ಶುಕ್ರವಾರ, ಜನವರಿ 12, 2024
ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅಧಿಕಾರ ಸ್ವೀಕಾರ
ಬಳ್ಳಾರಿ,ಜ.12(ಕರ್ನಾಟಕ ವಾರ್ತೆ):
ಬಳ್ಳಾರಿ ಮಹಾನಗರ ಪಾಲಿಕೆಯ ನೂತನ ಮಹಾಪೌರರಾಗಿ ಬಿ.ಶ್ವೇತಾ ಅವರು ಶುಕ್ರವಾರ ಅಧಿಕಾರ ಸ್ವೀಕಾರ ಮಾಡಿದರು.
ಮಹಾನಗರ ಪಾಲಿಕೆಯ ಮೇಯರ್ ಕಚೇರಿ ಸಭಾಂಗಣದಲ್ಲಿ ನೂತನ ಮೇಯರ್ ಆದ ಬಿ.ಶ್ವೇತಾ ಅವರು ದಾಖಲಾತಿಯಲ್ಲಿ ಸಹಿ ಹಾಕುವುದರ ಮೂಲಕ ಅಧಿಕೃತವಾಗಿ ಅಧಿಕಾರ ವಹಿಸಿಕೊಂಡರು.
ಬಳ್ಳಾರಿ ನಗರ ಶಾಸಕ ನಾರಾ ಭರತ್ ರೆಡ್ಡಿ, ಮಹಾನಗರ ಪಾಲಿಕೆ ಆಯುಕ್ತ ಜಿ.ಖಲೀಲ್‌ಸಾಬ್ ಅವರು ಹೂ ಗುಚ್ಛ ನೀಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರು, ಜನಪ್ರತಿನಿಧಿಗಳು ಹಾಗೂ ಪಾಲಿಕೆಯ ಅಧಿಕಾರಿಗಳು ಹಾಜರಿದ್ದರು.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)




ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ