ಶುಕ್ರವಾರ, ಜನವರಿ 19, 2024

ಯುವಕ ನಾಪತ್ತೆ: ಪತ್ತೆಗೆ ಮನವಿ

ಬಳ್ಳಾರಿ,ಜ.19(ಕರ್ನಾಟಕ ವಾರ್ತೆ): ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಭತ್ರಿ ಕಾಲೋನಿಯ ನಿವಾಸಿ ಮೆಹಬೂಬ್ ಎನ್ನುವ 20 ವರ್ಷದ ಯುವಕ 2023ರ ಜೂ.14 ರಂದು ಕಾಣೆಯಾಗಿರುವ ಕುರಿತು ಪ್ರಕರಣ ದಾಖಲಾಗಿದ್ದು, ಪತ್ತೆಗೆ ಸಹಕರಿಸಬೇಕು ಎಂದು ಪೊಲೀಸ್ ಸಬ್‍ಇನ್ಸ್‍ಪೆಕ್ಟರ್ ಅವರು ತಿಳಿಸಿದ್ದಾರೆ. ಚಹರೆ ಗುರುತು: ಎತ್ತರ 5.2 ಅಡಿ, ದುಂಡುಮುಖ, ದಪ್ಪನೇಯ ಮೈಕಟ್ಟು, ಗೋಧಿ ಮೈಬಣ್ಣ, ಕಪ್ಪು ಕೂದಲು, ಎದೆಯ ಎಡಭಾಗದಲ್ಲಿ ಕಪ್ಪು ಮಚ್ಚೆ ಇರುತ್ತದೆ. ಕಾಣೆಯಾದ ಸಂದರ್ಭದಲ್ಲಿ ಬಿಳಿ ತುಂಬುತೋಳಿನ ಅಂಗಿ, ಬಿಳಿ ಬಣ್ಣದ ಲುಂಗಿ ಧರಿಸಿರುತ್ತಾನೆ. ಕನ್ನಡ, ತೆಲುಗು ಮತ್ತು ಹಿಂದಿ ಭಾಷೆ ಮಾತನಾಡುತ್ತಾನೆ. ಮೇಲ್ಕಂಡ ಚಹರೆಯುಳ್ಳ ಯುವಕನ ಬಗ್ಗೆ ಮಾಹಿತಿ ಸಿಕ್ಕಲ್ಲಿ ಬಳ್ಳಾರಿ ಗ್ರಾಮೀಣ ಪೊಲೀಸ್ ಠಾಣೆಯ ದೂ.08392-276461, ಮೊ.9480803049 ಅಥವಾ ಬಳ್ಳಾರಿ ಪೊಲೀಸ್ ಕಂಟ್ರೋಲ್ ರೂಂ ಸಂಖ್ಯೆ 08392-258100 ಗೆ ಸಂಪರ್ಕಿಸಬಹುದು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ