ಬುಧವಾರ, ಜನವರಿ 24, 2024
ಮಹನೀಯರ ಜಯಂತಿ ಅರ್ಥಪೂರ್ಣ ಆಚರಣೆ: ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್
ಬಳ್ಳಾರಿ,ಜ.24(ಕರ್ನಾಟಕ ವಾರ್ತೆ):
ಜಿಲ್ಲಾಡಳಿತದಿಂದ ಫೆ.01 ರಂದು ಮಡಿವಾಳ ಮಾಚಿದೇವ ಜಯಂತಿ ಮತ್ತು ಫೆ.10 ರಂದು ಕಾಯಕ ಶರಣರ ಜಯಂತಿಗಳನ್ನು ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಮೊಹಮ್ಮದ್ ಝುಬೇರ್ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಪೂರ್ವಭಾವಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಮಹನೀಯರ ಜಯಂತಿಯನ್ನು ಶಿಷ್ಟಾಚಾರದನ್ವಯ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿದ್ದು, ವಿವಿಧ ಇಲಾಖೆಗಳಿಗೆ ವಹಿಸಿದ ಕೆಲಸಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದರು.
ಜಯಂತಿಯ ದಿನಗಳಂದು ಕನಕದುರ್ಗಮ್ಮ ದೇವಸ್ಥಾನದಿಂದ ಗಡಿಗಿ ಚೆನ್ನಪ್ಪ ವೃತ್ತದ ಮೂಲಕ ಬಿಡಿಎಎ ಪುಟ್ಬಾಲ್ ಸಭಾಂಗಣದವರೆಗೆ ನಡೆಯಲಿದೆ. ಬಳಿಕ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮ ಅಚ್ಚುಕಟ್ಟಾಗಿ ಆಯೋಜಿಸಬೇಕು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ವಿಶೇಷ ಉಪನ್ಯಾಸ, ಸುಗಮ ಸಂಗೀತ ಆಯೋಜಿಸಬೇಕು. ಸಮುದಾಯದಲ್ಲಿ ಪಿಹೆಚ್‍ಡಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಹಾಗೂ ಕಳೆದ ಶೈಕ್ಷಣಿಕ ಸಾಲಿನಲ್ಲಿ ಪ್ರಥಮ ಸ್ಥಾನ ಪಡೆದವರಿಗೆ ಸನ್ಮಾನಿಸಬೇಕು ಎಂದು ತಿಳಿಸಿದರಲ್ಲದೇ, ಕಾರ್ಯಕ್ರಮದಲ್ಲಿ ಎಲ್ಲಾ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದರು.
ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ ಅವರು ಮಾತನಾಡಿ, ಮಹನೀಯರ ಜಯಂತಿ ಮೆರವಣಿಗೆಗೆ ವಿವಿಧ ಸಾಂಸ್ಕøತಿಕ ಕಲಾತಂಡಗಳನ್ನು ಕರೆಸಲಾಗುವುದು. ಆಮಂತ್ರಣ ಪತ್ರಿಕೆ ಮುದ್ರಿಸಿ ಗಣ್ಯರನ್ನು ಆಹ್ವಾನಿಸಲಾಗುವುದು ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಮುದಾಯದ ಮುಖಂಡರು ಹಾಗೂ ಇನ್ನೀತರರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)



ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ