ಗುರುವಾರ, ಫೆಬ್ರವರಿ 1, 2024

ಫೆ.02 ರಂದು ಟೆಲಿ ಐಸಿಯು ಹಬ್ ಉದ್ಘಾಟನೆ ಕಾರ್ಯಕ್ರಮ

ಬಳ್ಳಾರಿ,ಫೆ.01(ಕರ್ನಾಟಕ ವಾರ್ತೆ): ನಗರದ ಜಿಲ್ಲಾ ಆಸ್ಪತ್ರೆಯಲ್ಲಿ ಟೆಲಿ ಐಸಿಯು ಹಬ್ ವಿಭಾಗದ ಉದ್ಘಾಟನೆ ಕಾರ್ಯಕ್ರಮ ಫೆ.01 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾ ಆಸ್ಪತ್ರೆಯಲ್ಲಿ ಹಮ್ಮಿಕೊಳ್ಳಲಾಗಿದೆ. ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರಾದ ದಿನೇಶ್ ಗುಂಡುರಾವ್ ಅವರು ವರ್ಚುವಲ್ ಮೂಲಕ ಉದ್ಘಾಟನೆ ನೆರವೇರಿಸುವರು. ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ನಾಗೇಂದ್ರ, ಜಿಲ್ಲಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಅವರು ಉಪಸ್ಥಿತರಿರುವರು ಎಂದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಎನ್.ಬಸರೆಡ್ಡಿ ಅವರು ತಿಳಿಸಿದ್ದಾರೆ. --------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ