು. ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ “ನಾಗರೀಕರ ಸ್ವಚ್ಛತೆಯ ಕರ್ತವ್ಯ” ಎಂಬ ಭಿತ್ತಿಚಿತ್ರಗಳನ್ನು ಗಣ್ಯರು ಬಿಡುಗಡೆಗೊಳಿಸಿದರು. ಕಾರ್ಯಕ್ರಮದಲ್ಲಿ ಶ್ವಾಸ್ ಇಂಡಿಯಾ ಎನ್.ಜಿ.ಓ.ನ ಶಶಿಧರ್ ಕಲ್ಮತ್ ಅವರು ಜಾಗೃತಿ ಅಭಿಯಾನದ ಉದ್ದೇಶ ಹಾಗೂ ಕರ್ತವ್ಯಗಳ ಕುರಿತು ವಿಶ್ಲೇಷಣೆ ನೀಡಿದರು. ಬಳಿಕ “ರಾಷ್ಟೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ಜಿಲ್ಲಾ ನ್ಯಾಯಾಧೀಶರಿಂದ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು. ಈ ಸಂದರ್ಭದಲ್ಲಿ ಪ್ರಿನ್ಸಿಪಲ್ ಕೌಟುಂಬಿಕ ನ್ಯಾಯಾಧೀಶರಾದ ಸಿದ್ಧಲಿಂಗ ಪ್ರಭು, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಿನಯ್.ಡಿ, 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ, 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ವಿಮಲ್ ಆರ್.ನಂದಾಗಾಂವ್, ಪ್ರಿನ್ಸಿಪಲ್ ಹಿರಿಯ ಶ್ರೇಣಿ ಹಾಗೂ ಸಿಜೆಎಂ ನ್ಯಾಯಾಧೀಶರಾದ ಸತೀಶ್ ಜೆ.ಬಾಳಿ, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಅಪರ್ಣ, ಎರಡನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್.ಹೊಸಮನೆ, ಪ್ರಿನ್ಸಿಪಲ್ ಕಿರಿಯ ಶ್ರೇಣಿ ಹಾಗೂ ಸಿಜೆಎಂ ನ್ಯಾಯಾಧೀಶರಾದ ಅಮೀತ್ ಘಟ್ಟಿ, 1ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ಈರಪ್ಪ ದವಳೇಶ್ವರ, 2ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ಸಣ್ಣಹನಮಗೌಡ, 4ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ರೂಪ ಚಿನಿವಾರ, 5ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ಮುದುಕಪ್ಪ ಒಡನ್ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. --------

ಫೆ.01 ರಂದು ಮಡಿವಾಳ ಮಾಚಿದೇವ ಜಯಂತಿ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಫೆ.01 ರಂದು ಬೆಳಿಗ್ಗೆ 11.30 ಕ್ಕೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯುವ ಸಬಲೀಕರಣ, ಕ್ರೀಡಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಉದ್ಘಾಟನೆ ನೆರವೇರಿಸುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು. ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷರು ಹಾಗೂ ಶಾಸಕರಾದ ಜೆ.ಎನ್.ಗಣೇಶ್, ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಸಭಾ ಶಾಸಕರಾದ ಈ.ತುಕರಾಂ, ಬಿ.ಎಂ.ನಾಗರಾಜ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆ ಮಹಾಪೌರರಾದ ಬಿ.ಶ್ವೇತ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕರಾದ ಆಲಂ ಭಾಷಾ ಅವರು ಜಯಂತಿಯ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಸಂಧ್ಯಾ ಕೋಲಾಚಲಂ ಅವರಿಂದ ವಚನ ಗಾಯನ ನಡೆಯಲಿದೆ. ಮೆರವಣಿಗೆ: ಜಯಂತಿಯ ಅಂಗವಾಗಿ ಮೆರವಣಿಗೆಯು ಬೆಳಿಗ್ಗೆ 09.30 ಕ್ಕೆ ಮುನಿಸಿಪಲ್ ಮೈದಾನದಿಂದ ಆರಂಭವಾಗಿ ಇಂದಿರಾ ವೃತ್ತ, ಗಡಿಗಿ ಚೆನ್ನಪ್ಪ ವೃತ್ತ, ಬೆಂಗಳೂರು ರಸ್ತೆ, ಹಳೇ ಬ್ರೂಸ್‍ಪೇಟೆ ಪೊಲೀಸ್ ಠಾಣೆ, ತೇರು ಬೀದಿ, ಹೆಚ್.ಆರ್.ಗವಿಯಪ್ಪ ವೃತ್ತ ಮಾರ್ಗವಾಗಿ ಜಿಲ್ಲಾಧಿಕಾರಿಗಳ ಕಚೇರಿ ಮೂಲಕ ಬಿಡಿಎಎ ಫುಟ್‍ಬಾಲ್ ಮೈದಾನದವರೆಗೆ ನಡೆಯಲಿದೆ. ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝಬೇರ್.ಎನ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‍ಸಾಬ್ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಸೇರಿದಂತೆ ಸಮಾಜದ ಮುಖಂಡರು ಉಪಸ್ಥಿತರಿರುವರು. -------

ವ್ಯಕ್ತಿ ಕಾಣೆ: ಪತ್ತೆಗೆ ಮನವಿ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ಗಾಂಧಿನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ 35 ವರ್ಷದ ಎಂ.ಮಂಜುನಾಥ ಎನ್ನುವ ವ್ಯಕ್ತಿ ಜ.11ರಿಂದ ಕಾಣೆಯಾಗಿದ್ದು, ಪತ್ತೆಗೆ ಸಹಕರಿಸಬೇಕೆಂದು ಗಾಂಧಿನಗರ ಪೋಲಿಸ್ ಠಾಣೆಯ ಸಬ್ ಇನ್ಸ್‍ಪೆಕ್ಟರ್ ಅವರು ಮನವಿ ಮಾಡಿದ್ದಾರೆ. ವ್ಯಕ್ತಿಯ ಚಹರೆ ಗುರುತು: ಎತ್ತರ 4.9 ಅಡಿ, ಕೋಲುಮುಖ, ಕಪ್ಪು ಮೈಬಣ್ಣ ತೆಳ್ಳನೆಯ ಮೈಕಟ್ಟನ್ನು ಹೊಂದಿದ್ದು, ತೆಲುಗು, ಕನ್ನಡ ಭಾಷೆ ಮಾತನಾಡುತ್ತಾನೆ. ವ್ಯಕ್ತಿ ಕಾಣೆಯಾದ ಸಂಧರ್ಭದಲ್ಲಿ ನೀಲಿ ಮತ್ತು ಬಿಳಿ ಬಣ್ಣ ಮಿಶ್ರಿತ ಚಕ್ಸ್ ಶರ್ಟ್ ಹಾಗು ಗ್ರೇ ಕಲರ್ ಬರ್ಮೋಡ ಧರಿಸಿರುತ್ತಾನೆ. ಮೇಲ್ಕಂಡ ಚಹರೆಯುಳ್ಳ ವ್ಯಕ್ತಿ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ:08392258100, ಗಾಂಧಿನಗರ ಪೋಲಿಸ್ ಠಾಣೆ ದೂ:08392272192 ಮತ್ತು ಗಾಂಧಿನಗರ ಪೋಲಿಸ್ ಠಾಣೆಯ ಪಿ.ಎಸ್.ಐ ಮೊ:9480803082, ಗಾಂಧಿನಗರ ಪೋಲಿಸ್ ಠಾಣೆಯ ಪಿ.ಐ ಮೊ:9480803046 ಇವರಿಗೆ ಕರೆಮಾಡಿ ಮಾಹಿತಿ ನೀಡಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ನಗರದ ರೈಲ್ವೆ ಸ್ಟೇóಷನ್ ಎದುರುಗಡೆಯ ಡೀಲಕ್ಸ್ ಶೌಚಾಲಯದ ಮುಂಭಾಗದ ಫುಟ್‍ಪಾತ್ ಮೇಲೆ ಸುಮಾರು 45-50 ವಯಸ್ಸಿನ ಅನಾಮಧೇಯ ವ್ಯಕ್ತಿಯು ಯಾವುದೇ ಆರೈಕೆ ಇಲ್ಲದೇ ಹತ್ತಿರ ಜ.10ರಂದು ಮೃತಪಟ್ಟಿದ್ದು, ಮೃತ ದೇಹದÀ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಗಾಂಧಿನಗರ ಪೋಲಿಸ್ ಠಾಣೆಯ ಸಹಾಯಕ ಸಬ್ ಇನ್ಸ್‍ಪೆಕ್ಟರ್ ಅವರು ಮನವಿ ಮಾಡಿದ್ದಾರೆ. ಮೃತನ ಚಹರೆ ಗುರುತು: ಎತ್ತರ 5.4 ಅಡಿ, ಕೋಲು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಕಪ್ಪು ಕೂದಲು, ಕಪ್ಪು ಮತ್ತು ಬಿಳಿ ಗಡ್ಡ ಮೀಸೆ ಇದ್ದೂ, ನೀಲಿ ಬಣ್ಣದ ಅಂಗಿ ಮತ್ತು ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಮೇಲ್ಕಂಡ ಅನಾಮಧೇಯ ಮೃತ ವ್ಯಕ್ತಿಯ ವಾರಸುದಾರರ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ:08392258100 ಮತ್ತು ಗಾಂಧಿನಗರ ಪೋಲಿಸ್ ಠಾಣೆಯ ದೂ:08392272192 ಅಥವಾ ಪೋಲಿಸ್ ಠಾಣೆಯ ಪಿ.ಐ ಮೊ:9480803046 ಇವರನ್ನು ಸಂಪರ್ಕಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಯುವಕ ಕಾಣೆ ನಾಪತ್ತೆ: ಪತ್ತೆಗೆ ಮನವಿ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ತೋರಣಗಲ್ಲು ಪೆÇೀಲಿಸ್ ಠಾಣೆ ವ್ಯಾಪ್ತಿಯ ಜಿಂದಾಲ್‍ನಲ್ಲಿ ಕೆಲಸ ನಿರ್ವಹಿಸುತ್ತಿದ್ದ 25 ವರ್ಷದ ಶ್ರೀ ರಾಮ್ ಸಾಯಿ ಕುಮಾರ್ ಎನ್ನುವ ಯುವಕ ಜ.23ರಂದು ಕಾಣೆಯಾದ್ದು ಪತ್ತೆಗೆ ಸಹಕರಿಸಬೇಕೆಂದು ತೋರಣಗಲ್ಲು ಪೆÇೀಲಿಸ್ ಠಾಣೆಯ ತನಿಖಾ ಪೆÇೀಲಿಸ್ ಸಬ್ ಇನ್ಸ್‍ಪೆಕ್ಟರ್ ಅವರು ಮನವಿ ಮಾಡಿದ್ದಾರೆ. ಯುವಕನ ಚಹರೆ ಗುರುತು: ಎತ್ತರ 5.4 ಅಡಿ, ದುಂಡು ಮುಖ, ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೋಂದಿದ್ದು, ತೆಲುಗು,ಹಿಂದಿ ಮತ್ತು ಇಂಗ್ಲಿಷ್ ಭಾಷೆ ಮಾತನಾಡುತ್ತಾನೆ. ಕಾಣೆಯಾದ ಸಂಧರ್ಭದಲ್ಲಿ ಗ್ರೀನ್ ಕಲರ್ ಟೀ ಶರ್ಟ್, ಕಪ್ಪು ಬಣ್ಣದ ಪ್ಯಾಂಟ್ ಧರಿಸಿರುತ್ತಾನೆ. ಮೇಲ್ಕಂಡ ಚಹರೆಯುಳ್ಳ ಯುವಕನ ಮಾಹಿತಿ ಸಿಕ್ಕಲ್ಲಿ ತೋರಣಗಲ್ಲು ಪೆÇೀಲಿಸ್ ಠಾಣೆ ದು: 08395250100 ಅಥವಾ ತೋರಣಗಲ್ಲು ಪೆÇೀಲಿಸ್ ಠಾಣೆ ಪಿ.ಎಸ್.ಐ ಮೊ: 9480803062 ಇವರಿಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ಕೋರಿದ್ದಾರೆ. ----------

ಅನಾಮಧೇಯ ಮೃತದೇಹ ವಾರಸುದಾರರ ಪತ್ತೆಗೆ ಮನವಿ

ಬಳ್ಳಾರಿ,ಜ.30(ಕರ್ನಾಟಕ ವಾರ್ತೆ): ನಗರದ ವಿಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದ 55-60 ವರ್ಷದ ಅನಾಮಧೇಯ ವೃದ್ಧ ಜ.17ರಂದು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ. ಮೃತ ವೃದ್ಧನ ವಾರಸುದಾರರ ಪತ್ತೆಗೆ ಸಹಕರಿಸಬೇಕೆಂದು ಗಾಂಧಿನಗರ ಪೆÇೀಲಿಸ್ ಠಾಣೆಯ ಠಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಚಹರೆ ಗುರುತು: ಎತ್ತರ 5.2 ಅಡಿ, ಕೋಲು ಮುಖ,ಕಪ್ಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿದ್ದು, ಬಿಳಿ ಕೂದಲು, ಕಪ್ಪು ಮತ್ತು ಬಿಳಿ ಗಡ್ಡ ಮೀಸೆ ಇದ್ದು, ದೇಹದ ಮೇಲೆ ಬಟ್ಟೆ ಇರುವುದಿಲ್ಲ. ಮೇಲ್ಕಂಡ ಚಹರೆಯುಳ್ಳ ಮೃತ ವೃದ್ಧನ ವಾರಸುದಾರರ ಬಗ್ಗೆ ಮಾಹಿತಿ ಇದ್ದಲ್ಲಿ ಬಳ್ಳಾರಿ ಕಂಟ್ರೋಲ್ ರೂಂ ದೂ:08392258100 ಮತ್ತು ಗಾಂಧಿನಗರ ಪೆÇೀಲಿಸ್ ದೂ: 08392272192 ಅಥವಾ ಗಾಂಧಿನಗರ ಪೆÇೀಲಿಸ್ ಠಾಣೆಯ ಪಿ.ಐ ಮೊ: 9480803046 ಗೆ ಕರೆ ಮಾಡಿ ಮಾಹಿತಿ ನೀಡಬೇಕೆಂದು ತಿಳಿಸಿದ್ದಾರೆ. ---------

ಸೋಮವಾರ, ಜನವರಿ 29, 2024

ಕಲಾ ಪ್ರತಿಭೆ ಅನಾವರಣಗೊಳಿಸಿದ ‘ಚಿಗುರು’ ಸಾಂಸ್ಕøತಿಕ ಕಾರ್ಯಕ್ರಮ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಮಕ್ಕಳಲ್ಲಿರುವ ಕಲಾ ಪ್ರತಿಭೆಯನ್ನು ಗುರುತಿಸಿ ಪೆÇ್ರೀತ್ಸಾಹಿಸುವ ಅವಶ್ಯಕತೆ ಇದೆ ಎಂದು ಛತ್ರಪತಿ ಶಿವಾಜಿ ವಿದ್ಯಾಮಂದಿರ ಪ್ರೌಢಶಾಲೆಯ ಮುಖ್ಯೋಪಧ್ಯಾಯರಾದ ಕೆ.ಕೊಟ್ರಪ್ಪ ಅವರು ಅಭಿಪ್ರಾಯಪಟ್ಟರು. ಕರ್ನಾಟಕ ಸಂಭ್ರಮ-50 ರ ಅಂಗವಾಗಿ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಸಂಡೂರು ಪಟ್ಟಣದ ಛತ್ರಪತಿ ಶಿವಾಜಿ ವಿದ್ಯಾಮಂದಿರ ಫ್ರೌಢಶಾಲೆಯ ಡಾ.ಎಂ.ವೈ.ಘೋರ್ಪಡೆ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ‘ಚಿಗುರು’ ಸಾಂಸ್ಕøತಿಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಶೈಕ್ಷಣಿಕ ಹಾಗೂ ಕ್ರೀಡೆಯ ಜೊತೆಗೆ ಮಕ್ಕಳಿಗೆ ನಮ್ಮ ಕಲೆ ಸಂಸ್ಕøತಿ ಸಾಹಿತ್ಯವನ್ನು ಪರಿಚಯಿಸುವುದರೊಂದಿಗೆ ಅವರಲ್ಲಿ ಅಡಗಿರುವ ಕಲಾ ಪ್ರತಿಭೆಯನ್ನು ಬೆಳಕಿಗೆ ತರಲು ಶಿಕ್ಷಕರು ಹಾಗೂ ಪೆÇೀಷಕರು ಪ್ರಯತ್ನಿಸಬೇಕು ಎಂದು ಅವರು ಹೇಳಿದರು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದ ಅವರು, ಸರಕಾರವು ಕನ್ನಡ ಸಂಸ್ಕøತಿ ಇಲಾಖೆಯ ಮೂಲಕ ಕಲೆಗೆ ಉತ್ತಮ ಪೆÇ್ರೀತ್ಸಾಹ ನೀಡುತ್ತಿದೆ, ಕಲೆಗಳು ನಾಲ್ಕುಗೋಡೆಯ ಮಧ್ಯೆ ಇರದೆ ವೇದಿಕೆಯ ಮೇಲೆ ಪ್ರದರ್ಶಿತವಾಗಬೇಕು ಎಂದರು. ಈ ಸಂದರ್ಭದಲ್ಲಿ ಸಂಡೂರು ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ.ಜಗದೀಶ ಬಸಾಪುರ ಸೇರಿದಂತೆ ಶಿಕ್ಷಕರು, ವಿಧ್ಯಾರ್ಥಿಗಳು ಇನ್ನಿತರರು ಉಪಸ್ಥಿತರಿದ್ದರು. ನಂತರದಲ್ಲಿ ಬಳ್ಳಾರಿಯ ನಚಿಕೇತ್ ಭಟ್ ಜೋಶಿ ಅವರಿಂದ ವಾಯಲಿನ್ ವಾದನ, ದೋಣಿಮಲೈ ಟೌನ್‍ಶಿಪ್‍ನ ಟಿ.ಸಿಂಚನರಿಂದ ಸುಗಮ ಸಂಗೀತ, ಬಳ್ಳಾರಿ ನಿಧಿ ಆಟ್ರ್ಸ್ ಟ್ರಸ್ಟ್ ವತಿಯಿಂದ ಸಮೂಹ ನೃತ್ಯ, ದೋಣಿಮಲೈ ಡಿಟಿ ಶಿಪ್‍ನ ಎಸ್.ಕೀರ್ತನಾ ಅವರಿಂದ ಜಾನಪದ ಗೀತೆಗಳು, ಸಿರಿವಾರ ಮಲ್ಲಿಕಾರ್ಜುನ ಅವರಿಂದ ಏಕಪಾತ್ರಾಭಿನಯ (ಬಾಲಕೃಷ್ಣ ಬಯಲಾಟ), ಇಬ್ರಾಹಿಂಪುರದ ಹೆಚ್.ರಾಹುಲ್ ಸಂಗಡಿಗರಿಂದ ನಾಟಕ(ಗೌತಮಬುದ್ಧ) ಕಾರ್ಯಕ್ರಮ ಪ್ರದರ್ಶನಗೊಂಡವು. -------