ಬುಧವಾರ, ಜನವರಿ 17, 2024

*ಜ.22 ರಂದು ನಿಜಶರಣ ಶ್ರೀ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ*

ಬಳ್ಳಾರಿ,ಜ.17(ಕರ್ನಾಟಕ ವಾರ್ತೆ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ ನಿಜಶರÀಣ ಶ್ರೀ ಅಂಬಿಗರ ಚೌಡಯ್ಯ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜ.22 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿಡಿಎಎ ಫುಟ್‍ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ. ಯುವ ಸಬಲೀಕರಣ, ಕ್ರೀಡಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಕಾರ್ಯಕ್ರಮ ಉದ್ಘಾಟನೆ ಮಾಡುವರು. ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ ಅಧ್ಯಕ್ಷತೆ ವಹಿಸುವರು. ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಸಭಾ ಶಾಸಕರಾದ ಈ.ತುಕರಾಂ, ಬಿ.ಎಂ.ನಾಗರಾಜ, ಜೆ.ಎನ್.ಗಣೇಶ್, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನವಜೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತ ಅವರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು. ಲೇಖಕರಾದ ತಿಪ್ಪೇಸ್ವಾಮಿ ಸಂಡೂರು ಅವರು ಜಯಂತ್ಯೋತ್ಸವ ಕುರಿತು ವಿಶೇಷ ಉಪನ್ಯಾಸ ನೀಡುವರು. ಕಾರ್ಯಕ್ರಮದಲ್ಲಿ ಎಂ.ನಾಗಭೂಷಣ ಬಾಪುರೆ ಅವರು ವಚನ ಗಾಯನ ನಡೆಸಿಕೊಡುವರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಟಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್.ಎನ್, ಮಹಾನಗರ ಪಾಲಿಕೆಯ ಆಯುಕ್ತ ಜಿ. ಖಲೀಲ್‍ಸಾಬ್, ಕನ್ನಡ ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ. ನಾಗರಾಜ ಉಪಸ್ಥಿತರಿರುವರು. ಜಂಯಂತ್ಯೋತ್ಸವದ ಮೆರವಣಿಗೆಯು ಅಂದು ಬೆಳಿಗ್ಗೆ 09.30 ಕ್ಕೆ ನಗರದ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾಗಿ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಬಿ.ಡಿ.ಎ.ಎ ಫುಟ್‍ಬಾಲ್ ಮೈದಾನ ಸಭಾಂಗಣದವರೆಗೆ ಜರುಗಲಿದೆ ಎಂದು ಪ್ರಕಟಣೆ ತಿಳಿಸಿದೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ