ಶುಕ್ರವಾರ, ಜನವರಿ 12, 2024
ಪಡಿತರ ಚೀಟಿದಾರರು ಅನ್ಯಭಾಗ್ಯ ಯೋಜನೆಯ ಹಣ ಪಡೆಯಲು ದಾಖಲೆ ಪರಿಶೀಲಿಸಿಕೊಳ್ಳಿ
ಬಳ್ಳಾರಿ,ಜ.12(ಕರ್ನಾಟಕ ವಾರ್ತೆ):
ಸರ್ಕಾರದ ಮಹತ್ವಾಕಾಂಕ್ಷೆ ಯೋಜನೆಯಾದ ಅನ್ನಭಾಗ್ಯ ಯೋಜನೆಯಡಿ 5 ಕೆ.ಜಿ ಅಕ್ಕಿಯ ಬದಲು ರೂ.34 ರಂತೆ ನೇರ ನಗದು ಪಾವತಿಯಾಗದ ಫಲಾನುಭವಿಗಳು ಹಣ ಬರಲು ಪೂರಕ ಪರಿಶೀಲಿಸಿಕೊಳ್ಳಬೇಕು ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಾದ ಸಕೀನಾ ಅವರು ತಿಳಿಸಿದ್ದಾರೆ.
*ಫಲಾನುಭವಿಗಳು ಪರಿಶೀಲಿಸಬೇಕಾದ ದಾಖಲೆಗಳು:*
ಪಡಿತರ ಚೀಟಿದಾರರು ತಮ್ಮ ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರು ಮತ್ತು ಅವರ ಆಧಾರ್ ಕಾರ್ಡ್‍ನಲ್ಲಿ ಹೆಸರು ಸರಿಯಾಗಿದೆಯೇ ಪರೀಕ್ಷಿಸಿಕೊಳ್ಳಬೇಕು. ಇಲ್ಲವಾದಲ್ಲಿ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಿಬೇಕು. ಪಡಿತರ ಚೀಟಿಯಲ್ಲಿನ ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿರುವ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿರಬೇಕು ಹಾಗೂ ಬ್ಯಾಂಕ್ ಖಾತೆಗೆ ಇ-ಕೆವೈಸಿ ಮಾಡಿಸಬೇಕು.
ಬ್ಯಾಂಕ್ ಖಾತೆ ಸರಿಯಿಲ್ಲದಿದ್ದರೆ ಹೊಸದಾಗಿ ಅಂಚೆ ಕಚೇರಿಯಲ್ಲಿ (ಪೆÇೀಸ್ಟ್ ಆಫೀಸ್) ಹೊಸ ಐ.ಬಿ.ಪಿ.ಬಿ ಖಾತೆ ತೆರೆಯಬೇಕು. ಮೇಲ್ಕಂಡ ಎಲ್ಲಾ ಅಂಶಗಳು ಸರಿಯಾಗಿದ್ದಲ್ಲಿ ತಮ್ಮ ಖಾತೆಗೆ ಹಣ ಜಮೆಯಾಗಲಿದೆ. ಅರ್ಹರು ಈ ಯೋಜನೆಯ ಸದುಪಯೋಗ ಪಡಿಸಿಕೊಳ್ಳಬೇಕು.
ಹೆಚ್ಚಿನ ಮಾಹಿತಿಗಾಗಿ ಸಂಬಂಧಿಸಿದ ತಾಲ್ಲೂಕಿನ ಆಹಾರ ಇಲಾಖೆ ಹಾಗೂ ಆಹಾರ ನಾಗರಿಕ ಸರಬರಾಜು ಇಲಾಖೆಯ ಉಪ ನಿರ್ದೇಶಕರ ಕಚೇರಿ ಅಥವಾ ದೂ.08392-272557 ಗೆ ಸಂಪರ್ಕಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ