ಶುಕ್ರವಾರ, ಜನವರಿ 12, 2024
ಜ.13 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಜ.12(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 110/11 ಕೆವಿ ಸೌತ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ಕಾರ್ಯದ ನಿಮಿತ್ತ ಮತ್ತು ದುರಸ್ಥಿ/ ಕಬ್ಬಿಣದ ಕಂಬಗಳ ಬದಲಾವಣೆಯ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಜ.13 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಎಫ್-24 ಫೀಡರ್ ವ್ಯಾಪ್ತಿಯಲ್ಲಿ ಬರುವ ನಗರದ ಬಂಡಿಮೋಟ್, ಕುರಿಕಮೇಲ, ಎಪಿಎಂಸಿ, ಇಂದಿರಾ ನಗರ ಸಭಾಪತಿ ರಸ್ತೆ, ಬೆಂಗಳೂರು ರಸ್ತೆ, ಕಾರ್ಕಲ ತೋಟ, ಬಾಪೂಜಿ ನಗರ, ರಾಣಿತೋಟ ಸೇರಿದಂತೆ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ