ಶುಕ್ರವಾರ, ಜನವರಿ 5, 2024

ಜ.08ರಂದು ವಿವಿಧ ಜಯಂತಿಗಳ ಪೂರ್ವಭಾವಿ ಸಭೆ

ಬಳ್ಳಾರಿ,ಜ.05(ಕರ್ನಾಟಕ ವಾರ್ತೆ): ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಜ.15 ರಂದು ಶಿವಯೋಗಿ ಸಿದ್ದರಾಮೇಶ್ವರ ಜಯಂತಿ, ಜ.19 ರಂದು ಮಹಾಯೋಗಿ ವೇಮನ ಜಯಂತಿ ಹಾಗೂ ಜ.21 ರಂದು ಶ್ರೀ ಅಂಬಿಗರ ಚೌಡಯ್ಯ ಜಯಂತಿ ಆಚರಣೆ ಕುರಿತಂತೆ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರ ಅಧ್ಯಕ್ಷತೆಯಲ್ಲಿ ಜ.08 ರಂದು ಸಂಜೆ 04 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ನಾಗರಾಜ ಅವರು ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ