ಮಂಗಳವಾರ, ಜನವರಿ 23, 2024
ಜ.24ರಂದು ‘ಹೆಣ್ಣು ಮಗುವಿನ ಜನ್ಮೋತ್ಸವ’ ಕಾರ್ಯಕ್ರಮ
ಬಳ್ಳಾರಿ,ಜ.23(ಕರ್ನಾಟಕ ವಾರ್ತೆ):
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಸಾರ್ವಜನಿಕ ಶಿಕ್ಷಣ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಆಸ್ಪತ್ರೆ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಬೇಟಿ ಬಚಾವೋ ಬೇಟಿ ಪಡಾವೋ ಅಭಿಯಾನ 2023-24 ದಡಿ “ಹೆಣ್ಣು ಮಗುವಿನ ಜನ್ಮೋತ್ಸವ” ಕಾರ್ಯಕ್ರಮ ಜ.24ರಂದು ಮಧ್ಯಾಹ್ನ 1 ಗಂಟೆಗೆ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಮಹಾನಗರ ಪಾಲಿಕೆ ಅಯುಕ್ತ ಜಿ.ಖಲೀಲ್ ಸಾಬ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್‍ಬಾಬು, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಬಸರೆಡ್ಡಿ, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಉಮಾದೇವಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಾಮಕೃಷ್ಣ ನಾಯಕ ಸೇರಿದಂತೆ ಇತರರು ಉಪಸ್ಥಿತರಿರುತ್ತಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವಿಜಯ್‍ಕುಮಾರ್ ಕೆ.ಹೆಚ್ ಅವರು ತಿಳಿಸಿದ್ದಾರೆ.
---------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ