ಬುಧವಾರ, ಜನವರಿ 24, 2024
ಜ.25ರಂದು ರಾಷ್ಟ್ರೀಯ ಮತದಾರರ ದಿನಾಚರಣೆ
ಬಳ್ಳಾರಿ,ಜ.24(ಕರ್ನಾಟಕ ವಾರ್ತೆ):
ಭಾರತ ಚುನಾವಣಾ ಆಯೋಗ, ಜಿಲ್ಲಾ ಚುನಾವಣಾಧಿಕಾರಿಗಳ ಕಾರ್ಯಾಲಯ, ಹಾಗೂ ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ “ಮತದಾನಕ್ಕಿಂತ ಇನ್ನೊಂದಿಲ್ಲ ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಘೋಷವಾಕ್ಯದಡಿ ರಾಷ್ಟೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಜ.25ರಂದು ಬೆಳಿಗ್ಗೆ 10.15 ಗಂಟೆಗೆ ನಗರದ ಡಾ.ರಾಜ್‍ಕುಮಾರ್ ರಸ್ತೆಯ ಬಿ.ಡಿ.ಎ.ಎ ಫುಟ್‍ಬಾಲ್ ಮೈದಾನದ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಕಾರ್ಯಕ್ರಮ ಉದ್ಘಾಟಿಸುವರು.
ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಅಧ್ಯಕ್ಷತೆ ವಹಿಸುವರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರಾಜೇಶ್ ಎನ್.ಹೊಸಮನಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಹೇಮಂತ್.ಎನ್, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್ ಸಾಬ್ ಸೇರಿದಂತೆ ಇತರರು ಭಾಗವಹಿಸುವರು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿದೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ