ಮಂಗಳವಾರ, ಜನವರಿ 30, 2024
ಬಳ್ಳಾರಿ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಸ್ವಚ್ಛತಾ ಕಾರ್ಯ/ ಸ್ವಚ್ಛತೆ ಕಾರ್ಯ ಪರಿಪಾಲನೆ ಮಾಡುವುದು ಪ್ರತಿಯೊಬ್ಬರ ಕರ್ತವ್ಯ: ನ್ಯಾ.ಪುಷ್ಪಾಂಜಲಿ ದೇವಿ
ಬಳ್ಳಾರಿ,ಜ.30(ಕರ್ನಾಟಕ ವಾರ್ತೆ):
ಎಲ್ಲರೂ ಸ್ವಚ್ಛತೆ ಕಾರ್ಯವನ್ನು ಕೈಗೊಳ್ಳಬೇಕು ಹಾಗೂ ದಿನನಿತ್ಯ ಇದನ್ನು ಪರಿಪಾಲನೆ ಮಾಡಬೇಕು. ಇದು ಪ್ರತಿಯೊಬ್ಬರ ಕರ್ತವ್ಯವಾಗಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಹೆಚ್.ಪುಷ್ಪಾಂಜಲಿ ದೇವಿ ಅವರು ಹೇಳಿದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘ ಮತ್ತು ಮಹಾನಗರ ಪಾಲಿಕೆ ಇವರ ಸಂಯುಕ್ತಾಶ್ರಯದಲ್ಲಿ “ರಾಷ್ಟೀಯ ಸ್ವಚ್ಛತಾ ದಿನಾಚರಣೆ” ಅಂಗವಾಗಿ ನಗರದ ತಾಳೂರು ರಸ್ತೆಯ ನೂತನ ಜಿಲ್ಲಾ ನ್ಯಾಯಾಲಯ ಆವರಣದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ “ಕಸ ಮುಕ್ತ ಭಾರತ” ಕಾರ್ಯಕ್ರಮದ “ಜಾಗೃತಿ ಅಭಿಯಾನ”ದ ವಿಡಿಯೋ ಪ್ರದರ್ಶನಕ್ಕೆ ಬಟನ್ ಒತ್ತುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.
ಸ್ವಚ್ಛತೆ ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದ್ದು, ಎಲ್ಲರೂ ನಮ್ಮ ಸುತ್ತ-ಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು. ಸ್ವಚ್ಛತಾ ಕಾರ್ಯ ಒಂದು ದಿನಕ್ಕೆ ಸೀಮಿತವಾಗದೆ, ದಿನನಿತ್ಯ ಸ್ವಚ್ಛತಾ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಅಗತ್ಯವಾಗಿದೆ. ಕಸವನ್ನು ಎಲ್ಲೆಂದರೆಲ್ಲೆ ಬೀಸಾಡದೆ, ನಿಗದಿಪಡಿಸಿದ ವಾಹನಗಳಿಗೆ ಕಸ ನೀಡಬೇಕು ಎಂದು ತಿಳಿಸಿದರು.
ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ “ನಾಗರೀಕರ ಸ್ವಚ್ಛತೆಯ ಕರ್ತವ್ಯ” ಎಂಬ ಭಿತ್ತಿಚಿತ್ರಗಳನ್ನು ಗಣ್ಯರು ಬಿಡುಗಡೆಗೊಳಿಸಿದರು.
ಕಾರ್ಯಕ್ರಮದಲ್ಲಿ ಶ್ವಾಸ್ ಇಂಡಿಯಾ ಎನ್.ಜಿ.ಓ.ನ ಶಶಿಧರ್ ಕಲ್ಮತ್ ಅವರು ಜಾಗೃತಿ ಅಭಿಯಾನದ ಉದ್ದೇಶ ಹಾಗೂ ಕರ್ತವ್ಯಗಳ ಕುರಿತು ವಿಶ್ಲೇಷಣೆ ನೀಡಿದರು.
ಬಳಿಕ “ರಾಷ್ಟೀಯ ಸ್ವಚ್ಛತಾ ದಿನಾಚರಣೆ ಅಂಗವಾಗಿ ಜಿಲ್ಲಾ ನ್ಯಾಯಾಧೀಶರಿಂದ ನ್ಯಾಯಾಲಯದ ಆವರಣದಲ್ಲಿ ಸ್ವಚ್ಛತಾ ಕಾರ್ಯ ನಡೆಯಿತು.
ಈ ಸಂದರ್ಭದಲ್ಲಿ ಪ್ರಿನ್ಸಿಪಲ್ ಕೌಟುಂಬಿಕ ನ್ಯಾಯಾಧೀಶರಾದ ಸಿದ್ಧಲಿಂಗ ಪ್ರಭು, ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರಾದ ವಿನಯ್.ಡಿ, 2ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ವಿದ್ಯಾಧರ ಶಿರಹಟ್ಟಿ, 4ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ವಿಮಲ್ ಆರ್.ನಂದಾಗಾಂವ್, ಪ್ರಿನ್ಸಿಪಲ್ ಹಿರಿಯ ಶ್ರೇಣಿ ಹಾಗೂ ಸಿಜೆಎಂ ನ್ಯಾಯಾಧೀಶರಾದ ಸತೀಶ್ ಜೆ.ಬಾಳಿ, ಒಂದನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶೆ ಅಪರ್ಣ, ಎರಡನೇ ಅಪರ ಹಿರಿಯ ಶ್ರೇಣಿ ಸಿವಿಲ್ ನ್ಯಾಯಾಧೀಶರಾದ ನಸ್ರತ್ ಮುಖ್ತಾರ್ ಅಹ್ಮದ್ ಖಾನ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರಾಜೇಶ್.ಎನ್.ಹೊಸಮನೆ, ಪ್ರಿನ್ಸಿಪಲ್ ಕಿರಿಯ ಶ್ರೇಣಿ ಹಾಗೂ ಸಿಜೆಎಂ ನ್ಯಾಯಾಧೀಶರಾದ ಅಮೀತ್ ಘಟ್ಟಿ, 1ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ಈರಪ್ಪ ದವಳೇಶ್ವರ, 2ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ಸಣ್ಣಹನಮಗೌಡ, 4ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ರೂಪ ಚಿನಿವಾರ, 5ನೇ ಕಿರಿಯ ಅಪರ ಸಿವಿಲ್ ನ್ಯಾಯಾಧೀಶರಾದ ಮುದುಕಪ್ಪ ಒಡನ್ ಸೇರಿದಂತೆ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ