ಗುರುವಾರ, ಜನವರಿ 25, 2024

ಮುಂಬರುವ ಬೇಸಿಗೆ ದಿನಗಳಲ್ಲಿ ವಾಂತಿಭೇದಿ ಪ್ರಕರಣಗಳು ಕಂಡುಬರದಂತೆ ಅಗತ್ಯ ಸಿದ್ಧತೆ ಕೈಗೊಳ್ಳಿ: ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ

ಬಳ್ಳಾರಿ,ಜ.25(ಕರ್ನಾಟಕ ವಾರ್ತೆ): ಮುಂಬರುವ ಬೇಸಿಗೆ ದಿನಗಳಲ್ಲಿ ಸಂಭಾವ್ಯ ವಾಂತಿಭೇದಿ ಪ್ರಕರಣಗಳು ಕಂಡುಬರದಂತೆ ಅಗತ್ಯ ಮುಂಜಾಗ್ರತೆ ಕ್ರಮವಹಿಸಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ಹೇಳಿದರು. ಇಂದು ಜಿಪಂ ನಜೀರ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಜಿಲ್ಲಾ ಆರೋಗ್ಯ ಸಂಘದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪ್ರಸಕ್ತ ವರ್ಷ ಮಳೆಗಾಲದಲ್ಲಿ ಸರಿಯಾದ ಮಳೆಯಾಗದ ಕಾರಣ ಬೇಸಿಗೆಯಲ್ಲಿ ಸಂಭಾವ್ಯ ವಾಂತಿಭೇದಿ ಪ್ರಕರಣ ಕಂಡುಬರದಂತೆ ಇಂದಿನಿಂದಲೇ ನೀರಿನ ಮೂಲಗಳನ್ನು ಗ್ರಾಮ ಪಂಚಾಯತಿಗಳ ಮೂಲಕ ಕ್ಲೋರಿನೇಷನ್ ಮಾಡಿಸುವ ಮೂಲಕ ಸ್ವಚ್ಛತೆಯಿಂದ ಇಟ್ಟುಕೊಳ್ಳಬೇಕು ಎಂದು ತಿಳಿಸಿದರು. ನೀರಿನ ಮೂಲಗಳನ್ನು ಕಾಲಕಾಲಕ್ಕೆ ಪರೀಕ್ಷಿಸಿ ಫಲಿತಾಂಶಗಳನ್ನು ಎಲ್ಲ ಗ್ರಾಮ ಪಂಚಾಯತಿಗಳಿಗೆ ತಿಳಿಸುವ ಮೂಲಕ ಕುಡಿಯಲು ಯೋಗ್ಯವಿಲ್ಲದಿರುವ ನೀರನ್ನು ಯಾವುದೇ ಕಾರಣಕ್ಕೂ ಸರಬರಾಜು ಆಗದಂತೆ ನಿಗಾವಹಿಸಬೇಕು ಎಂದರು. ಕುಡಿಯುವ ನೀರಿನ ಬಗ್ಗೆ ಜನತೆಗೆ ಜಾಗೃತಿ, ತಾಂತ್ರಿಕ ಸಲಹೆಯನ್ನು ನೀಡಿ ನೀರಿನ ಘಟಕಗಳು ಮತ್ತು ನೀರಿನ ಮೂಲಗಳನ್ನು ಸ್ಥಳೀಯ ಸಂಸ್ಥೆಗಳ ಸಹಕಾರದೊಂದಿಗೆ ಸುಸ್ಥಿತಿಯಲ್ಲಿರಿಸಲು ಕ್ರಮ ವಹಿಸಬೇಕು ಎಂದು ನಿರ್ದೇಶನ ನೀಡಿದರು. *ಗಂಡಾಂತರ ಗರ್ಭಿಣಿಯರ ಕಾಳಜಿ:* ಈಗಾಗಲೇ ಗಂಡಾಂತರ ಗರ್ಭಿಣಿ ಗರ್ಭಿಣಿಯರನ್ನು ನಿರಂತರವಾಗಿ ನಿಗಾ ವಹಿಸುವ ಮೂಲಕ ಈಗಾಗಲೇ ರಚಿಸಿರುವ ವಾಟ್ಸಪ್ ಗುಂಪಿನಲ್ಲಿ ಮಾಹಿತಿ ರವಾನಿಸಿ ಗರ್ಭಿಣಿಯ ಆರೋಗ್ಯದ ಸ್ಥಿತಿಗತಿಯನ್ನು ನಿರಂತರವಾಗಿ ಮೇಲ್ವಿಚಾರಣೆ ಮಾಡಬೇಕು. ಯಾವುದೇ ಲೋಪವಾಗದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. *ಪಲ್ಸ್ ಪೆÇೀಲಿಯೋ:* ಬರುವ ಮಾರ್ಚ್ 03 ರಂದು ಪಲ್ಸ್ ಪೆÇೀಲಿಯೋ ಕಾರ್ಯಕ್ರಮದ ಹಿನ್ನೆಲೆ ಹುಟ್ಟಿನಿಂದ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಪೆÇೀಲಿಯೋ ಹನಿ ಹಾಕುವ ಕಾರ್ಯಕ್ರಮಕ್ಕೆ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವಂತೆ ಮತ್ತು ಸಾರ್ವಜನಿಕರಿಗೆ ವ್ಯಾಪಕ ಮಾಹಿತಿಗಾಗಿ ಜಾಗೃತಿ ನೀಡುವಂತೆ ಅವರು ಸೂಚಿಸಿದರು. *ಕ್ಷಯಮುಕ್ತ ಗ್ರಾಮ ಪಂಚಾಯತ್ ಆಯ್ಕೆಗೆ ಕ್ರಮ:* ಕ್ಷಯಮುಕ್ತ ಗ್ರಾಮಪಂಚಾಯತಿಗಳನ್ನು ಘೋಷಿಸಲು ಸಮೀಕ್ಷೆ ಹಾಗೂ ದತ್ತಾಂಶಗಳನ್ನು ಸಂಗ್ರಹಿಸಿ ವಿಶ್ವ ಕ್ಷಯರೋಗ ದಿನಾಚರಣೆ ವೇಳೆಗೆ ಗ್ರಾಮ ಪಂಚಾಯಿತಿಗಳನ್ನು ಅಂತಿಮಗೊಳಿಸಲು ಮತ್ತು ಜಿಲ್ಲೆಯಲ್ಲಿ ಪ್ರಕರಣಗಳು ಹೆಚ್ಚಾಗದಂತೆ ನಿರಂತರ ಜಾಗೃತಿ ಮೂಡಿಸಲು ತಿಳಿಸಿದರು. ಅಂಧತ್ವ ಮುಕ್ತ ಬಳ್ಳಾರಿ ಜಿಲ್ಲೆ ಅಭಿಯಾನದ ಯಶಸ್ವಿಯ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ಬೆಂಬಲದೊಂದಿಗೆ ಜಿಲ್ಲೆಯಲ್ಲಿ ದಿವ್ಯಾಂಗರಿಗೆ ಸೂಕ್ತ ಸಲಕರಣೆಗಳನ್ನು ನೀಡಬಹುದಾದ ಸಾಧ್ಯತೆಗಳ ಕುರಿತು ಚರ್ಚಿಸಲು ತಿಳಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ ರಮೇಶ್ ಬಾಬು, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ, ಜಿಲ್ಲಾ ಆರ್‍ಸಿಹೆಚ್ ಅಧಿಕಾರಿ ಡಾ.ಅನೀಲ್ ಕುಮಾರ, ಜಿಲ್ಲಾ ಮಲೇರಿಯಾ ನಿಯಂತ್ರಣಾಧಿಕಾರಿ ಡಾ.ಅಬ್ದುಲ್ಲಾ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಮರಿಯಂಬಿ, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮ ಅಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಕ್ಷಯರೋಗ ನಿರ್ಮೂಲನಾಧಿಕಾರಿ ಡಾ.ಇಂದ್ರಾಣಿ.ವಿ, ಜಿಲ್ಲಾ ಕುಷ್ಠರೋಗ ನಿರ್ಮೂಲನಾಧಿಕಾರಿ ಡಾ.ವೀರೇಂದ್ರ ಕುಮಾರ್, ಡಬ್ಲ್ಯುಹೆಚ್‍ಓ ಅಧಿಕಾರಿ ಡಾ.ಶ್ರೀಧರ್.ಆರ್.ಎಸ್, ಶಾಲಾ ಶಿಕ್ಷಣ ಇಲಾಖೆ ನೀಲಮ್ಮ, ಪ್ರಾಣೇಶ್, ತಾಲೂಕಾ ಆರೋಗ್ಯಾಧಿಕಾರಿಗಳಾದ ಡಾ.ಈರಣ್ಣ, ಡಾ.ಭರತ್, ಡಾ.ಮಂಜುನಾಥ ಜವಳಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್ ದಾಸಪ್ಪನವರ, ಡಾ.ಜಬೀನ್ ತಾಜ್, ಡಿಎನ್‍ಓ ಗಿರೀಶ್, ವೆಂಕೋಬ್ ನಾಯ್ಕ್, ರಾಘವೇಂದ್ರ, ಮನೋಹರ ಸೇರಿದಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ