ಶುಕ್ರವಾರ, ಜನವರಿ 26, 2024

ನೂತನ ಜಿಲ್ಲಾಡಳಿತ ಭವನದಲ್ಲಿ 75ನೇ ಗಣರಾಜ್ಯೋತ್ಸವ ದಿನ ಆಚರಣೆ

ಬಳ್ಳಾರಿ,ಜ.26(ಕರ್ನಾಟಕ ವಾರ್ತೆ): ನಗರದ ಡಾ.ರಾಜ್‍ಕುಮಾರ್ ರಸ್ತೆಯ ನೂತನ ಜಿಲ್ಲಾಡಳಿತ ಭವನದಲ್ಲಿ 75ನೇ ಗಣರಾಜ್ಯೋತ್ಸವ ದಿನಾಚರಣೆ ಆಚರಿಸಲಾಯಿತು. ಜಿಲ್ಲಾಧಿಕಾರಿ ಪ್ರಶಾಂತ್‍ಕುಮಾರ್ ಮಿಶ್ರಾ ಅವರು 75ನೇ ಗಣರಾಜ್ಯೋತ್ಸವ ದಿನ ಅಂಗವಾಗಿ ಧ್ವಜಾರೋಹಣಾ ನೆರವೇರಿಸಿದರು. ಈ ಸಂದರ್ಭದಲ್ಲಿ ಎಲ್ಲರಿಗೂ ಗಣರಾಜ್ಯೋತ್ಸವದ ದಿನಾಚರಣೆಯ ಶುಭಾಷಯ ತಿಳಿಸಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಜುಬೇರ್, ಸಹಾಯಕ ಆಯುಕ್ತರಾದ ಹೇಮಂತ್‍ಕುಮಾರ್, ಜಿಲ್ಲಾ ಖನಿಜ ಪ್ರತಿಷ್ಠಾನ ವಿಶೇಷ ಅಧಿಕಾರಿ ಪಿ.ಎಸ್.ಮಂಜುನಾಥ, ತಹಶೀಲ್ದಾರ ಗುರುರಾಜ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಹಾಗೂ ಇತರರು ಇದ್ದರು. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ