ಶುಕ್ರವಾರ, ಫೆಬ್ರವರಿ 9, 2024

ಫೆ.10 ರಂದು ವಿದ್ಯುತ್ ವ್ಯತ್ಯಯ

ಬಳ್ಳಾರಿ,ಫೆ.09(ಕರ್ನಾಟಕ ವಾರ್ತೆ): ನಗರ ಜೆಸ್ಕಾಂ ಉಪವಿಭಾಗ-1ರ ವ್ಯಾಪ್ತಿಗೆ ಬರುವ 110/11ಕೆ.ವಿ ಸೌತ್ ವಿದ್ಯುತ್ ವಿತರಣ ಕೇಂದ್ರದಿಂದ ವಿದ್ಯುತ್ ಸರಬರಾಜು ಆಗುವ ಎಫ್-47 ಫೀಡರ್‍ನ ವಿದ್ಯುತ್ ಪರಿವರ್ತಕ ಸ್ಥಳಾಂತರ ಕಾಮಗಾರಿ ಕೈಗೆತ್ತಿಕೊಳ್ಳುತ್ತಿರುವುದರಿಂದ ಫೆ.10 ರಂದು ಬೆಳಿಗ್ಗೆ 10 ರಿಂದ ಸಂಜೆ 05 ಗಂಟೆವರೆಗೆ ನಗರದ ಆಂಧ್ರಾಳ್ ರಸ್ತೆ, ಕೊಲಮಿ ಚೌಕ್, ಮಿಲ್ಲರ್‍ಪೇಟೆ ಸೇರಿದಂತೆ ಇನ್ನೂ ಮುಂತಾದ ಏರಿಯಾಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ವಿದ್ಯುತ್ ಗ್ರಾಹಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಸಹಾಯಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. -------

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ