ಶುಕ್ರವಾರ, ಜನವರಿ 26, 2024

ಕನ್ನಡ ಮತ್ತು ಸಂಸ್ಕøತಿ ಇಲಾಖೆ ಕಚೇರಿಯಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ

ಬಳ್ಳಾರಿ,ಜ.26(ಕರ್ನಾಟಕ ವಾರ್ತೆ): ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಕಚೇರಿ ಆವರಣದಲ್ಲಿ 75ನೇ ಗಣರಾಜ್ಯೋತ್ಸವ ದಿನ ಆಚರಣೆ ಮಾಡಲಾಯಿತು. ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು, ಮಹಾತ್ಮ ಗಾಂಧೀಜಿ ಹಾಗೂ ಭಾರತ ರತ್ನ ಡಾ.ಬಿ.ಆರ್.ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ, ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ 75ನೇ ಗಣರಾಜ್ಯೋತ್ಸವ ದಿನದ ಶುಭಾಷಯ ತಿಳಿಸಿದರು. ಈ ವೇಳೆ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಿಬ್ಬಂದಿ ವರ್ಗದವರು ಇದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ