ಗುರುವಾರ, ಜನವರಿ 25, 2024

ವಿವಿಧೆಡೆ ದಾಳಿ; 02 ಕಿಶೋರ ಕಾರ್ಮಿಕ ಮಕ್ಕಳ ರಕ್ಷಣೆ

ಬಳ್ಳಾರಿ,ಜ.25(ಕರ್ನಾಟಕ ವಾರ್ತೆ): ನಗರದಲ್ಲಿ ಜಿಲ್ಲಾಧಿಕಾರಿಗಳ ನಿರ್ದೇಶನದ ಮೇರೆಗೆ ಕೌಲ್ ಬಜಾರ್, ಬಟ್ಟಿ ಏರಿಯಾ, ದರ್ಗಾ ಹತ್ತಿರ, ಕಾಳಮ್ಮ ಬಜಾರ್ ಮತ್ತು ಕೆ.ಸಿ ರಸ್ತೆ ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿನ ಗ್ಯಾರೇಜ್, ಬೇಕರಿ, ಹೋಟೆಲ್, ಮೆಕ್ಯಾನಿಕ್ ಶಾಪ್, ಕಿರಾಣಿ ಅಂಗಡಿ, ಇಟ್ಟಂಗಿ ಭಟ್ಟಿ, ಗುಜರಿ ಶಾಪ್ ಇತ್ಯಾದಿ ಉದ್ದಿಮೆಗಳ ಮೇಲೆ ಗುರುವಾರ ಆಕಸ್ಮಿಕ ದಾಳಿ ನಡೆಸಿ 02 ಕಿಶೋರಕಾರ್ಮಿಕ ಮಕ್ಕಳನ್ನು ಕೆಲಸದಿಂದ ಬಿಡುಗಡೆಗೊಳಿಸಿ, ಮಕ್ಕಳನ್ನು ಮಕ್ಕಳ ಕಲ್ಯಾಣ ಸಮಿತಿಗೆ ಹಾಜರುಪಡಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ ಯೋಜನಾ ನಿರ್ದೇಶಕ ಎ.ಮೌನೇಶ್ ತಿಳಿಸಿದ್ದಾರೆ. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಬಾಲಕಾರ್ಮಿಕ ಯೋಜನೆ, ಕಾರ್ಮಿಕ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣ ಘಟಕ, ಶಿಕ್ಷಣ ಇಲಾಖೆ, ಆರೋಗ್ಯ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಚೈಲ್ಡ್‍ಲೈನ್ ಸಹಯೋಗದೊಂದಿಗೆ ಟಾಸ್ಕ್‍ಫೋರ್ಸ್ ಸಭೆ ನಡೆಸಿ ದಾಳಿ ಮಾಡಲಾಗಿದೆ. ಈ ಟಾಸ್ಕ್ ಪೋರ್ಸ್ ಸಮಿತಿಯಲ್ಲಿ ಕಾರ್ಮಿಕ ನಿರೀಕ್ಷಕ ರಮೇಶ್, ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಸಮಾಲೋಚಕ ಮಲ್ಲೇಶಪ್ಪ, ಸಹಾಯಕ ಶಿಶು ಅಭಿವೃದ್ದಿ ಅಧಿಕಾರಿ ನಾಗವೇಣಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ ನಿಲೋಫಿಯ, ಪೊಲೀಸ್ ಅಧಿಕಾರಿಗಳು ಹಾಗೂ ಚೈಲ್ಡ್ ಲೈನ್ ಸಿಬ್ಬಂದಿ ಅರುಣ್ ಹಾಜರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ