ಬುಧವಾರ, ಜನವರಿ 3, 2024
ಬಳ್ಳಾರಿಯಲ್ಲಿ ಮಾದಕದ್ರವ್ಯ ವಿರೋಧಿ ಅಭಿಯಾನ ನಿಮಿತ್ತ ಮ್ಯಾರಾಥಾನ್ ಸ್ಪರ್ಧೆ
ಬಳ್ಳಾರಿ,ಜ.03(ಕರ್ನಾಟಕ ವಾರ್ತೆ):
ಸ್ವಚ್ಛ ಬಳ್ಳಾರಿ ಹಾಗೂ ಸದೃಢ ಬಳ್ಳಾರಿಯಂತೆ, ಡ್ರಗ್ಸ್ ಮುಕ್ತ ಬಳ್ಳಾರಿಯನ್ನಾಗಿಸಲು ಯುವಕರು, ಸಾರ್ವಜನಿಕರು ಕೈಜೋಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಾವೆಲ್ಲರೂ ಒಗ್ಗೂಡಬೇಕಿದೆ ಎಂದು ಬಳ್ಳಾರಿ ನಗರ ಶಾಸಕ ಭರತ್ ರೆಡ್ಡಿ ಅವರು ಹೇಳಿದರು.
ಜಿಲ್ಲಾಡಳಿತ, ಜಿಲ್ಲಾ ಪೆÇಲೀಸ್, ಜಿಪಂ ಹಾಗೂ ಎಂಎಸ್‍ಪಿಎಲ್ ಬಲ್ಡೋಟ ಇವರ ಸಂಯುಕ್ತಾಶ್ರಯದಲ್ಲಿ ನಗರದಲ್ಲಿ ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಮತ್ತು ಸಾಗಾಣಿಕೆ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಸೇ ನೋ ಟು ಡ್ರಗ್ ಎಂಬ ಸಂದೇಶದೊಂದಿಗೆ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ 05K ಮ್ಯಾರಥಾನ್ ಹಾಗೂ ವಾಕಥಾನ್ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದಿನ ಯುವಪೀಳಿಗೆಯು ಮಾದಕ ವಸ್ತುಗಳಿಂದ ದೂರವಿರಬೇಕು. ತಂದೆ-ತಾಯಿಯಂದಿರ ಆಶಾಮನೋಭಾವನೆಗಳನ್ನು ಈಡೇರಿಸಬೇಕು. ಯಾವುದೇ ದುಶ್ಚಟಗಳಿಗೆ ಒಳಗಾಗದಂತೆ ಎಚ್ಚರವಹಿಸಬೇಕಿದೆ ಎಂದು ಕರೆ ನೀಡಿದರು.
ಜಿಲ್ಲಾ ಪೊಲೀಸ್ ಕಚೇರಿ ಆವರಣದಿಂದ ಹಮ್ಮಿಕೊಂಡಿದ್ದ 05K ಮ್ಯಾರಥಾನ್ ಹಾಗೂ ವಾಕಥಾನ್ ಸ್ಪರ್ಧೆಗೆ ಬಳ್ಳಾರಿ ವಲಯ ಪೆÇಲೀಸ್ ಮಹಾ ನಿರೀಕ್ಷಕರಾದ ಬಿ.ಎಸ್.ಲೋಕೇಶ್ ಕುಮಾರ್ ಅವರು ಹಸಿರು ನಿಶಾನೆ ತೋರಿಸುವುದರ ಮೂಲಕ ಚಾಲನೆ ನೀಡಿದರು.
ಬಳಿಕ ಮಾತನಾಡಿದ ಅವರು, ಇಂದಿನ ಜಗತ್ತಿನಲ್ಲಿ ಮಾದಕದ್ರವ್ಯ ಸೇವನೆಯು ಬಹುದೊಡ್ಡ ವ್ಯಸನಿಯಾಗಿ ಪರಿಣಮಿಸಿದ್ದು, ಅವುಗಳಿಂದ ಯುವ ಪೀಳಿಗೆಯು ದೂರವಿರಬೇಕು. ಈ ನಿಟ್ಟಿನಲ್ಲಿ ಯುವಕ-ಯುವತಿಯರು ಯಾವುದೇ ಮಾದಕದ್ರವ್ಯ ವಸ್ತುಗಳನ್ನು ಉಪಯೋಗಿಸುವುದಿಲ್ಲ ಎಂಬ ದೃಢ ನಿರ್ಧಾರ ಕೈಗೊಳ್ಳಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜೀತ್ ಕುಮಾರ್ ಬಂಡಾರು ಮಾತನಾಡಿ, ಯುವಕ ಮತ್ತು ಯುವತಿಯರು ಮಾದಕ ದ್ರವ್ಯ ಸೇವನೆಯಿಂದ ಉಂಟಾಗುವ ದುಷ್ಪರಿಣಾಮ ಮತ್ತು ಸಾಗಾಣಿಕೆ ಕುರಿತು ಅರಿವು ಮೂಡಿಸಲು ಈ ಮ್ಯಾರಾಥಾನ್ ಸ್ಪರ್ಧೆ ಹಮ್ಮಿಕೊಳ್ಳಲಾಗಿದ್ದು, ನಿಮ್ಮ ಸ್ನೇಹಿತರು ಮತ್ತು ಸಂಬಂಧಿಕರಿಗೆ ಕೂಡ ಅರಿವು ಮತ್ತು ಜಾಗೃತಿ ಮೂಡಿಸುವ ಕಾರ್ಯವಾಗಬೇಕು ಎಂದು ಹೇಳಿದರು.
ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮ್ಯಾರಥಾನ್ ಹಾಗೂ ವಾಕಥಾನ್‍ವು ಜಿಲ್ಲಾ ಪೊಲೀಸ್ ಕಚೇರಿ ಆವರಣದಿಂದ ಆರಂಭವಾಗಿ ಕನಕದುರ್ಗಮ್ಮ ದೇವಸ್ಥಾನದ ಆವರಣದಿಂದ ಎಸ್.ಪಿ ವೃತ್ತ, ಅಂಬೇಡ್ಕರ್ ವೃತ್ತ, ಹೆಚ್.ಆರ್.ಗವಿಯಪ್ಪ ವೃತ್ತ, ವಾಡ್ರ್ಲಾ ಕಾಲೇಜ್ ರಸ್ತೆ, ಕಾಳಮ್ಮ ವೃತ್ತ, ಗಡಿಗಿ ಚೆನ್ನಪ್ಪ ವೃತ್ತ ಮೂಲಕ ಡಾ.ರಾಜ್‍ಕುಮಾರ್ ರಸ್ತೆಯ ಮುನಿಸಿಪಲ್ ಕಾಲೇಜು ಮೈದಾನಕ್ಕೆ ತಲುಪಿತು.
ಮ್ಯಾರಥಾನ್ ಸ್ಪರ್ಧೆಯಲ್ಲಿ ಸುಮಾರು 1300 ರಿಂದ 1400 ಮಂದಿ ಯುವಕ ಯುವತಿಯರು, ಸಂಘ ಸಂಸ್ಥೆಯ ಪದಾಧಿಕಾರಿಗಳು, ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮತ್ತು ಸಾರ್ವಜನಿಕರು ಭಾಗವಹಿಸಿದ್ದರು.
*ಮ್ಯಾರಥಾನ್ ಸ್ಪರ್ಧೆಯ ವಿಜೇತರ ಪಟ್ಟಿ:*
*ಪುರುಷರ ವಿಭಾಗ:*
ಪುರುಷ ಮ್ಯಾರಥಾನ್ ಸ್ಪರ್ಧೆಯಲ್ಲಿ ಜಿಆರ್‍ಎಸ್‍ಎಸ್ ಕಾಲೇಜಿನ ವಿದ್ಯಾರ್ಥಿ ಚೆನ್ನಬಸವ (ಪ್ರಥಮ ಸ್ಥಾನ), ವಾಡ್ಲಾ ಕಾಲೇಜಿನ ವಿದ್ಯಾರ್ಥಿ ತಿಪ್ಪೇಶ್ ಯಾದವ್ (ದ್ವಿತೀಯ ಸ್ಥಾನ), ಎಸ್.ಎಸ್.ಎ ಕಾಲೇಜಿನ ವಿದ್ಯಾರ್ಥಿ ಚಂದನ್ (ತೃತೀಯ ಸ್ಥಾನ).
*ಮಹಿಳೆಯರ ವಿಭಾಗ:*
ಮಹಿಳಾ ಮ್ಯಾರಥಾನ್ ಸ್ಪರ್ಧೆಯಲ್ಲಿ ವಾಡ್ರ್ಲಾ ಕಾಲೇಜಿನ ವಿದ್ಯಾರ್ಥಿನಿ ಪವಿತ್ರ ಬೀಳಗಿ (ಪ್ರಥಮ ಸ್ಥಾನ), ವಾಡ್ರ್ಲಾ ಕಾಲೇಜಿನ ವಿದ್ಯಾರ್ಥಿನಿ ಸಂಧ್ಯಾಜಿ.ಎಲ್ (ದ್ವಿತೀಯ ಸ್ಥಾನ), ಜೀನಿಯಸ್ ಶಾಲೆಯ ವಿದ್ಯಾರ್ಥಿನಿ ಹಾರಿಕ ಸಾಯಿ (ತೃತೀಯ ಸ್ಥಾನ).
ಇದೇ ಸಂದರ್ಭದಲ್ಲಿ ವಿಜೇತರಿಗೆ ಆಕರ್ಷಕ ನಗದು ಬಹುಮಾನ, ಕಪ್ ಹಾಗೂ ಪ್ರಶಸ್ತಿ ಪ್ರಮಾಣ ಪತ್ರಗಳನ್ನು ನೀಡಿ ಅಭಿನಂದಿಸಲಾಯಿತು.
ಸಾರ್ವಜನಿಕರಿಗೆ ಮಾದಕ ದ್ರವ್ಯ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಪ್ರಮಾಣ ವಚನ ಭೋದಿಸಿದ ನಂತರ ಮಾದಕ ದ್ರವ್ಯ ಸೇವನೆಯ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಮೂಡಿಸುವ ಭಿತ್ತಿ ಚಿತ್ರ ಬಿಡುಗಡೆ ಮಾಡಲಾಯಿತು ಹಾಗೂ “ಐ ಸೇ ನೋ ಟು ಡ್ರಗ್ಸ್” ಎನ್ನುವ ಸಂದೇಶಕ್ಕೆ ಸಾರ್ವಜನಿಕರಿಂದ ಸಹಿಗಳನ್ನು ಪಡೆಯಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಾಹುಲ್ ಶರಣಪ್ಪ ಸಂಕನೂರ, ಸಹಾಯಕ ಆಯುಕ್ತ ಹೇಮಂತ್ ಕುಮಾರ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ, ವಿಶ್ರೀಕೃದೇ ವಿವಿಯ ಕುಲಸಚಿವ ಎಸ್.ಎನ್.ರುದ್ರೇಶ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕೆ.ಪಿ.ರವಿಕುಮಾರ್, ನವೀನ್‍ಕುಮಾರ್ ಸೇರಿದಂತೆ ಡಿಎಸ್‍ಪಿಗಳು ಹಾಗೂ ಪೊಲೀಸ್ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಮತ್ತಿತರರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ