ಬುಧವಾರ, ಜನವರಿ 10, 2024
ಜ.11 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.10(ಕರ್ನಾಟಕ ವಾರ್ತೆ):
ನಗರದ ಜೆಸ್ಕಾಂ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದಲ್ಲಿ ವಿದ್ಯುತ್ ಪರಿವರ್ತಕದ ನಿರ್ವಹಣೆ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದÀ ಜ.11 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-6 ಫೀಡರ್‍ನ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಭಾವಿ.
ಎಫ್-10 ಫೀಡರ್‍ನ ಅಶೋಕ ನಗರ, ಹಾವಂಭಾವಿ, ಟಿ.ಎಂ.ಜಿ ಲೇಔಟ್, ರಾಮನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ ಹಾಗೂ ಹೊಸ ಕೋರ್ಟ್ ಸಂಕೀರ್ಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ