ಬುಧವಾರ, ಜನವರಿ 31, 2024
ಕಂಪ್ಲಿ ಪಟ್ಟಣದಲ್ಲಿ “ಕಿಸಾನ್ ವೃತ್ತ” ನಾಮಕರಣ; ಆಕ್ಷೇಪಣೆಗಳಿದ್ದಲ್ಲಿ ಸಲ್ಲಿಸಿ
ಬಳ್ಳಾರಿ,ಜ.31(ಕರ್ನಾಟಕ ವಾರ್ತೆ):
ಕಂಪ್ಲಿ ಪಟ್ಟಣದ ಕಂಪ್ಲಿ-ಕುರುಗೋಡು ರಸ್ತೆಯ ಎ.ಪಿ.ಎಂ.ಸಿ ಎದುರುಗಡೆಯ ಬ್ರೈಟ್‍ವೇ ಶಾಲೆಗೆ ಹೋಗುವ ಮಾರ್ಗದ ಎದುರಲ್ಲಿ “ಕಿಸಾನ್ ವೃತ್ತ” ಎಂದು ನಾಮಕರಣ ಮಾಡಲು ತೀರ್ಮಾನಿಸಲಾಗಿದ್ದು, ಸಾರ್ವಜನಿಕರು ಆಕ್ಷೇಪಣೆ ಇದ್ದಲ್ಲಿ ಸಲ್ಲಿಸಬಹುದು ಎಂದು ಕಂಪ್ಲಿ ಪುರಸಭೆಯ ಮುಖ್ಯಾಧಿಕಾರಿ ಕೆ.ದುರುಗಣ್ಣ ಅವರು ತಿಳಿಸಿದ್ದಾರೆ.
ಕಂಪ್ಲಿ ಪಟ್ಟಣದ ಕಿಸಾನ್ ಜಾಗೃತಿ ಸಂಘವು ನಾಮಕರಣ ಮಾಡಲು ಕೋರಿದ್ದು, ಪುರಸಭೆಯ ಸಾಮಾನ್ಯ ಸಭೆಯ ನಡವಳಿಯ ಮಾರ್ಗಸೂಚಿಯಂತೆ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲು ಅನುಮೋದಿಸಲಾಗಿದೆ.
ಈ ಕುರಿತು ಯಾರಿಗಾದರೂ ಆಕ್ಷೇಪಣೆಗಳಿದ್ದಲ್ಲಿ ಲಿಖಿತ ಮತ್ತು ಪೂರಕ ದಾಖಲೆಗಳೊಂದಿಗೆ ಪ್ರಕಟಣೆಗೊಂಡ 30 ದಿನಗಳೊಳಗಾಗಿ ಸಲ್ಲಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ