ಗುರುವಾರ, ಫೆಬ್ರವರಿ 1, 2024

ಫೆ.02 ರಂದು ಮೂರನೇಯ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆ

ಬಳ್ಳಾರಿ,ಫೆ.01(ಕರ್ನಾಟಕ ವಾರ್ತೆ): ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರ ಅಧ್ಯಕ್ಷತೆಯಲ್ಲಿ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (20 ಅಂಶ ಸೇರಿದಂತೆ) ಮೂರನೇಯ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯು ಫೆ.02 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಜಿಲ್ಲಾ ಪಂಚಾಯತ್‍ನ ನಜೀರ್‍ಸಾಬ್ ಸಭಾಂಗಣದಲ್ಲಿ ಏರ್ಪಡಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹಾಗೂ ಕರ್ನಾಟಕ (20 ಅಂಶ) ಅನುಷ್ಠಾನ ಸಮಿತಿಯ ಕಾರ್ಯದರ್ಶಿಗಳಾದ ರಾಹುಲ್ ಶರಣಪ್ಪ ಸಂಕನೂರ ಅವರು ತಿಳಿಸಿದ್ದಾರೆ. ---------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ