ಶುಕ್ರವಾರ, ಜನವರಿ 19, 2024

‘ಒಂದು ದಿನದ ಪುನಶ್ಚೇತನ ತರಬೇತಿ’ ಶಿಬಿರ ಜ.21 ರಂದು

ಬಳ್ಳಾರಿ,ಜ.19(ಕರ್ನಾಟಕ ವಾರ್ತೆ): ಕರ್ನಾಟಕ ಮಧ್ಯಸ್ಥಿಕೆ ಕೇಂದ್ರ, ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ, ಬೆಂಗಳೂರು ಮಧ್ಯಸ್ಥಿಕೆ ಕೇಂದ್ರ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಬಳ್ಳಾರಿ ಇವರ ಸಂಯುಕ್ತಾಶ್ರಯದಲ್ಲಿ ಬಳ್ಳಾರಿ, ಕೊಪ್ಪಳ ಮತ್ತು ರಾಯಚೂರು ಜಿಲ್ಲೆಯ ನ್ಯಾಯಾಧೀಶರಿಗೆ ‘ಒಂದು ದಿನದ ಪುನಶ್ಚೇತನ ತರಬೇತಿ’ ಶಿಬಿರವನ್ನು ಜ.21 ರಂದು ಬೆಳಿಗ್ಗೆ 09.30 ಕ್ಕೆ ನಗರದ ತಾಳೂರು ರಸ್ತೆಯ ಹೊಸ ನ್ಯಾಯಾಲಯದ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಶಿಬಿರ ಉದ್ಘಾಟನೆ ಮಾಡುವರು. ರಾಯಚೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಾರುತಿ ಬಗಾಡೆ, ಕೊಪ್ಪಳ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಸಿ.ಚಂದ್ರಶೇಖರ್, ಬೆಂಗಳೂರು ಮಧ್ಯಸ್ಥಿಕೆ ಕೇಂದ್ರದ ತರಬೇತಿದಾರರಾದ ಸುಧಾ.ಎಸ್.ಎನ್., ವೈಶಾಲಿ ಹೆಗಡೆ ಅವರು ಉಪಸ್ಥಿತರಿರುವರು. ವಕೀಲರಾದ ತ್ರೀವೇಣಿ ಪತ್ತಾರ್ ಅವರು ನಿರೂಪಣೆ ಮಾಡುವರು ಎಂದು ಪ್ರಕಟಣೆ ತಿಳಿಸಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ