ಗುರುವಾರ, ಫೆಬ್ರವರಿ 22, 2024
ಮಾ.09 ರಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ರಾಷ್ಟ್ರೀಯ ಲೋಕ ಅದಾಲತ್
ಬಳ್ಳಾರಿ,ಫೆ.22(ಕರ್ನಾಟಕ ವಾರ್ತೆ):
ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಇವರ ನಿರ್ದೇಶನದಂತೆ, ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದಿಂದ ಮಾರ್ಚ್ 09 ರಂದು ರಾಷ್ಟ್ರೀಯ ಲೋಕ ಅದಾಲತ್‍ನ್ನು ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಕಚೇರಿಯಲ್ಲಿ ಏರ್ಪಡಿಸಲಾಗಿದೆ.
ಅದಾಲತ್‍ನಲ್ಲಿ ಬಾಕಿ ಇರುವ ಪ್ರಕರಣಗಳಲ್ಲಿ ಉಭಯ ಪಕ್ಷಗಾರರು ಹಾಗೂ ವಕೀಲರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಬಹುದು ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷ ಎನ್.ತಿಪ್ಪೇಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--------
ಇದಕ್ಕೆ ಸಬ್ಸ್ಕ್ರೈಬ್ ಆಗಿ:
ಕಾಮೆಂಟ್ಗಳನ್ನು ಪೋಸ್ಟ್ ಮಾಡಿ (Atom)
ಕಾಮೆಂಟ್‌ಗಳಿಲ್ಲ:
ಕಾಮೆಂಟ್ ಪೋಸ್ಟ್ ಮಾಡಿ