ಮಂಗಳವಾರ, ಜನವರಿ 30, 2024
ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ ಯಶಸ್ವಿಗೊಳಿಸಿ
ಬಳ್ಳಾರಿ,ಜ.30(ಕರ್ನಾಟಕ ವಾರ್ತೆ):
ನಗರದಲ್ಲಿ ಜ.30 ರಿಂದ ಫೆ.13 ರ ವರೆಗೆ ನಡೆಯುವ ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ ನಡೆಯುತ್ತಿದ್ದು, ಶಾಲಾ ಕಾಲೇಜುಗಳಿಗೆ, ಅಂಗನವಾಡಿ ಕೇಂದ್ರಗಳಿಗೆ ಆರೊಗ್ಯ ಇಲಾಖೆ ಸಿಬ್ಬಂದಿಗಳು ಭೇಟಿ ನೀಡಿದಾಗ ಸಾರ್ವಜನಿಕರು ಸಹಕಾರ ನೀಡಬೇಕು ಎಂದು ಮಹಾನಗರ ಪಾಲಿಕೆಯ ಸದಸ್ಯ ನಾಗಲಕೆರೆ ಗೋವಿಂದ್ ಅವರು ಹೇಳಿದರು.
ಇಂದು, ನಗರ ಆರೋಗ್ಯ ಕೇಂದ್ರ ಬಂಡಿಹಟ್ಟಿ ವ್ಯಾಪ್ತಿಯ ಆಶ್ರಯ ಕಾಲೋನಿಯಲ್ಲಿ ಬರುವ ಜಿ.ಎ.ಡಿ.ಆಸ್ಪತ್ರೆಯಲ್ಲಿ “ಕಳಂಕವನ್ನು ಕೊನೆಗೊಳಿಸಿ ಘನತೆಯನ್ನು ಎತ್ತಿ ಹಿಡಿಯಿರಿ” ಎಂಬ ಘೋಷವಾಕ್ಯದಡಿ ಏರ್ಪಡಿಸಿದ್ದ ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ -2024 ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆರೋಗ್ಯ ಇಲಾಖೆ ಸಿಬ್ಬಂದಿಗಳು ಜ.31 ರಿಂದ ಫೆ.13 ರ ವರೆಗೆ ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಶಾಲಾ ಕಾಲೇಜುಗಳು, ಅಂಗನವಾಡಿ ಕೇಂದ್ರಗಳಿಗೆ ಭೇಟಿ ಮಾಡಿ ಪ್ರತಿಜಾÐವಿಧಿ ಭೋದಿಸುವ ಮೂಲಕ ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ -2024 ಕಾರ್ಯಕ್ರಮ ಕುರಿತು ವ್ಯಾಪಕ ಪ್ರಚಾರ ಮಾಡಲಾಗುತ್ತದೆ ಎಂದು ತಿಳಿಸಿದರು.
ಗ್ರಾಮಗಳಲ್ಲಿ ಮತ್ತು ನಗರ ಪ್ರದೇಶದ ವಾರ್ಡ್‍ಗಳಲ್ಲಿ ಗುಂಪು ಸಭೆಗಳನ್ನು ಮಾಡುವುದರ ಮೂಲಕ ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ -2024 ಕಾರ್ಯಕ್ರಮ ಕುರಿತು ವ್ಯಾಪಕ ಪ್ರಚಾರ ಮಾಡುತ್ತಾರೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ವೈ.ರಮೇಶ ಬಾಬು ಅವರು ಮಾತನಾಡಿ, ಕುಷ್ಠರೋಗ ಸಾಂಕ್ರಾಮಿಕ ರೋಗವಾಗಿದ್ದು, ಇದು ಮೈಕೋಬ್ಯಾಕ್ಟೀರಿಯಂ ಲೆಪ್ರೈ ಎಂಬ ರೋಗಾಣುವಿನಿಂದ ಬರುತ್ತದೆ. ಇದು ಚಿಕಿತ್ಸೆ ಪಡೆಯದೇ ಇರುವ ಕುಷ್ಠರೋಗಿಯು ಕೆಮ್ಮಿದಾಗ ಸೀನಿದಾಗ ತುಂತುರು ಹನಿಗಳು ಉಸಿರಾಡುವ ಗಾಳಿಯ ಮೂಲಕ ಒಬ್ಬರಿಂದ ಒಬ್ಬರಿಗೆ ಹರಡುವಂತಹ ರೋಗವಾಗಿದ್ದು, ಪ್ರಾರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ನೀಡುವುದರಿಂದ ಅಂಗವಿಕಲತೆಯಾಗುವುದನ್ನು ತಪ್ಪಿಸಬಹುದೆಂದು ತಿಳಿಸಿದರು.
ಪ್ರಸ್ತುತ ಜಿಲ್ಲೆಯಲ್ಲಿ 88 ಪ್ರಕರಣಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದೂ ತಿಳಿಸಿದರು.
ಆರೋಗ್ಯ ನಿರೀಕ್ಷಣಾಧಿಕಾರಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳು, ಸಮುದಾಯ ಆರೋಗ್ಯ ಆಧಿಕಾರಿಗಳು, ಆಶಾ ಕಾರ್ಯಕರ್ತೆಯರು, ಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ, ನಗರ ಸಭೆಗಳಲ್ಲಿ, ಪುರಸಭೆಗಳಲ್ಲಿ, ಪಟ್ಟಣ ಪಂಚಾಯತಿಗಳಲ್ಲಿ, ಮಹಾನಗರಪಾಲಿಕೆಗಳಲ್ಲಿ, ಆಧಿಕಾರಿಗಳು, ಸಿಬ್ಬಂದಿಗಳು, ಚುನಾಯಿತ ಜನಪ್ರತಿನಿಧಿಗಳಿಗೆ ಪ್ರತಿಜಾÐವಿಧಿ ಭೋದಿಸುವ ಮೂಲಕ ಸ್ಪರ್ಷ ಕುಷ್ಠರೋಗ ಜಾಗೃತಿ ಅಭಿಯಾನ -2024 ಕಾರ್ಯಕ್ರಮ ಕುರಿತು ವ್ಯಾಪಕ ಪ್ರಚಾರ ಮಾಡಲಾಗುತ್ತದೆ. ಕ್ಷೇತ್ರ ವ್ಯಾಪ್ತಿಯಲ್ಲಿ ಡಂಗೂರ ಹಾಕಿಸುವುದು. ಕಸದ ವ್ಯಾನ್‍ಗಳ ಮೂಲಕ ಆಡಿಯೋ ಜಿಂಗಲ್ಸ್ ಹಾಕುವುರ ಮೂಲಕ ಜಾಗೃತಿ ಮೂಡಿಸಲಾಗುವುದು ಎಂದು ಹೇಳಿದರು.
ಮಹಾತ್ಮ ಗಾಂಧೀಜಿಯವರ ಕಂಡ ಕನಸು “ಕುಷ್ಠರೋಗ ಮುಕ್ತ ಭಾರತ ” ಮಾಡಲು ಆರೊಗ್ಯ ಇಲಾಖೆ ಸಿಬ್ಬಂದಿಗಳು ಗ್ರಾಮ ಪಂಚಾಯತಿ, ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತಿ, ಮಹಾನಗರ ಪಾಲಿಕೆ, ಶಾಲಾ ಕಾಲೇಜು, ಅಂಗನವಾಡಿ ಕೇಂದ್ರಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳು, ಚುನಾಯಿತ ಪ್ರತಿನಿಧಿಗಳು ಮತ್ತು ಸಾರ್ವಜನಿಕರು ಸಹಕಾರ ನೀಡಬೇಕು ಹಾಗು ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿ ಡಾ.ಕೆ.ಜಿ.ವೀರೇಂದ್ರ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣ ಕಾರ್ಯಕ್ರಮಾಧಿಕಾರಿ ಡಾ.ಪೂರ್ಣಿಮಾ ಕಟ್ಟಿಮನಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಈಶ್ವರ ಹೆಚ್.ದಾಸಪ್ಪನವರು, ಆಡಳಿತ ವೈಧ್ಯಾಧಿಕಾರಿಗಳಾದ ಡಾ.ಕಾಶೀಪ್ರಸಾದ, ಡಾ.ಯಾಸ್ಮಿನ್, ಡಿ.ಎಫ್.ಐ.ಟಿ. ಸಮನ್ವಯ ಅಧಿಕಾರಿ ಎಸ್.ಸುಧಾಕರ, ಜಿಲ್ಲಾ ಕುಷ್ಠರೋಗ ನಿಯಂತ್ರಣಾಧಿಕಾರಿಗಳ ಕಚೇರಿಯ ಮೇಲ್ವಿಚಾರಕ ಎ.ಮಾನಪ್ಪ, ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಮೇಲ್ವಿಚಾರಕ ಮುಸ್ತಾಕ್ ಅಹಮ್ಮದ್ ಸೇರಿದಂತೆ ಆಶಾ ಕಾರ್ಯಕರ್ತರು ಹಾಗೂ ಇತರೆ ಸಿಬ್ಬಂದಿಯವರು ಉಪಸ್ಥಿತರಿದ್ದರು.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ