ಗುರುವಾರ, ಫೆಬ್ರವರಿ 1, 2024
ಫೆ.02 ರಂದು ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.01(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-2 ರ 11 ಕೆ.ವಿ ಫೀಡರ್ ವ್ಯಾಪ್ತಿಯಲ್ಲಿ ಸ್ಟ್ರೀಟ್ ಲೈಟ್ ಫೇಸ್ ಲೈನ್ ಆಳವಡಿಸುವ ಕಾರ್ಯ ಕೈಗೆತ್ತಿಕೊಳ್ಳುತ್ತಿರುವುದರಿಂದ ಫೆ.02 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ವಿವಿಧೆಡೆ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.
ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು:
ಎಫ್-33 ಫೀಡರ್ ವ್ಯಾಪ್ತಿಯ ಕೆಹೆಚ್‍ಬಿ ಕಾಲೋನಿ, ನೇತಾಜಿ ನಗರ, ಇನ್ನಾರೆಡ್ಡಿ ಲೇಔಟ್, ಇನ್‍ಫ್ಯಾಂಟ್ರಿ ರಸ್ತೆ, ವಾಸವಿ ಶಾಲೆ, ಕೊಳಗಲ್ ರಸ್ತೆ, ವಿದ್ಯಾನಗರ, ಕಲ್ಯಾಣಿ ಕಾಲೋನಿ, ಭತ್ರಿ ರೋಡ್, ಭತ್ರಿ, ಗುರು ಕಾಲೋನಿ, ಸತ್ಯವಾಣಿ ನಗರ, ಸಿದ್ದಾರ್ಥ ನಗರ, ವಿಯಾನಿ ಶಾಲೆ.
ಎಫ್-73 ಫೀಡರ್ ವ್ಯಾಪ್ತಿಯ ಬಸವನಕುಂಟೆ, ಕೋಟೆ ಪ್ರದೇಶ, ಕೌಲ್‍ಬಜಾರ್ 1ನೇ ಮತ್ತು 2ನೇ ಗೇಟ್, ಸಿದ್ದಾರ್ಥ ನಗರ, ಸುಧಾಕ್ರಾಸ್, ಓಪಿಡಿ ಪ್ರದೇಶಗಳು.
ಆದ್ದರಿಂದ ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
-------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ