ಮಂಗಳವಾರ, ಜನವರಿ 23, 2024
75ನೇ ಗಣರಾಜ್ಯೋತ್ಸವ ದಿನಾಚರಣೆ ಜ.26 ರಂದು
ಬಳ್ಳಾರಿ,ಜ.23(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದಿಂದ 75ನೇ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮವನ್ನು ಜ.26 ರಂದು ಬೆಳಿಗ್ಗೆ 09 ಗಂಟೆಗೆ ವಿಮ್ಸ್ ಮೈದಾನದಲ್ಲಿ ಏರ್ಪಡಿಸಲಾಗಿದೆ ಎಂದು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ತಿಳಿಸಿದ್ದಾರೆ.
ಯುವ ಸಬಲೀಕರಣ, ಕ್ರೀಡಾ ಮತ್ತು ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವ ಹಾಗು ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಬೆಳಿಗ್ಗೆ 09 ಗಂಟೆಗೆ ಧ್ವಜಾರೋಹಣ ನೆರವೇರಿಸುವರು.
ಇದಕ್ಕೂ ಮುನ್ನ ಸಚಿವರು, ಅಂದು ಬೆಳಿಗ್ಗೆ 08.15 ಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಪ್ರತಿಮೆಗೆ ಗೌರವ ಸಮರ್ಪಣೆ ಮಾಡುವರು. ಬೆಳಿಗ್ಗೆ 09.05 ಕ್ಕೆ ಪಥ ಸಂಚಲನ ವೀಕ್ಷಣೆ ಮಾಡಿ ಗೌರವ ವಂದನೆ ಸ್ವೀಕಾರ ಮಾಡುವರು. ನಂತರ ಗಣರಾಜ್ಯೋತ್ಸವದ ಸಂದೇಶ ನೀಡುವರು.
ಸಂಸದರಾದ ವೈ.ದೇವೇಂದ್ರಪ್ಪ, ಕರಡಿ ಸಂಗಣ್ಣ, ಡಾ.ಸೈಯದ್ ನಾಸೀರ್ ಹುಸೇನ್, ವಿಧಾನಸಭಾ ಶಾಸಕರಾದ ಈ.ತುಕರಾಂ, ಬಿ.ಎಂ.ನಾಗರಾಜ, ಜೆ.ಎನ್.ಗಣೇಶ್, ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ವಿಧಾನ ಪರಿಷತ್ ಶಾಸಕರಾದ ಡಾ.ಚಂದ್ರಶೇಖರ ಬಿ.ಪಾಟೀಲ, ಶಶೀಲ್ ಜಿ.ನವಜೋಶಿ, ವೈ.ಎಂ.ಸತೀಶ್, ಮಹಾನಗರ ಪಾಲಿಕೆಯ ಮಹಾಪೌರರಾದ ಬಿ.ಶ್ವೇತ ಅವರು ಸೇರಿದಂತೆ ಇತರರು ಮುಖ್ಯ ಅತಿಥಿಗಳಾಗಿ ಭಾಗವಹಿಸುವರು.
ಅಂದು, ಬೆಳಿಗ್ಗೆ 10 ಗಂಟೆಯಿಂದ ಶಾಲಾ ಮಕ್ಕಳಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಯಲಿವೆ. ಬಳಿಕ ಬೆಳಿಗ್ಗೆ 10.45 ಗಂಟೆಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ “ಸಂವಿಧಾನ ಜಾಗೃತಿ ಜಾಥಾ” ಚಾಲನೆಗೊಳ್ಳಲಿದೆ.
ಈ ಸಂದರ್ಭದಲ್ಲಿ ಬಳ್ಳಾರಿ ವಲಯ ಪೊಲೀಸ್ ಮಹಾನೀರಿಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪೆÇಲೀಸ್ ವರಿಷ್ಟಾಧಿಕಾರಿ ರಂಜಿತ್ ಕುಮಾರ್ ಬಂಡಾರು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ