ಶನಿವಾರ, ಜನವರಿ 20, 2024

ಅಲ್ಲಿಪುರ ವಿದ್ಯುತ್ ವಿತರಣಾ ಕೇಂದ್ರ: ಜ.21 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಜ.20(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪವಿಭಾಗ-1 ರ ವ್ಯಾಪ್ತಿಗೆ ಬರುವ 220/11ಕೆವಿ ಅಲ್ಲಿಪುರ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಬ್ಯಾಂಕ್-2ನ ಎಫ್-34 ಫೀಡರ್‍ನ ವಿದ್ಯುತ್ ಸಂಪರ್ಕವು ಅಲ್ಲಿಪುರ ಮಹಾದೇವ ತಾತನವರ ಜಾತ್ರೆಯ ಪ್ರಯುಕ್ತ ಜ.21 ರಂದು ಮಧ್ಯಾಹ್ನ 3 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ವಡ್ಡೆ ನಾಗಪ್ಪ ಲೇಔಟ್, ಮೊಹಮ್ಮದಿಯಾ ಸ್ಕೂಲ್, ರೇಡಿಯೋ ಪಾರ್ಕ್, ಕೌಲ್ ಬಜಾರ್, ನಲಾ ಸ್ಟ್ರೀಟ್, ಪೊಲೀಸ್ ಸ್ಟೇಷನ್, ಉರ್ದು ಟ್ರೈನಿಂಗ್ ಸ್ಕೂಲ್ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ಮತ್ತು ವಿದ್ಯುತ್ ಗ್ರಾಹಕರು ಸಹಕರಿಸಬೇಕು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ