ಗುರುವಾರ, ಫೆಬ್ರವರಿ 1, 2024

ಫೆ.02 ರಂದು ಕೆಕೆಆರ್‍ಡಿಬಿ ಯೋಜನೆಯಡಿ ಅನುಮೋದನೆಯಾದ ಕಾಮಗಾರಿಗಳ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಫೆ.01(ಕರ್ನಾಟಕ ವಾರ್ತೆ): ಕಲಬುರಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಅಧ್ಯಕ್ಷರಾದ ಡಾ.ಅಜಯ್ ಸಿಂಗ್ ಹಾಗೂ ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ಅಧ್ಯಕ್ಷತೆಯಲ್ಲಿ ಫೆ.02 ರಂದು ಮಧ್ಯಾಹ್ನ 01 ಗಂಟೆಗೆ ಜಿಪಂನ ನಜೀರ್ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ಯೋಜನೆಯಡಿ ಅನುಮೋದನೆಯಾದ ಕಾಮಗಾರಿಗಳ ಪ್ರಗತಿ ಪರಿಶೀಲನೆ ಸಭೆಯನ್ನು ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ. -----

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ