ಮಂಗಳವಾರ, ಜನವರಿ 2, 2024
ಜ.05 ರಂದು “ಜನಸ್ಪಂದನ" ಕಾರ್ಯಕ್ರಮ
ಬಳ್ಳಾರಿ,ಜ.02(ಕರ್ನಾಟಕ ವಾರ್ತೆ):
ತಾಲ್ಲೂಕಿನಲ್ಲಿ ಜನವರಿ-2024 ಮಾಹೆಯಲ್ಲಿ ತಾಲ್ಲೂಕು ಮಟ್ಟದ “ಜನಸ್ಪಂದನ” ಕಾರ್ಯಕ್ರಮವನ್ನು ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರ ಅಧ್ಯಕ್ಷತೆಯಲ್ಲಿ ಜ.05 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಅನಂತಪುರ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿನ ತಾಲ್ಲೂಕು ಕಚೇರಿಯ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರಾ ಅವರು ತಿಳಿಸಿದ್ದಾರೆ.
ಸಾರ್ವಜನಿಕರು ಸರ್ಕಾರಿ ಕೆಲಸಕ್ಕೆ ಸಂಬಂಧಿಸಿದಂತೆ ತಮ್ಮ ಅಹವಾಲುಗಳೇನಾದರು ಇದ್ದರೆ ಜ.05 ರಂದು ನಡೆಯುವ “ಜನಸ್ಪಂದನ” ಕಾರ್ಯಕ್ರಮದಲ್ಲಿ ಭಾಗವಹಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದು ಎಂದು ಅವರು ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ