ಗುರುವಾರ, ಜನವರಿ 11, 2024
ಜ.15 ರಂದು ಶಿವಯೋಗಿ ಶ್ರೀ ಸಿದ್ಧರಾಮೇಶ್ವರ 852ನೇ ಜಯಂತ್ಯೋತ್ಸವ
ಬಳ್ಳಾರಿ,ಜ.11(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ಶಿವಯೋಗಿ ಶ್ರೀ ಸಿದ್ಧರಾಮೇಶ್ವರ 852ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜ.15 ರಂದು ಬೆಳಿಗ್ಗೆ 11 ಗಂಟೆಗೆ ಡಾ.ರಾಜ್‍ಕುಮಾರ್ ರಸ್ತೆಯ ರಾಘವ ಕಲಾಮಂದಿರದಲ್ಲಿ ಏರ್ಪಡಿಸಲಾಗಿದೆ.
ಯುವಜನ ಸಬಲೀಕರಣ, ಕ್ರೀಡಾ ಹಾಗೂ ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅವರು ಅಧ್ಯಕ್ಷತೆ ವಹಿಸುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ಶಾಸಕರಾದ ಈ.ತುಕಾರಾಂ, ಜೆ.ಎನ್.ಗಣೇಶ್, ಬಿ.ಎಂ.ನಾಗರಾಜ್, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ್ ಬಿ.ಪಾಟೀಲ್, ಶಶೀಲ್ ಜಿ.ನಮೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತಾ ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷ ಡಾ.ನಿಷ್ಠಿರುದ್ರಪ್ಪ ಅವರು ಜಯಂತ್ಯೋತ್ಸವ ಕುರಿತು ವಿಶೇಷ ಉಪನ್ಯಾಸ ನೀಡುವರು.
ಕವಿತಾ ಗಂಗೂರು ಅವರಿಂದ ಸುಗಮ ಸಂಗೀತ ಕಾರ್ಯಕ್ರಮ ಇರಲಿದೆ.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್., ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಉಪಸ್ಥಿತರಿರಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
ಮೆರವಣಿಗೆ: ಜಯಂತ್ಯೋತ್ಸವದ ಮೆರವಣಿಗೆಯು ಕನಕದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ರಾಘವ ಕಲಾಮಂದಿರವರೆಗೆ ನಡೆಯಲಿದೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)


ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ