ಮಂಗಳವಾರ, ಫೆಬ್ರವರಿ 6, 2024
ಫೆ.07 ರಂದು ಬಳ್ಳಾರಿ ನಗರ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ವ್ಯತ್ಯಯ
ಬಳ್ಳಾರಿ,ಫೆ.06(ಕರ್ನಾಟಕ ವಾರ್ತೆ):
ನಗರ ಜೆಸ್ಕಾಂ ಉಪವಿಭಾಗ-2 ರ ವ್ಯಾಪ್ತಿಯ 110/11ಕೆ.ವಿ ಸೋಮಸಮುದ್ರ ವಿದ್ಯುತ್ ಉಪ-ಕೇಂದ್ರದ ನಿರ್ವಹಣೆ ಕಾರ್ಯವನ್ನು ಕೈಗೊಳ್ಳುತ್ತಿರುವುರಿಂದÀ ಫೆ.07 ಬೆಳಿಗ್ಗೆ 08 ಗಂಟೆಯಿಂದ ಸಂಜೆ 06 ಗಂಟೆಯವರೆಗೆ ಎಫ್-6, ಎಫ್-10 ಹಾಗೂ ಎಫ್-14 ಫೀಡರ್ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-2 ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅಶೋಕ ರೆಡ್ಡಿ ಅವರು ತಿಳಿಸಿದ್ದಾರೆ.
*ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು:*
ಎಫ್-6 ಫೀಡರ್ ವ್ಯಾಪ್ತಿಯ ತಾಳೂರು ರೋಡ್, ಸ್ನೇಹ ಕಾಲೋನಿ, ಶ್ರೀನಗರ, ರೇಣುಕಾ ನಗರ, ಭಗತ್‍ಸಿಂಗ್ ನಗರ, ಕನ್ನಡ ನಗರ, ಮಹಾನಂದಿ ಕೊಟ್ಟಂ, ಪಾರ್ವತಿ ನಗರ, ಎಸ್.ಪಿ.ಸರ್ಕಲ್, ಶಾಸ್ತ್ರೀ ನಗರ, ಬ್ಯಾಂಕ್ ಕಾಲೋನಿ, ಬಸವನಕುಂಟೆ, ಸಿರುಗುಪ್ಪ ರೋಡ್, ರಾಮ ನಗರ, ಹವಂಭಾವಿ.
ಎಫ್-10 ಫೀಡರ್ ವ್ಯಾಪ್ತಿಯ ಅಶೋಕ ನಗರ, ಹವಂಭಾವಿ, ಟಿ.ಎಂ.ಜಿ ಲೇಔಟ್, ರಾಮ ನಗರ, ಜಯನಗರ, ಗಾಯತ್ರಿ ನಗರ, ಭುವನಗಿರಿ ಕಾಲೋನಿ, ವೀರನಗೌಡ ಕಾಲೋನಿ, ಗಣೇಶ ನಗರ. ಎಫ್-14 ಫೀಡರ್ ವ್ಯಾಪ್ತಿಯ ಜಿಲ್ಲಾ ಕೋರ್ಟ್ ಸಂಕೀರ್ಣ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಮತ್ತು ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ