ಬುಧವಾರ, ಜನವರಿ 10, 2024

ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಬಳ್ಳಾರಿ,ಜ.10(ಕರ್ನಾಟಕ ವಾರ್ತೆ): 2023-24ನೇ ಸಾಲಿಗೆ ಸರ್ಕಾರಿ/ಖಾಸಗಿ/ಅನುದಾನಿತ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ ಶಿಷ್ಯವೇತನಕ್ಕೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಲು ಎಸ್‍ಎಸ್‍ಪಿ ಪೋರ್ಟಲ್‍ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಪರಿಶಿಷ್ಟ ಪಂಗಡ ಇಲಾಖೆಯ ಕಲ್ಯಾಣ ಅಧಿಕೃತ ವೆಬ್‍ಸೈಟ್ www.Twd.karnataka.gov.in ಅಥವಾ www.Twd.karnataka.gov.in ಲಿಂಕ್‍ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿಯ ಸ್ವೀಕೃತಿ ಪ್ರತಿಯೊಂದಿಗೆ ಜಾತಿ ಪ್ರಮಾಣ ಪತ್ರ, ಆದಾಯ ಪ್ರಮಾಣ ಪತ್ರ, ಆಧಾರ್‍ಕಾರ್ಡ್, ಬ್ಯಾಂಕ್ ಖಾತೆ ಪುಸ್ತಕ ಪ್ರತಿ ಹಾಗೂ ಇತರೆ ದಾಖಲಾತಿಗಳೊಂದಿಗೆ ಸಂಬಂಧಿಸಿದ ಕಾಲೇಜು ಪ್ರಾಂಶುಪಾಲರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರದ ವಾಲ್ಮೀಕಿ ಭವನದ ತಾಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳ ಕಾರ್ಯಾಲಯಕ್ಕೆ ಭೇಟಿ ನೀಡಬಹುದು ಅಥವಾ ಮೊ.9110224569 ಗೆ ಸಂಪರ್ಕಿಸಬಹುದು ಎಂದು ತಾಲ್ಲೂಕು ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಗಾದಿಲಿಂಗಪ್ಪ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ