ಶುಕ್ರವಾರ, ಜನವರಿ 5, 2024
ರಾಜ್ಯ ಮಟ್ಟದ ಯುವಜನೋತ್ಸವ ಜ.06, 07 ರಂದು
ಬಳ್ಳಾರಿ,ಜ.05(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ರಾಜ್ಯ ಮಟ್ಟದ ಯುವಜನೋತ್ಸವ ಜ.06 ಮತ್ತು 07 ರಂದು ಶ್ರೀ ಮಹರ್ಷಿ ವಾಲ್ಮೀಕಿ ಸಮುದಾಯ ಭವನದಲ್ಲಿ ಏರ್ಪಡಿಸಲಾಗಿದೆ.
ಜ.06 ರಂದು ಸಂಜೆ 05.30 ಗಂಟೆಗೆ ಉದ್ಘಾಟನಾ ಸಮಾರಂಭ ನಡೆಯಲಿದೆ.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು ಮತ್ತು ಘನ ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ನಾರಾ ಭರತ್ ರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಉಪಮಹಾಪೌರರಾದ ಬಿ.ಜಾನಕಿ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ಕೆ.ವಿ.ತ್ರಿಲೋಕ್ ಚಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತರಾದ ಎನ್.ಶಶಿಕುಮಾರ್, ಬಳ್ಳಾರಿ ವಲಯ ಪೊಲೀಸ್ ಮಹಾನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್.ಎನ್., ಸಹಾಯಕ ಆಯುಕ್ತ ಹೇಮಂತ್.ಎನ್., ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ.ಗ್ರೇಸಿ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ