ಶುಕ್ರವಾರ, ಜನವರಿ 12, 2024

ಉಚಿತ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮ: ಆಸಕ್ತರಿಂದ ಅರ್ಜಿ ಆಹ್ವಾನ

ಬಳ್ಳಾರಿ,ಜ.12(ಕರ್ನಾಟಕ ವಾರ್ತೆ): ಕೌಶಲ್ಯಾಭಿವೃದ್ಧಿ ಉದ್ಯಮಶೀ¯ತೆ ಮತ್ತು ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಕರ್ನಾಟಕ ಉದ್ಯಮಶೀಲತಾ ಅಭಿವೃದ್ಧಿ ಕೇಂದ್ರ(ಸಿಡಾಕ್) ವತಿಯಿಂದ ಸ್ವಂತ ಉದ್ಯೋಗ ಆರಂಭಿಸಲು ಇಚ್ಚಿಸುವವರಿಗಾಗಿ 10 ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಜನವರಿ ಕೊನೆಯ ವಾರದಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಜಿಲ್ಲಾ ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಜಂಟಿ ನಿರ್ದೇಶಕ ಸೋಮಶೇಖರ ಅವರು ತಿಳಿಸಿದ್ದಾರೆ. ತರಬೇತಿಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಅನುಸರಿಸಬೇಕಾದ ಕ್ರಮಗಳು, ಸರ್ಕಾರದ ಸ್ವಂತ ಉದ್ಯೋಗ ಯೋಜನೆಗಳು, ಬ್ಯಾಂಕಿನ ವ್ಯವಹಾರ, ಮಾರುಕಟ್ಟೆ ಸಮೀಕ್ಷೆ, ಯೋಜನಾ ವರದಿ ತಯಾರಿಕೆ ಹಾಗೂ ಉದ್ಯಮ ನಿರ್ವಹಣೆ ಇತ್ಯಾದಿ ವಿಷಯಗಳ ಕುರಿತು ತರಬೇತಿಯನ್ನು ನೀಡಲಾಗುತ್ತದೆ. ಜಿಲ್ಲೆಯ ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅಭ್ಯರ್ಥಿಗಳು 18 ವರ್ಷ ದಿಂದ 45 ವರ್ಷ ವಯಸ್ಸಿನವರಾಗಿರಬೇಕು ಹಾಗೂ ಓದಲು, ಬರೆಯಲು ಬರುತ್ತಿರಬೇಕು. ಮಹಿಳೆಯರಿಗೆ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ ವರ್ಗದವರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ಸಲ್ಲಿಸಲು ಜ.25 ಕೊನೆಯ ದಿನವಾಗಿದೆ. ಅರ್ಜಿಗಳನ್ನು ಜಿಲ್ಲಾ ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯಲ್ಲಿ ಪಡೆಯಬಹುದು ಅಥವಾ ದೂರವಾಣಿ ಸಂಖ್ಯೆಯ ಮೂಲಕ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಕೈಗಾರಿಕಾ ಕೇಂದ್ರದ ಕಚೇರಿ ಕಟ್ಟಡದ ಜಿಲ್ಲಾ ಕೈಗಾರಿಕಾ ಮತ್ತು ತರಬೇತಿ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿ ಅಥವಾ ಮೊ.7483538942, 9449226221 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ