ಸೋಮವಾರ, ಜನವರಿ 22, 2024

ಜ.24 ರಂದು “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ”

ಬಳ್ಳಾರಿ,ಜ.22(ಕರ್ನಾಟಕ ವಾರ್ತೆ): ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ “ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ” ಅಂಗವಾಗಿ ಜ.24 ರಂದು ಸಂಜೆ 06 ಗಂಟೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಚೇರಿ ಆವರಣದಲ್ಲಿ ಪಿಂಕ್ ಲೈಟಿಂಗ್ (ಓighಣ) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ. ಬೆಂಗಳೂರು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯದ ನಿರ್ದೇಶಕರು ಇವರ ಸೂಚನೆಯಂತೆ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ತಾಲೂಕು ಆಸ್ಪತ್ರೆ ಮತ್ತು ಜಿಲ್ಲಾ ಆಸ್ಪತ್ರೆಗಳಲ್ಲಿ ಆಯಾ ದಿನದಂದು ಹೆಣ್ಣು ಮಗು ಜನನವಾಗಿರುವ ತಾಯಂದಿರಿಗೆ ಸಿಹಿ ಹಂಚುವುದರ ಮೂಲಕ ಅಥವಾ ಹಣ್ಣು ಹಂಪಲುಗಳನ್ನು ವಿತರಿಸುವ ಮೂಲಕ ಅಥವಾ ಬಹುಮಾನದ ಮೂಲಕ ಆಚರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ