ಗುರುವಾರ, ಜನವರಿ 18, 2024
ಜ.20 ರಂದು ವಿದ್ಯುತ್ ಗ್ರಾಹಕರ ಸಂವಾದ ಸಭೆ
ಬಳ್ಳಾರಿ,ಜ.18(ಕರ್ನಾಟಕ ವಾರ್ತೆ):
ಕಾರ್ಯ ಮತ್ತು ಪಾಲನಾ ಎಮ್ಮಿಗನೂರು ಶಾಖೆ ವ್ಯಾಪ್ತಿಯ ಬರುವ ಎಲ್ಲಾ ವಿದ್ಯುತ್ ಗ್ರಾಹಕರಿಗೆ ವಿದ್ಯುತ್ ಸಂಬಂಧಿಸಿದ ಸಮಸ್ಯೆಗಳನ್ನು ಬಗೆಹರಿಸಲು ಜ.20 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1.30 ರ ವರೆಗೆ ವಿದ್ಯುತ್ ಗ್ರಾಹಕರ ಸಂವಾದ ಸಭೆಯನ್ನು ಎಮ್ಮಿಗನೂರು ಗ್ರಾಮದ ಗ್ರಾಮಪಂಚಾಯಿತಿ ಆವರಣದಲ್ಲಿ ಆಯೋಜಿಸಲಾಗಿದೆ. ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಬಳ್ಳಾರಿ ಗ್ರಾಮೀಣ ಜೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಮೋಹನಬಾಬು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ