ಸೋಮವಾರ, ಜನವರಿ 22, 2024
ಸ್ಪರ್ಶ ಕುಷ್ಟರೋಗ ಜಾಗೃತಿ ಅಭಿಯಾನ; ಜ.24 ರಂದು ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆ
ಬಳ್ಳಾರಿ,ಜ.22(ಕರ್ನಾಟಕ ವಾರ್ತೆ):
ಕುಷ್ಟರೋಗ ನಿರ್ಮೂಲನೆಯ ಅಂಗವಾಗಿ ಜ.30 ರಿಂದ ಫೆ.13 ರವರೆಗೆ ಸ್ಪರ್ಶ ಕುಷ್ಟರೋಗ ಜಾಗೃತಿ ಅಭಿಯಾನವನ್ನು ರಾಷ್ಟ್ರಾದ್ಯಾಂತ ಹಮ್ಮಿಕೊಳ್ಳಲಾಗಿದೆ.
ಜಿಲ್ಲೆಯಲ್ಲಿ ಸ್ಪರ್ಶ ಕುಷ್ಟರೋಗ ಜಾಗೃತಿ ಅಭಿಯಾನವನ್ನು ಯಶಸ್ವಿಗೊಳಿಸಲು ಪೂರ್ವ ಭಾವಿಯಾಗಿ ಜಿಲ್ಲಾಧಿಕಾರಿ ಅವರು ಮತ್ತು ಅಪರ ಜಿಲ್ಲಾಧಿಕಾರಿಯವರ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಸಭೆಯನ್ನು ಜ.24 ರಂದು ಬೆಳಿಗ್ಗೆ 11.30 ಕ್ಕೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ವೈ.ರಮೇಶ್ ಬಾಬು ಅವರು ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ