ಬುಧವಾರ, ಜನವರಿ 3, 2024
ಲೋಕಾಯುಕ್ತರಿಂದ ಸಾರ್ವಜನಿಕರ ಕುಂದುಕೊರತೆಗಳ ಅಹವಾಲು ಸ್ವೀಕಾರ/ಜನ ಸಂಪರ್ಕ ಸಭೆ ಜ.09ರಿಂದ
ಬಳ್ಳಾರಿ,ಜ.03(ಕರ್ನಾಟಕ ವಾರ್ತೆ):
ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೆÇಲೀಸ್ ಅಧೀಕ್ಷಕರಾದ ಸಿದ್ಧರಾಜು.ಸಿ ಅವರ ಮಾರ್ಗದರ್ಶನದಲ್ಲಿ ಪೆÇಲೀಸ್ ನಿರೀಕ್ಷಕರಾದ ಸಂಗಮೇಶ್, ಮಹಮ್ಮದ್ ರಫಿ ನೇತೃತ್ವದಲ್ಲಿ ಜನವರಿ ತಿಂಗಳಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು, ಕಂಪ್ಲಿ ಮತ್ತು ಸಿರುಗುಪ್ಪ ತಾಲೂಕು ಕೇಂದ್ರಗಳಲ್ಲಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ಜ.09ರಿಂದ 11 ರವರೆಗೆ ನಡೆಸಲಾಗುತ್ತಿದೆ.
ಜ.09 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಂಡೂರು ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ, ಜ.10 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಸಿರುಗುಪ್ಪ ಸಿಡಿಪಿಓ ಕಚೇರಿ ಸಭಾಂಗಣ ಮತ್ತು ಜ.11 ರಂದು ಬೆಳಿಗ್ಗೆ 11.30 ರಿಂದ ಮಧ್ಯಾಹ್ನ 02 ರವರೆಗೆ ಕಂಪ್ಲಿ ತಹಶೀಲ್ದಾರರ ಕಚೇರಿ ಸಭಾಂಗಣದಲ್ಲಿ ಕುಂದುಕೊರತೆಗಳ ಅಹವಾಲುಗಳ ಸ್ವೀಕಾರ/ಜನ ಸಂಪರ್ಕ ಸಭೆ ನಡೆಯಲಿದೆ.
ಕುಂದು ಕೊರತೆಗಳಿರುವ ಸಾರ್ವಜನಿಕರು ನಿಗದಿತ ದಿನ ಮತ್ತು ಸ್ಥಳದಲ್ಲಿ ತಮ್ಮ ದೂರು ಅರ್ಜಿಗಳನ್ನು ನೀಡಬಹುದು. ಕುಂದುಕೊರತೆಗಳ ಅಹವಾಲುಗಳ ಅರ್ಜಿಗಳನ್ನು ಸ್ವೀಕರಿಸಿ, ವಿಚಾರಿಸಲಾಗುತ್ತದೆ. ಕರ್ನಾಟಕ ಲೋಕಾಯುಕ್ತ ಬೆಂಗಳೂರು ವಿಭಾಗ ಲೋಕಾಯುಕ್ತರಿಗೆ ಅರ್ಜಿ ಸಲ್ಲಿಸಲು ನಮೂನೆ/ಫಾರಂ ನಂ:01 ಮತ್ತು 02 ಗಳನ್ನು ನೀಡಲಾಗುವುದು ಎಂದು ಕರ್ನಾಟಕ ಲೋಕಾಯುಕ್ತ ಬಳ್ಳಾರಿ ವಿಭಾಗದ ಪೆÇಲೀಸ್ ಅಧೀಕ್ಷಕರಾದ ಸಿದ್ಧರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ