ಗುರುವಾರ, ಜನವರಿ 4, 2024
ಬಳ್ಳಾರಿ ಮಹಾನಗರ ಪಾಲಿಕೆ: ಮುಂಗಡ ಆಯ-ವ್ಯಯ ಪತ್ರದ ತಯಾರಿಕೆಯ ಸಾರ್ವಜನಿಕ ಸಮಾಲೋಚನಾ ಸಭೆ ಜ.12 ರಂದು
ಬಳ್ಳಾರಿ,ಜ.04(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆಯ 2024-2025ನೇ ಸಾಲಿನ ಮುಂಗಡ ಆಯ-ವ್ಯಯ ಪತ್ರದ ತಯಾರಿಕೆಯ ಕುರಿತು ಉಪ ಮಹಾಪೌರರು, ಪಾಲಿಕೆ ಆಯುಕ್ತರ ಅಧ್ಯಕ್ಷತೆಯಲ್ಲಿ ಜ.12 ರಂದು ಮಧ್ಯಾಹ್ನ 03.30 ಗಂಟೆಗೆ ಪಾಲಿಕೆಯ ಶ್ರೀ ಕೃಷ್ಣದೇವರಾಯ ಕೌನ್ಸಿಲ್ ಸಭಾಂಗಣದಲ್ಲಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತ ಜಿ.ಖಲೀಲ್‍ಸಾಬ್ ಅವರು ತಿಳಿಸಿದ್ದಾರೆ.
ನಾಗರಿಕರು, ಸಂಪನ್ಮೂಲ ವ್ಯಕ್ತಿಗಳು, ನೋಂದಾಯಿತ ವಸತಿ ಕ್ಷೇಮಾಭಿವೃದ್ಧಿ ಸಂಘಗಳು, ನೋಂದಾಯಿತ ಸರ್ಕಾರೇತರ ಸಂಘ-ಸಂಸ್ಥೆಗಳು, ವಾಣಿಜ್ಯ ಮತ್ತು ಕೈಗಾರಿಕಾ ಸಂಘ/ಸಂಸ್ಥೆಗಳ ಪ್ರತಿನಿಧಿಗಳು ಭಾಗವಹಿಸಿ, ನಗರದ ಸರ್ವತೋಮುಖ ಅಭಿವೃದ್ಧಿ ಕುರಿತಂತೆ ತಮ್ಮ ಅಭಿಪ್ರಾಯ, ಸಲಹೆ-ಸೂಚನೆ ನೀಡಬಹುದು.
ಸಭೆಯು ಸಾಮಾನ್ಯ ಸಾರ್ವಜನಿಕ ಕುಂದು ಕೊರತೆ ಸಭೆಯಾಗಿರುವುದಿಲ್ಲ, ಬದಲಾಗಿ 2024-25ನೇ ಸಾಲಿಗೆ ನಗರದ ಅಭಿವೃದ್ಧಿಗೆ ಪೂರಕವಾಗಿ ಆಯ-ವ್ಯಯದಲ್ಲಿ ಅಳವಡಿಸಿಕೊಳ್ಳಬೇಕಾದ ಕಾರ್ಯಸೂಚಿಯನ್ನು ತಯಾರಿಸುವ ಸಭೆಯಾಗಿದ್ದು, ಸಾರ್ವಜನಿಕರು ನವೀನ, ಅಭಿವೃದ್ಧಿ ಮಾದರಿ, ಸಂಪನ್ಮೂಲ ಕ್ರೋಢಿಕರಣ, ಅಳವಡಿಸಿಕೊಳ್ಳುವ ಬಗ್ಗೆ ಸಲಹೆ ಸೂಚನೆ ಮಾತ್ರ ನೀಡಬಹುದಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ