ಸೋಮವಾರ, ಜನವರಿ 1, 2024

ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜ.01(ಕರ್ನಾಟಕ ವಾರ್ತೆ): ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ ಏಕಗವಾಕ್ಷಿ ಯೋಜನೆಯಡಿಯಲ್ಲಿ 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ವಿವಿಧ ವಿಷಯಗಳನ್ನೊಳಗೊಂಡ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಸಾಹಿತ್ಯ, ಕಲೆ, ವಿಜ್ಞಾನ, ಸರ್ಧಾತ್ಮಕ, ಪಠ್ಯ ಮತ್ತು ಸಾಂದರ್ಭಿಕ, ಮಕ್ಕಳ ಸಾಹಿತ್ಯ ಹಾಗೂ ಇತರೆ ವಿಷಯಗಳ ಕನ್ನಡ, ಆಂಗ್ಲ ಮತ್ತು ಭಾರತೀಯ ಭಾಷೆಗಳ ಗ್ರಂಥಗಳ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು, ಪ್ರಕಾಶಕರು/ಸಂಸ್ಥೆಗಳಿಂದ ಪುಸ್ತಕಗಳನ್ನು ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಗೆ ಆಯ್ಕೆಗಾಗಿ ಅರ್ಜಿ ಸಲ್ಲಿಸಬಹುದಾಗಿದೆ. 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಬೆಂಗಳೂರಿನ ಕಬ್ಬನ್ ಉದ್ಯಾನವನದಲ್ಲಿರುವ ರಾಜ್ಯ ಕೇಂದ್ರ ಗ್ರಂಥಾಲಯದ ಗ್ರಂಥಸ್ವಾಮ್ಯ ವಿಭಾಗದಲ್ಲಿ ಜನವರಿ 31 ರೊಳಗಾಗಿ ಕಾಫಿರೈಟ್ ಮಾಡಿಸಿರುವ ಪುಸ್ತಕಗಳನ್ನು ಆಯ್ಕೆಗಾಗಿ, ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು (ನೋಂದಣಿ ಪತ್ರದ ಪ್ರತಿಯೊಂದಿಗೆ) ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, 4ನೇ ಮಹಡಿ, ಡಾ. ಅಂಬೇಡ್ಕರ್ ವೀಧಿ, ಬೆಂಗಳೂರು 560001 ಇಲ್ಲಿಗೆ ಸಲ್ಲಿಸಬೇಕು. ತದನಂತರ ಬಂದ ಯಾವುದೇ ಪುಸ್ತಕಗಳನ್ನು ಸ್ವೀಕರಿಸಲಾಗುವುದಿಲ್ಲ. ನಿಗಧಿತ ಅರ್ಜಿ ನಮೂನೆ ಮತ್ತು ನಿಬಂಧನೆಗಳ ಮಾಹಿತಿಗಾಗಿ ಇಲಾಖಾ ಅಂತರ್ಜಾಲ www.dpl.karnataka.gov.in ಹಾಗೂ ಬಳ್ಲಾರಿ ಜಿಲ್ಲಾ ನಗರ ಕೇಂದ್ರ ಗ್ರಂಥಾಲಯದಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ನಗರ ಕೇಂದ್ರ ಗ್ರಂಥಾಲಯದ ಕಚೇರಿಯ ದೂ.08392-274113 ಗೆ ಸಂಪರ್ಕಿಸಬಹುದು ಎಂದು ನಗರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ