ಸೋಮವಾರ, ಜನವರಿ 1, 2024
ವ್ಯಕ್ತಿ ಕಾಣೆ
ಬಳ್ಳಾರಿ,ಜ.01(ಕರ್ನಾಟಕ ವಾರ್ತೆ):
ತಾಲ್ಲೂಕಿನ ಹೊಸ ಯರ್ರಗುಡಿ ಗ್ರಾಮದ ಈಶ್ವರ ಗುಡಿ ಹತ್ತಿರದ ವಾರ್ಡ್ ನಂ.2 ರ ನಿವಾಸಿ ಎ.ಸುರೇಶ ತಂದೆ ಎ.ದಾನೂರಪ್ಪ ಎನ್ನುವ 34 ವರ್ಷದ ವ್ಯಕ್ತಿಯು 2023ರ ಆ.29 ರಂದು ಬಸಾಪುರ ಗ್ರಾಮಕ್ಕೆ ಹೋಗಿ ತನ್ನ ಹೆಂಡತಿಯನ್ನು ಕರೆದುಕೊಂಡು ಬರುತ್ತೇನೆ ಎಂದು ಹೋದವನು ಮರಳಿ ಬಾರದೇ ಕಾಣೆಯಾಗಿರುವ ಕುರಿತು, ಮೋಕಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವ್ಯಕ್ತಿಯ ಚಹರೆ ಗುರುತು: ಎತ್ತರ 5.6 ಅಡಿ, ದುಂಡುಮುಖ, ಗೋಧಿ ಮೈಬಣ್ಣ, ಸಾಧಾರಣ ಮೈಕಟ್ಟು, ಕುರುಚಲು ಗಡ್ಡ ಬಿಟ್ಟಿದ್ದು, ಕನ್ನಡಕ ಧರಿಸಿರುತ್ತಾನೆ. ಕಾಣೆಯಾದ ಸಂದರ್ಭದಲ್ಲಿ ನೀಲಿ ಬಣ್ಣದ ಅಂಗಿ, ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ.
ಕನ್ನಡ ಮತ್ತು ತೆಲುಗು ಭಾಷೆ ಮಾತನಾಡುತ್ತಾನೆ.
ಮೇಲ್ಕಂಡ ವ್ಯಕ್ತಿಯ ಬಗ್ಗೆ ಸುಳಿವು ಸಿಕ್ಕಲ್ಲಿ ಬಳ್ಳಾರಿ ಎಸ್‍ಪಿ ಅವರ ದೂ.08392-258400, ಸಿರುಗುಪ್ಪ ಉಪವಿಭಾಗ ಡಿಎಸ್‍ಸಿ ಮೊ.9480803021, ಪಿ.ಡಿ.ಹಳ್ಳಿ ವೃತ್ತ ಸಿಪಿಐ ಮೊ.9480803031, ಮೋಕಾ ಪೊಲೀಸ್ ಠಾಣೆಯ ಪಿಎಸ್‍ಐ ಮೊ.9480803050 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)

ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ