ಸೋಮವಾರ, ಜನವರಿ 29, 2024

ಅರ್ಜಿ ಸಲ್ಲಿಸುವ ಅವಧಿ ವಿಸ್ತರಣೆ

ಬಳ್ಳಾರಿ,ಜ.29(ಕರ್ನಾಟಕ ವಾರ್ತೆ): ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಪ್ರವರ್ಗ-1 ಅಲೆಮಾರಿ, ಅರೆ ಅಲೆಮಾರಿ ವಿದ್ಯಾರ್ಥಿಗಳಿಂದ, 2023-24ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ಮರುಪಾವತಿ” ಮತ್ತು “ವಿದ್ಯಾಸಿರಿ-ಊಟ ಮತ್ತು ವಸತಿ ಸಹಾಯ ಯೋಜನೆ”, ಸೌಲಭ್ಯಕ್ಕಾಗಿ ಆನ್‍ಲೈನ್ ಮೂಲಕ ಈಗಾಗಲೇ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಅಂತಿಮ ದಿನಾಂಕವನ್ನು ಫೆ.15 ರ ವರೆಗೆ ವಿಸ್ತರಿಸಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಎ.ಕೆ.ಜಲಾಲಪ್ಪ ಅವರು ತಿಳಿಸಿದ್ದಾರೆ. ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಿಸುವಂತೆ ಪೋಷಕರು, ವಿದ್ಯಾರ್ಥಿಗಳು, ಶಿಕ್ಷಣ ಸಂಸ್ಥೆಗಳು ಮನವಿ ಸಲ್ಲಿಸಿದ್ದು, ಪ್ರಯುಕ್ತ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಜೋಳದರಾಶಿ ದೊಡ್ಡನಗೌಡ ರಂಗಮಂದಿರ ಹತ್ತಿರದ ಡಿ.ದೇವರಾಜ ಅರಸು ಭವನದ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಅಧಿಕಾರಿಗಳ ಕಚೇರಿ ಅಥವಾ ದೂ. 08392-275751 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ