ಗುರುವಾರ, ಜನವರಿ 25, 2024
ಜ.26 ರಂದು “ಸಂವಿಧಾನ ಜಾಗೃತಿ ಜಾಥಾ”ಗೆ ಚಾಲನೆ
ಬಳ್ಳಾರಿ,ಜ.25(ಕರ್ನಾಟಕ ವಾರ್ತೆ):
ಭಾರತದ ಸಂವಿಧಾನವನ್ನು ಅಂಗೀಕರಿಸಿಕೊಂಡ 75ನೇ ವರ್ಷದ ಆಚರಣೆಯ ಪ್ರಯುಕ್ತ ಸಂವಿಧಾನದ ಆಶಯ ಮತ್ತು ಮೌಲ್ಯಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ರಾಜ್ಯ ಸರ್ಕಾರದ ವತಿಯಿಂದ “ಸಂವಿಧಾನ ಜಾಗೃತಿ ಜಾಥಾ” ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಜ.26 ರಂದು ವಿಮ್ಸ್ ಮೈದಾನದಲ್ಲಿ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧಚಿತ್ರ ಮೆರವಣಿಗೆ ಕಾರ್ಯಕ್ರಮಕ್ಕೆ ಪರಿಶಿಷ್ಟ ಪಂಗಡ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ ಅವರು, ಸಂಸದರು, ವಿಧಾನಸಭೆ ಶಾಸಕರು ಮತ್ತು ವಿಧಾನ ಪರಿಷತ್ತಿನ ಸದಸ್ಯರುಗಳು ಹಾಗೂ ಜನಪ್ರತಿನಿಧಿಗಳು ಚಾಲನೆ ನೀಡುವರು.
ಈ ಸ್ತಬ್ದಚಿತ್ರವು ಜ.26 ರಿಂದ ಫೆ.23 ರ ವರೆಗೆ ಜಿಲ್ಲೆಯಾದ್ಯಂತ ಸಂಚರಿಸಲಿದೆ.
ಜ.26 ರಿಂದ ಫೆ.02 ರವರೆಗೆ ಬಳ್ಳಾರಿ ತಾಲ್ಲೂಕಿನಲ್ಲಿ, ಫೆ.02 ರಿಂದ 09 ರ ವರೆಗೆ ಸಿರುಗುಪ್ಪ ತಾಲ್ಲೂಕಿನಲ್ಲಿ, ಫೆ.10 ರಿಂದ 13 ರವರೆಗೆ ಕುರುಗೋಡು ತಾಲ್ಲೂಕಿನಲ್ಲಿ, ಫೆ.13 ರಿಂದ 16 ರವರೆಗೆ ಕಂಪ್ಲಿ ತಾಲ್ಲೂಕಿನಲ್ಲಿ ಹಾಗೂ ಫೆ.16 ರಿಂದ 23 ರ ವರೆಗೆ ಸಂಡೂರು ತಾಲ್ಲೂಕಿನಲ್ಲಿ ಎಲ್ಲಾ ಗ್ರಾಮ ಪಂಚಾಯಿತಿ, ಪಟ್ಟಣ ಪಂಚಾಯಿತಿ, ಪುರಸಭೆ, ನಗರಸಭೆ ಹಾಗು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಂಚರಿಸಲಿದ್ದು, ಜನಪ್ರತಿನಿಧಿಗಳು, ಸಂಘ ಸಂಘ ಸಂಸ್ಥೆಗಳ ಮುಖಂಡರು, ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರ ಆಪ್ತ ಕಾರ್ಯದರ್ಶಿ ದೇವೆಂದ್ರಪ್ಪ.ಬಿ ಅವರು ಕೋರಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ