ಮಂಗಳವಾರ, ಜನವರಿ 2, 2024
ಕಕರಸಾ ನಿಗಮ ಬಳ್ಳಾರಿ ವಿಭಾಗ: 24*7 ಸಹಾಯವಾಣಿ ಕೇಂದ್ರ ಪ್ರಾರಂಭ
ಬಳ್ಳಾರಿ,ಜ.02(ಕರ್ನಾಟಕ ವಾರ್ತೆ):
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವ್ಯಾಪ್ತಿಯಲ್ಲಿ ಸಾರಿಗೆ ಸೌಲಭ್ಯಕ್ಕೆ ಸಂಬಂಧಿಸಿದಂತೆ ಸಲಹೆ ಹಾಗೂ ಕುಂದುಕೊರತೆಗಳನ್ನು ಸ್ವೀಕರಿಸಿ, ತ್ವರಿತವಾಗಿ ಸ್ಪಂದಿಸಲು ಅನುಕೂಲವಾಗುವ ದೃಷ್ಠಿಯಿಂದ 24*7 ಸಹಾಯವಾಣಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ.
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗವು ಸಾರ್ವಜನಿಕ ಪ್ರಯಾಣಿಕರಿಗೆ ಸುಗಮ ಹಾಗೂ ಸುವ್ಯವಸ್ಥಿತವಾದ ಸಾರಿಗೆ ಸೌಕರ್ಯವನ್ನು ಒದಗಿಸುವ ಧ್ಯೇಯ ಹೊಂದಿದೆ.
ಸಾರ್ವಜನಿಕರು ತಮ್ಮ ಸಲಹೆ, ಕುಂದುಕೊರತೆಗಳಿದ್ದಲ್ಲಿ ಸಹಾಯವಾಣಿ ಸಂಖ್ಯೆ 6366423885 ಗೆ ಕರೆ ಮಾಡಬಹುದು ಎಂದು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಬಳ್ಳಾರಿ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಇನಾಯತ್ ಬಾಗ್‍ಬಾನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ