ಶುಕ್ರವಾರ, ಜನವರಿ 12, 2024

ಯುಜಿ, ನೀಟ್ ಹಾಗೂ ನಾಟಾ ಪರೀಕ್ಷೆಗಳಿಗೆ ಒಂದೇ ಅರ್ಜಿ: ಟಿ.ಪಾಲಾಕ್ಷ

ಬಳ್ಳಾರಿ,ಜ.12(ಕರ್ನಾಟಕ ವಾರ್ತೆ): ಪ್ರಸ್ತುತ ವರ್ಷದಲ್ಲಿ ಸಿಇಟಿ-2024 ರ ಯುಜಿ, ನೀಟ್ ಹಾಗೂ ನಾಟಾ ಪರೀಕ್ಷೆಗಳಿಗೆ ಆನ್‍ಲೈನ್ ಮೂಲಕ ಒಂದೇ ಅರ್ಜಿಯನ್ನು ಸಲ್ಲಿಸಬೇಕು ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಟಿ.ಪಾಲಾಕ್ಷ ಅವರು ವಿದ್ಯಾರ್ಥಿಗಳಿಗೆ ತಿಳಿಸಿದರು. ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಗರದ ಡಾ.ರಾಜ್ ಕುಮಾರ್ ರಸ್ತೆಯ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜಿನಲ್ಲಿ ಇತ್ತೀಚೆಗೆ ಹಮ್ಮಿಕೊಂಡಿದ್ದ ವಿಧ್ಯಾರ್ಥಿಮಿತ್ರ-2024 ಹಾಗೂ ಸಿಇಟಿ/ನೀಟ್ ವಿಶೇಷ ತರಗತಿಗಳ ಪ್ರಾರಂಭ ಸಮಾರಂಭದ ಉದ್ಘಾಟಣೆಯನ್ನು ನೆರವೇರಿಸಿ ಅವರು ಮಾತನಾಡಿದರು. ನಗರದ ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜಿನಲ್ಲಿ ಎಲ್ಲಾ ವಿಜ್ಞಾನ ವಿಭಾಗದ ದ್ವಿತೀಯ ವರ್ಷದ ವಿಧ್ಯಾರ್ಥಿಗಳಿಗೆ ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಶೇಷ ತರಗತಿ ಆಯೋಜಿಸಲಾಗುತ್ತಿದೆ. ಸಂಪನ್ಮೂಲ ವ್ಯಕ್ತಿಗಳನ್ನು ನಿಯೋಜಿಸಿ ತರಬೇತಿ ನೀಡಲಾಗುತ್ತದೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ಮಾಡಿದರು. ಇದೇ ಸಂದರ್ಭದಲ್ಲಿ ಸುಮಾರು 80 ಸೆಟ್ ಸಿಇಟಿ ಮತ್ತು ನೀಟ್ ಪರೀಕ್ಷೆಗಳಿಗೆ ಸಂಬಂದಿಸಿದ ಪುಸ್ತಕಗಳನ್ನು ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲಾಗುವುದು ಎಂದರು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಪಿ.ಡಿ.ಹಳ್ಳಿಯ ಪ್ರಾಚಾರ್ಯರಾದ ಮಾಧವಜೋಷಿ ಅವರು ಮಾತನಾಡಿ, ವಿದ್ಯಾರ್ಥಿಗಳು ನಿರಂತರ ಅಧ್ಯಯನ ಮಾಡುವುದರಿಂದ ಪಿಯುಸಿ ಹಾಗೂ ಸಿಇಟಿ, ನೀಟ್ ಪರೀಕ್ಷೆಗಳಲ್ಲಿ ಉತ್ತಮ ಫಲಿತಾಂಶವನ್ನು ಪಡೆದು ಕಾಲೇಜಿಗೆ ಹಾಗೂ ತಂದೆ ತಾಯಿಗಳಿಗೆ ಕೀರ್ತಿ ತರಬೇಕೆಂದು ಆಶಿಸಿದರು. ಸರ್ಕಾರಿ (ಮಾ.ಪು) ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ನಾಗೇಶ್ವರ ರಾವ್.ಪಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ ವಿದ್ಯಾರ್ಥಿಗಳಿಗೆ ಎಲ್ಲಾ ರೀತಿಯ ಸೌಲಭ್ಯಗಳನ್ನು ಒದಗಿಸಲಾಗುವುದು ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಧ್ಯಾಪಕರಾದ ಕಲ್ಲಪ್ಪ, ಅಕ್ಕಿ ಮಲ್ಲಿಕಾರ್ಜುನ, ನಾಗರಾಜಪ್ಪ.ಜೆ., ಸುನಿತಾಂಜಲಿ, ಪದ್ಮಜ, ದಮಯಂತಿ, ಚಂದ್ರಹಾಸ್, ಕೆ.ಮಲ್ಲಿಕಾರ್ಜನ ನಂಬೂರಿ, ಶ್ರವಂತಿ, ಕೊಟ್ರ ಬಸಮ್ಮ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿಗಳು ಮತ್ತು ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ